Get Updates
Get notified of breaking news, exclusive insights, and must-see stories!

ಲಿಂಗಾಯತ ಸಮುದಾಯಕ್ಕೆ ಬಜೆಟ್‌ ಮುನ್ನವೇ ಸಿಎಂ ಸಿದ್ದರಾಮಯ್ಯ ಭರವಸೆ

ಲಿಂಗಾಯತ ಸಮುದಾಯದ ಪ್ರಮುಖ ಸ್ವಾಮೀಜಿಗಳು, ಸಚಿವರು, ಶಾಸಕರು ಹಾಗೂ ಸಮಾಜದ ಮುಖಂಡರ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದರು. ಲಿಂಗಾಯತ ಸಮುದಾಯದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿ ಮನವಿಪತ್ರ ಕೂಡ ಸಲ್ಲಿಸಿದರು. ಈ ವೇಳೆ ಸಿದ್ದರಾಮಯ್ಯ ಅವರು ಲಿಂಗಾಯತ ಸಮುದಾಯಕ್ಕೆ ಸಿಹಿಸುದ್ದಿಯನ್ನೂ ನೀಡಿದರು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ ಎಂದು ಸಿದ್ದರಾಮಯ್ಯ ಹೇಳಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮ ಸರ್ಕಾರ. ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯವಿರುವುದನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

Lingayat Seers And Ministers Meet CM Siddaramaiah At Cauvery Residence

ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸುವುದಿಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೆ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ. ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು, ಗೊಬ್ಬರ ಹಾಕುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಜಾತ್ಯತೀತ, ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕವಾಗಿದೆ. ಗೋರುಚ ಅವರ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪವು ಮೊದಲ ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡರು.

ರಾಜ್ಯ ಬಜೆಟ್‌ ಮಂಡನೆ ಸಮೀಪಿಸುತ್ತಿರುವ ಹಿನ್ನೆಲೆ ವಿವಿಧ ಸಮುದಾಯಗಳು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿವೆ. ಅದರಂತೆ ಇಂದು ಲಿಂಗಾಯತ ಸಮುದಾಯವರು ಕೂಡ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರು ಕೂಡ ಲಿಂಗಾಯತ ಸಮುದಾಯಕ್ಕೆ ಏನೆಲ್ಲ ಸಾಧ್ಯವೋ ಆ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಬಜೆಟ್‌ನಲ್ಲಿ ಲಿಂಗಾಯತ ಸಮುದಾಯಕ್ಕೆ ವಿಶೇಷ ಅನುದಾನ ಘೋಷಿಸುವ ಸಾಧ್ಯತೆಯೂ ಇದೆ.

Lingayat Seers And Ministers Meet CM Siddaramaiah At Cauvery Residence

ಜಾತಿ ಗಣತಿ ಜಾರಿಗೂ ಸಿಎಂ ಭರವಸೆ: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು, ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಅದರಂತೆಯೇ ಸರ್ಕಾರದ ಕೂಡ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದಿದ್ದಾರೆ.

ಸಮಾಜದಲ್ಲಿ ಅಸಮಾನತೆ ಹೋಗಬೇಕು, ಜಾತಿ ವ್ಯವಸ್ಥೆಯಿಂದ ನಿರ್ಮಾಣವಾಗಿರುವ ಅಸಮಾನತೆಯಿಂದಾಗಿ ಇಂದು ಬಹುಸಂಖ್ಯಾತ ಜನ ಅವಕಾಶ ವಂಚಿತರಾಗಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ನೀಡಬೇಕಾಗಿದ್ದು, ತಳ ಸಮುದಾಯವಿರಲಿ, ಮೇಲ್ವರ್ಗವಿರಲಿ ಎಲ್ಲರಿಗೂ ಸಮಾನತೆ ಇರಬೇಕು. ಈ ಅಂಶವನ್ನು ಡಾ.ಬಿ.ಆರ್‌.ಅಂಬೇಡ್ಕರ್ ಅವರೂ ಹೇಳಿದ್ದಾರೆ.
ಹಿಂದುಳಿದ ಜಾತಿಗಳಲ್ಲೂ ತಾರತಮ್ಯ-ಅಸಮಾನತೆ ಇದೆ. ಇದನ್ನು ಒಂದೇ ಬಾರಿಗೆ ಹೋಗಲಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+