Karnataka Rain Alert: ಕರ್ನಾಟಕದ ಈ ಭಾಗದಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು, ಮಾರ್ಚ್ 18: ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರು ಮುಂದಿನ 3 ಗಂಟೆಗಳಲ್ಲಿ ಮೈಸೂರಿನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಚ್ಚರಿಕೆಯನ್ನು ನೀಡಿದೆ.
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಬಂದಿರುವುದರಿಂದ ಮತ್ತು ಮೋಡ ಕವಿದ ವಾತಾವರಣ ಇರುವುದರಿಂದ ದಕ್ಷಿಣ ಕರ್ನಾಟಕದಲ್ಲಿ ಬಿಸಿಲು ಕಡಿಮೆಯಾಗಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ಮಳೆ ಬರಬಹುದು. ಆದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಾತ್ರ ತೀವ್ರ ಬಿಸಿಲು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಾಗಿರುವ ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆಯಾಗುವ ಮುನ್ಸೂಚನೆಯನ್ನ ನೀಡಿದೆ.

ಕರ್ನಾಟಕದಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೆಲವೇ ಕೆಲವು ಕಡೆ ಮಳೆಯಾಗಿದೆ. ಈ ಮಳೆಯ ಬಳಿಕ ಆ ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಎಲ್ಲೆಡೆ ಬಿಸಿಲ ತಾಪ ಹೆಚ್ಚಾಗಿದೆ. ಸರಗೂರು ಹಾಗೂ ಎಚ್ಡಿ ಕೋಟೆಯಲ್ಲಿ ಮಳೆಯಾಗಿದೆ. ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಒಣಹವೆ ಮುಂದುವರೆಯಲಿದೆ
ಮುಂದಿನ ಒಂದೆರಡು ದಿನಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಒಣಹವೆ ಮುಂದುವರೆಯಲಿದೆ. ಇನ್ನೂ ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯೂ ಮಾಹಿತಿ ನೀಡಿದೆ.
ಮುಂದಿನ ಐದು ದಿನಗಳಲ್ಲಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದುರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾದ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications