ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಲಿಂಗಾಯತ-ವೀರಶೈವ ಎರಡೂ ಒಂದೇ, ಮಹಾಸಭಾ ಒಮ್ಮತದ ನಿರ್ಣಯ
ಬೆಂಗಳೂರು, ಆಗಸ್ಟ್ 2: ಲಿಂಗಾಯತ ಮತ್ತು ವೀರಶೈವ ಎರಡೂ ಒಂದೇ ಎಂದು 'ಅಖಿಲ ಭಾರತ ವೀರಶೈವ ಮಹಾಸಭಾ' ಒಮ್ಮತದ ನಿರ್ಣಯ ತೆಗೆದುಕೊಂಡಿದೆ.
ಲಿಂಗಾಯತ vs ವೀರಶೈವ : ಎರಡೂ ಅಪ್ಪಟ ಜಂಗಮ ತತ್ವ
ವೀರಶೈವ-ಲಿಂಗಾಯತರಲ್ಲಿ ಸ್ವತಂತ್ರ ಧರ್ಮಕ್ಕೆ ಸಂಬಂಧಿಸಿದಂತೆ ತಿಕ್ಕಾಟ ತೀವ್ರಗೊಂಡ ಹಿನ್ನಲೆಯಲ್ಲಿ ಇಂದು ಅಖಿಲ ಭಾರತ ವೀರಶೈವ ಮಹಾಸಭಾ ಬೆಂಗಳೂರಿನ ಮಹತ್ವದ ಸಭೆ ಸೇರಿತ್ತು. ಈ ಸಭೆಯಲ್ಲಿ ಎರಡೂ ಲಿಂಗಾಯತ ವೀರಶೈವ ಎರಡೂ ಪಂಗಡಗಳು ಒಂದೇ ಎಂಬ ತೀರ್ಮಾನಕ್ಕೆ ಬರಲಾಗಿದೆ.
ಈ ಸಭೆಯಲ್ಲಿ ಸೇರಲಿದ್ದು 65 ಕಾರ್ಯಕಾರಿಣಿ ಸದಸ್ಯರು, ರಾಜ್ಯದ 30 ಜಿಲ್ಲೆಗಳ ಅಧ್ಯಕ್ಷರು, ತಮಿಳುನಾಡು, ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ, ತೆಲಂಗಾಣದ ಅಧ್ಯಕ್ಷರು ಭಾಗವಹಿಸಿದ್ದರು.
ಈ ಹಿಂದೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಆಗಿರುವ ಬೆಳವಣಿಗೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
English summary
The All India Veerashaiva Mahasabha has agreed on the consensus that Lingayat and Veerashaiva are the same.