Karnataka Weather: ನಾಳೆ ಉತ್ತರ ಕರ್ನಾಟಕ ಭಾಗಕ್ಕೆ ಮಳೆ, ಉಳಿದೆಡೆ ಜಿಲ್ಲೆಗಳಲ್ಲಿ ಒಣ ಹವೆ: IMD ಮುನ್ಸೂಚನೆ
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಿಸಿಲು ಕಂಡು ಬರಲಿದೆ. ಮಳೆ ಆಗುವ ಜಿಲ್ಲೆಗಳ ಮಾಹಿತಿ ತಿಳಿಯಿರಿ.
ಬೆಂಗಳೂರು, ಮಾರ್ಚ್ 08: ವಾತಾವರಣದಲ್ಲಿ ಉಂಟಾಗುತ್ತಿರುವ ಅಕಾಲಿಕ ವೈಪರಿತ್ಯಗಳಿಂದಾಗಿ ಬೇಸಿಗೆಯಲ್ಲೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸ್ಥಿತಿ ನಿರ್ಮಾಣವಾಗಿದೆ.
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ 24ಗಂಟೆಯಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಕರ್ನಾಟಕ ಕೇಂದ್ರವು ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಬೀಳುವ ಸಾಧ್ಯತೆ ಇದೆ. ಇದೇ ಭಾಗದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಇದರೊಂದಿಗೆ ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಈಗಾಗಲೇ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಹಾಗೂ ದಾವಣಗೆರೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ವಿವಿಧ ರಾಜ್ಯಗಳಲ್ಲಿ ಮಳೆ, ತಾಪಮಾನ ಇಳಿಕೆಯ ವಿವರ
ಇನ್ನೂ ದೇಶದ ವಿವಿಧ ರಾಜ್ಯಗಳು ಹವಾಮಾನ ಮುನ್ಸೂಚನೆ ನೋಡುವುದಾರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದರೆ, ಗುಜರಾತ್, ರಾಜಸ್ಥಾನ, ಮರಾಠವಾಡ ಹಾಗೂ ಮಹಾರಾಷ್ಟ್ರದಲ್ಲಿ ಆಲಿಕಲ್ಲು ಸಹಿತ ಮಳೆ ದಾಖಲಾಗಿದೆ. ಮಧ್ಯ ಭಾರತ, ಮಹಾರಾಷ್ಟ್ರ ಮತ್ತು ಗುಜರಾತ್‌ನ ಬಿಟ್ಟರೆ ಬೇರೆಲ್ಲೂ ತಾಪಮಾನ ಏರಿಳಿತದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಲಾಗಿದೆ.
ದೇಶದ ಪೂರ್ವ ದಕ್ಷಿಣ ಪೆನಿನ್ಸುಲರ್ ನಲ್ಲಿ ಗರಿಷ್ಠ 35 -38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡು ಬಂದಿದೆ. ಇನ್ನೂ ಪೂರ್ವ ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರ ರಾಜ್ಯದಲ್ಲಿ ಗರಿಷ್ಠ ತಾಪಮಾನ 31-35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಪಶ್ಚಿಮ ಉತ್ತರ ಪ್ರದೇಶದಲ್ಲಿ 28 ರಿಂದ 31 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ.
ಮುಂದಿನ 24 ಗಂಟೆಯಲ್ಲಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ನಿರೀಕ್ಷೆ ಇದೆ. ಇಷ್ಟೇ ಅಲ್ಲದೇ ನಾಳೆ ಮತ್ತು ನಾಡಿದ್ದು (ಮಾ. 9,10) ಉತ್ತರ ಒಡಿಶಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ಕೆಲವು ಪ್ರದೇಶಗಳಲ್ಲಿ ಒಣಹವೆ ಕಡಿಮೆಯಾಗಲಿದೆ. ಗುಜರಾತ್ ನಲ್ಲಿ ಇನ್ನೆರಡು ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿಲ್ಲ, ಆದರೆ ಮುಂದಿನ 3 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಂಭವವಿದೆ.












Click it and Unblock the Notifications