ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಲ್ಲಿ ಇಂದು ಸಾಧಾರಣ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 09; ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 11ರ ತನಕ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.

'ಜವಾದ್' ಚಂಡಮಾರುತದ ತೀವ್ರತೆ ಕಡಿಮೆಯಾಗಿದ್ದು ವಿವಿಧ ರಾಜ್ಯಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕರ್ನಾಟಕದ ಮಲೆನಾಡು ಭಾಗದಲ್ಲಿ ಎರಡು ದಿನ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ; ಇನ್ನೂ ನಾಲ್ಕು ದಿನ ಮಳೆ ಮುನ್ಸೂಚನೆ ಕರ್ನಾಟಕದ; ಇನ್ನೂ ನಾಲ್ಕು ದಿನ ಮಳೆ ಮುನ್ಸೂಚನೆ

ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಭಾಗದಲ್ಲಿ ಇಂದು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ನಿರಂತರ ಅಕಾಲಿಕ ಮಳೆ: ದಕ್ಷಿಣ ಭಾರತದಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ ನಿರಂತರ ಅಕಾಲಿಕ ಮಳೆ: ದಕ್ಷಿಣ ಭಾರತದಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಸಂಜೆಯ ವೇಳೆಗೆ ನಗರದಲ್ಲಿ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ.

rain

ಕರ್ನಾಟಕ; ಮಳೆ ಅಬ್ಬರ ಕಡಿಮೆ, ತುಂತುರು ಮಳೆ ಸಾಧ್ಯತೆ ಕರ್ನಾಟಕ; ಮಳೆ ಅಬ್ಬರ ಕಡಿಮೆ, ತುಂತುರು ಮಳೆ ಸಾಧ್ಯತೆ

7 ರಾಜ್ಯಗಳಲ್ಲಿ ಮಳೆ; ಭಾರತದ 7 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಗುರುವಾರ ಮಳೆಯ ಮುನ್ಸೂಚನೆ ನೀಡಲಾಗಿದೆ. ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕೇರಳ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಮಣಿಪುರ, ಒಡಿಶಾ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ದೇಶದ ಹಲವು ರಾಜ್ಯಗಳಲ್ಲಿ ಶುಷ್ಕ ವಾತಾವರಣ ಮುಂದುವರೆಯಲಿದೆ. ಗುರುವಾರ ರಾಜಸ್ಥಾನ, ಅಸ್ಸಾಂ, ಮೇಘಾಲಯ, ಬಿಹಾರ, ಪಶ್ಚಿಮ ಬಂಗಾಳ, ಪಂಜಾಬ್, ಹರ್ಯಾಣ ರಾಜ್ಯಗಳಲ್ಲಿ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ.

ತಮಿಳುನಾಡಿನ ರಾಜಧಾನಿ ಚೆನ್ನೈ ಮತ್ತು ಅದರ ಅಕ್ಕ-ಪಕ್ಕದ ಜಿಲ್ಲೆಗಳಲ್ಲಿ ಗುರುವಾರ ಮಳೆಯ ಮುನ್ಸೂಚನೆ ಇದೆ. ದೇಶದ ವಿವಿಧ ರಾಜ್ಯಗಳಲ್ಲಿ ಡಿಸೆಂಬರ್ 11ರ ತನಕ ಮಳೆಯಾಗಲಿದ್ದು, ಬಳಿಕ ಶೀತ ವಾತಾವರಣ ಮುಂದುವರೆಯಲಿದೆ.

ನಿಟ್ಟುಸಿರು ಬಿಟ್ಟ ರೈತರು; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅಕಾಲಿಕ ಮಳೆಯ ಅಬ್ಬರ ಕಡಿಮೆಯಾಗಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಅಡಕೆ, ಭತ್ತದ ಕಟಾವು ಕಾರ್ಯ ಜೋರಾಗಿದೆ. ಜಿಲ್ಲಾಡಳಿತಗಳು ಸಹ ಭತ್ತ ಖರೀದಿಗೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಿವೆ.

ನವೆಂಬರ್ ತಿಂಗಳಿನಲ್ಲಿ ಸುರಿದ ಅಕಾಲಿಕ ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ಪರಿಹಾರವನ್ನು ನೀಡಲಾಗುತ್ತಿದೆ. ಕೊಪ್ಪಳ ಜಿಲ್ಲೆಯ ರೈತರಿಗೆ ಪರಿಹಾರಧನವನ್ನು ನೀಡಲಾಗುತ್ತಿದ್ದು, ಇಲ್ಲಿಯವರೆಗೆ 10054 ರೈತರ ಖಾತೆ ಪರಿಹಾರ ಜಮೆಯಾಗಿದೆ. ಅಕಾಲಿಕ ಮಳೆಯಿಂದಾಗಿ ಕೊಪ್ಪಳ ಜಿಲ್ಲೆಯಲ್ಲಿ 43899 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.

ಕೃಷಿ ಬೆಳೆ ಹಾನಿಗೊಳಗಾದ ಜಮೀನುಗಳಿಗೆ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಜಂಟಿ ಸಮೀಕ್ಷೆಯನ್ನು ಮಾಡುತ್ತಿದ್ದು, ಪರಿಹಾರ ತಂತ್ರಾಂಶದಲ್ಲಿ 46130 ಬೆಳೆ ನಷ್ಟ ಸಂಭವಿಸಿದ ರೈತರ ಮಾಹಿತಿ ಸೇರ್ಪಡೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ 2021-22ನೇ ಸಾಲಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ 1940 ರೂಪಾಯಿ ಹಾಗೂ 'ಎ' ಗ್ರೇಡ್ ಭತ್ತಕ್ಕೆ ಪ್ರತಿ ಕ್ವಿಂಟಾಲ್‍ಗೆ 1960 ರೂ. ಗಳನ್ನು ಕರ್ನಾಟಕ ಸರ್ಕಾರವು ನಿಗದಿಪಡಿಸಿದೆ.

Recommended Video

ಬಿಪಿನ್ ರಾವತ್ ನಿಧನದಿಂದ ತೆರವಾದ CDS ಹುದ್ದೆ ಅಲಂಕರಿಸೋದು ಯಾರು? | Oneindia Kannada

ಭತ್ತವನ್ನು ಖರೀದಿಗೆ ಕೇಂದ್ರಕ್ಕೆ ರೈತರು ತರುವ ಮೊದಲು ತಮ್ಮ ಪ್ರೂಟ್ಸ್ ಗುರುತಿನ ಸಂಖ್ಯೆಯಲ್ಲಿ ಬೆಳೆ ಸಮೀಕ್ಷೆ ಮಾಹಿತಿ ನಮೂದಾಗಿರುವ ಬಗ್ಗೆ ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ಖಚಿತಪಡಿಸಿಕೊಳ್ಳಬೇಕು. ನಂತರ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ರೈತರು ಸರ್ಕಾರದ ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

English summary
The India Meteorological Department (IMD) has predicted light rain in south interior Karnataka till December 11, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X