ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಚಮಸಾಲಿ ಮೀಸಲಾತಿ; ಫೆ.3ಕ್ಕೆ ಕೋರ್ಟ್‌ಗೆ ಆಯೋಗದ ವರದಿ ಸಲ್ಲಿಕೆ

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿಯನ್ನು ಸರ್ಕಾರ ಹೈಕೋರ್ಟ್‌ಗೆ ಸಲ್ಲಿಕೆ ಮಾಡಲಿದೆ.

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಜನವರಿ 31; ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಸರ್ಕಾರ ಫೆಬ್ರವರಿ 3ರಂದು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಲಿದೆ.

ಹಾಗೆಂದು ಸರ್ಕಾರವೇ ಸೋಮವಾರ ನ್ಯಾಯಾಲಯಕ್ಕೆ ತಿಳಿಸಿದೆ. ಬೆಂಗಳೂರಿನ ಡಿ. ಜಿ. ರಾಘವೇಂದ್ರ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರವೆಂದು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸಿಗುವ 5 ಸೌಲಭ್ಯಗಳು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸಿಗುವ 5 ಸೌಲಭ್ಯಗಳು

ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆಬ್ರವರಿ 3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು. ಹಾಗಾಗಿ ನ್ಯಾಯಪೀಠವು ವಿಚಾರಣೆಯನ್ನು ಅಂದಿಗೆ ಮುಂದೂಡಿತು.

backward commission

ವೀರಶೈವ ಲಿಂಗಾಯತ ಸೇರಿದಂತೆ 2ಎ ವಂಚಿತರಾದ ಎಲ್ಲ ಸಮುದಾಯಕ್ಕೆ ಮೀಸಲಾತಿ ಸಿಗಲಿ: ಮುರುಗೇಶ್ ನಿರಾಣಿವೀರಶೈವ ಲಿಂಗಾಯತ ಸೇರಿದಂತೆ 2ಎ ವಂಚಿತರಾದ ಎಲ್ಲ ಸಮುದಾಯಕ್ಕೆ ಮೀಸಲಾತಿ ಸಿಗಲಿ: ಮುರುಗೇಶ್ ನಿರಾಣಿ

ಪಂಚಮಸಾಲಿ ಸಮುದಾಯವು 2-ಎ ಮೀಸಲಾತಿಗಾಗಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ವರದಿ ಪಡೆದಿದ್ದ ರಾಜ್ಯ ಸರ್ಕಾರ, ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಿತ್ತು. ಆ ವೇಳೆ ಒಕ್ಕಲಿಗ ಸಮುದಾಯಕ್ಕೆ ಹೊಸದಾಗಿ ಸೃಷ್ಟಿಸಿರುವ ಪ್ರವರ್ಗ 'ಸಿ' ಗೆ ಮತ್ತು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 'ಡಿ' ಗೆ ಸೇರ್ಪಡೆ ಮಾಡಲು ತೀರ್ಮಾನಿಸಿತ್ತು.

ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ್ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ್

ಅರ್ಜಿಯನ್ನು 2023ರ ಜನವರಿ 12ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಪಂಚಮಸಾಲಿ ಸೇರಿದಂತೆ ಲಿಂಗಾಯತ ಉಪ ಜಾತಿಗಳನ್ನು 3-ಬಿ ಮೀಸಲಾತಿ ಪ್ರವರ್ಗದಿಂದ 2-ಡಿ ಪ್ರವರ್ಗಕ್ಕೆ ಬದಲಿಸುವ ಪ್ರವರ್ಗಗಳ ಮರು ವಿಂಗಡಣೆ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ನಿರ್ದೇಶಿಸಿತ್ತು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ನಿರ್ದೇಶಿಸಿತ್ತು.

English summary
Lingayat panchamasali reservation issue. Karnataka government will submit backward commission interim report to Karnataka high court on February 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X