ಕರ್ನಾಟಕದ; ಇನ್ನೂ ನಾಲ್ಕು ದಿನ ಮಳೆ ಮುನ್ಸೂಚನೆ

ಬೆಂಗಳೂರು, ಡಿಸೆಂಬರ್ 08; ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ ಚುಮು ಚುಮು ಚಳಿಯ ಅನುಭವವಾಗುತ್ತಿದೆ. ಆದರೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ 4 ದಿನಗಳ ಕಾಲ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಈ ಬಾರಿಯ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಿದೆ. ಸೆಪ್ಟೆಂಬರ್‌ ತನಕ ಸುರಿಯಬೇಕಿದ್ದ ನೈಋತ್ಯ ಮುಂಗಾರು ಮಳೆ ಅಕ್ಟೋಬರ್‌ನಲ್ಲಿಯೂ ಮುಂದುವರೆದಿತ್ತು. ಬಳಿಕ ವಿವಿಧ ಚಂಡಮಾರುತಗಳ ಪ್ರಭಾವದಿಂದ ಡಿಸೆಂಬರ್ ತನಕ ಮಳೆಯಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗ ಮಳೆಯ ಅಬ್ಬರ ಕಡಿಮೆಯಾಗಿದೆ. ಮುಂಜಾನೆ ಚುಮು ಚುಮು ಚಳಿ ಇದ್ದು, ಇಬ್ಬನಿಯನ್ನು ಕಾಣಬಹುದಾಗಿದೆ. ಮಳೆಯ ಅಬ್ಬರ ಕಡಿಮೆಯಾಗಿದ್ದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

Light Rain In South Interior Karnataka For Next Three Days

4 ದಿನ ಮಳೆ; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

'ಜವಾದ್' ಚಂಡಮಾರುತದ ಅಬ್ಬರ ದೇಶದಲ್ಲಿ ಕಡಿಮೆಯಾಗಿದೆ. ಆದರೆ ಸೈಕ್ಲೋನಿಕ್ ಮಾರುತಗಳ ಪ್ರಭಾವದಿಂದ ವಿವಿಧ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕದಲ್ಲಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ತುಂತುರು ಮಳೆಯ ನಿರೀಕ್ಷೆ ಇದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಸಾಧಾರಣ ಮಳೆ ನಿರೀಕ್ಷೆ ಇದೆ.

ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮೈಸೂರು ಜಿಲ್ಲೆಗಳಲ್ಲಿ ಬುಧದವಾರ ಮಳೆಯಾಗುವ ನಿರೀಕ್ಷೆ ಇದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಸಾಧಾರಣ ಮಳೆ ನಿರೀಕ್ಷೆ ಇದ್ದು, ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಇರಲಿವೆ.

ಡಿಸೆಂಬರ್ 9ರ ತನಕ ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಆಂಧ್ರ ಪ್ರದೇಶ, ತಮಿಳುನಾಡು, ಕೇರಳದ ಕೆಲವು ಭಾಗಗಳಲ್ಲಿ ಮಿಂಚಿನ ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ.

ವಿವಿಧ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದು, ಜಲಾಶಯಗಳ ಒಳಹರಿವು ಸಹ ಇಳಿಮುಖವಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿಯೇ ರಾಜ್ಯದ ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ಬೇಸಿಗೆಯಲ್ಲಿ ನೀರಿನ ಕೊರತೆಯ ಭೀತಿ ದೂರವಾಗಿದೆ.

ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದ ಪ್ರದೇಶದಲ್ಲಿ ಉಷ್ಣಾಂಶ ಕುಸಿಯಲಿದೆ. ಉಳಿದ ರಾಜ್ಯಗಳಲ್ಲಿ ಶುಷ್ಕ ಹವಾಮಾನ ಇರಲಿದೆ. ಅಸ್ಸಾಂ, ಮೇಘಾಲಯ, ಬಿಹಾರ, ಒಡಿಶಾ, ಪಂಜಾಬ್, ಹರ್ಯಾಣ, ರಾಜಸ್ಥಾನ ರಾಜ್ಯಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಸಾಧಾರಣ ಮಳೆ, ಹಿಮಾಪಾತದ ನಿರೀಕ್ಷೆ ಇದೆ. ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕೇರಳ ಕರಾವಳಿ ಭಾಗದಲ್ಲಿ ಬುಧವಾರ ಮತ್ತು ಗುರುವಾರ ಮಳೆಯ ಮುನ್ಸೂಚನೆ ನೀಡಲಾಗಿದೆ.

ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಬುಧವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಮಳೆಯಾಗುತ್ತಲೇ ಇದೆ. ನಾಗಪಟ್ಟಿನಂ, ಕಾರೈಕಲ್, ತಿರುವರೂರ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯನ್ನು ಕೊಡಲಾಗಿದೆ.

ಚಳಿಯ ತೀವ್ರತೆ ಕಡಿಮೆ; ಚಂಡಮಾರುತಗಳ ಪ್ರಭಾವದಿಂದಾಗಿ ಮಳೆಯಾಗುತ್ತಿದ್ದು ಚಳಿಗಾಲ ಇಲ್ಲವೇ ಎಂಬ ಪ್ರಶ್ನೆ ಎದುರಾಗಿದೆ. ಹವಾಮಾನ ಏರುಪೇರು ಹಿನ್ನಲೆಯಲ್ಲಿ ಈ ವರ್ಷ ಚಳಿಯ ತೀವ್ರತೆ ಕಡಿಮೆ ಇರಲಿದೆ ಎಂಬ ಮಾಹಿತಿಯೂ ಇದೆ.

ಉತ್ತರ ಭಾರತದ ರಾಜ್ಯಗಳಲ್ಲಿಯೇ ಇನ್ನೂ ಚಳಿಗಾಲ ಆರಂಭವಾಗಿಲ್ಲ. ಡಿಸೆಂಬರ್ 21ರ ತನಕ ಕರ್ನಾಟಕದಲ್ಲಿ ಇದೇ ಮಾದರಿಯ ವಾತಾವರಣ ಇರಲಿದ್ದು, ಬಳಿಕ ಉಷ್ಣಾಂಶದಲ್ಲಿ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+