ಹವಾಮಾನ ವರದಿ: ಕರಾವಳಿಯಲ್ಲಿ ಮುಂದುವರೆಯಲಿದೆ ಮಳೆ
Recommended Video

ಬೆಂಗಳೂರು, ಜೂನ್ 20: ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹೊರತುಪಡಿಸಿ ದಕ್ಷಿಣ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ. ಗಾಳಿಯೂ ಸಹ ಜೊತೆಗೂಡಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ, ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಕೊಡಗು ಹಾಸನದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ. ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಯ ಇದೆ.

ಐಎಂಡಿ ವರದಿ ಪ್ರಕಾರ ಕೊಂಕನ, ಗೋವಾ, ವಿಧರ್ಭ, ಛತ್ತೀಸ್‌ಘಡ, ಪಶ್ಚಿಮ ಬಂಗಾಳ ಅಸ್ಸಾಂ, ಅಂಡಮಾನ್ ನಿಕೋಬಾರ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೇರಳ ಮತ್ತು ಕರ್ನಾಟಕದಲ್ಲಿ ಶೀಥ ಹವೆ ಮುಂದುವರೆಯಲಿದ್ದು ಅಲ್ಲಲ್ಲಿ ಮಳೆಯಾಗುತ್ತದೆ.
ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆದರೆ ಜೂನ್ 21, 21 ರಂದು ನಗರದಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ.
ಗೋವಾ, ಕರಾವಳಿ ಕರ್ನಾಟಕ, ಕೇರಳ, ಮಧ್ಯ ಮಹಾರಾಷ್ಟ್ರ , ಅಸ್ಸಾಂ, ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.












Click it and Unblock the Notifications