ಹೈಕೋರ್ಟ್ ಹಂಗಾಮಿ ನ್ಯಾಯಮೂರ್ತಿಯಾಗಿ ಲಿಂಗಪ್ಪ ನಾರಾಯಣಸ್ವಾಮಿ ನೇಮಕ
ಬೆಂಗಳೂರು, ಜನವರಿ 17: ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ನ್ಯಾಯಮೂರ್ತಿಯಾಗಿ ಲಿಂಗಪ್ಪ ನಾರಾಯಣಸ್ವಾಮಿ ಅವರು ರಾಷ್ಟ್ರಪತಿಗಳಿಂದ ನೇಮಕಗೊಂಡಿದ್ದಾರೆ.
ರಾಜ್ಯ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿದ್ದ ದಿನೇಶ್ ಮಹೇಶ್ವರಿ ಅವರು, ಸುಪ್ರಿಂಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡ ಕಾರಣ ಅವರ ಸ್ಥಾನಕ್ಕೆ ಹಂಗಾಮಿಯಾಗಿ ಲಿಂಗಪ್ಪ ನಾರಾಯಣಸ್ವಾಮಿ ಅವರು ನೇಮಕಗೊಂಡಿದ್ದಾರೆ.
ಇವರು ಹಂಗಾಮಿ ಆಗಿ ಮಾತ್ರವೇ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಪೂರ್ಣಪ್ರಮಾಣದ ನ್ಯಾಯಮೂರ್ತಿಗಳನ್ನು ರಾಷ್ಟ್ರಪತಿ ರಮಾನಾಥ ಕೋವಿಂದ್ ಅವರು ನೇಮಕ ಮಾಡಲಿದ್ದಾರೆ.

1987 ರಲ್ಲಿ ವಕೀಲ ವೃತ್ತಿ ಆರಂಭಿಸಿದ ಲಿಂಗಪ್ಪ ಅವರು, 1995 ರಿಂದ 1999 ರವರೆಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ಲೀಡರ್ ಆಗಿ ವೃತ್ತಿ ನಿರ್ವಹಿಸಿದ್ದಾರೆ. 2007 ರಲ್ಲಿ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಲಿಂಗಪ್ಪ ಆ ನಂತರ 2009 ರಲ್ಲಿ ಹೈಕೋರ್ಟ್‌ನ ಖಾಯಂ ಜಡ್ಜ್ ಆಗಿ ನೇಮಕವಾದರು. ಇದೀಗ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.












Click it and Unblock the Notifications