Get Updates
Get notified of breaking news, exclusive insights, and must-see stories!

ಹಾವೇರಿಯಲ್ಲಿ ಈ ಬಾರಿ ಲಿಂಗಾಯತ ಅಭ್ಯರ್ಥಿಗಳ ಫೈಟ್:‌ ಬಿಜೆಪಿಯಿಂದ ಮಾಜಿ ಸಿಎಂ ಕಣಕ್ಕೆ

ಹಾವೇರಿ, ಮಾರ್ಚ್‌ 09: ಲೋಕಸಭಾ ಚುನಾವಣೆ ರಾಜ್ಯದ ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಪ್ರತಿಷ್ಠೆಯಾಗಿದೆ. ಈಗಾಗಲೇ ಕರ್ನಾಟಕದ ಏಳು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನ ಕಾಂಗ್ರೆಸ್‌ ಹೈಕಮಾಂಡ್‌ ಫೈನಲ್‌ ಮಾಡಿದ್ದು, ಶುಕ್ರವಾರ ಕಾಂಗ್ರೆಸ್‌ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯದ 7 ಕ್ಷೇತ್ರಗಳ ಪೈಕಿ ಒಬ್ಬ ಲಿಂಗಾಯತ ನಾಯಕನಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಆನಂದ್ ಸ್ವಾಮಿ ಗಡ್ಡ ದೇವರಮಠ ಅವರನ್ನ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹೈಕಮಾಂಡ್‌ ಘೋಷಿಸಿದ್ದು, ಈ ಬಾರೀ ಬಿಜೆಪಿಯೂ ಸಹ ಲಿಂಗಾಯತ ಅಭ್ಯರ್ಥಿಯನ್ನ ಕಣಕ್ಕಿಳಿಸಲಿದೆ ಎನ್ನುವ ಮಾತುಗಳು ಕೇಳಿ ಬಂದಿದೆ. ಈ ಹಿಂದೆ ಹಾವೇರಿ ಜಿಲ್ಲೆಯ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಗೆಲುವು ಸಾಧಿಸಿದ್ರು. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ವ್ಯಾಪ್ತಿಯಲ್ಲಿ ಹಾವೇರಿ, ಹಾನಗಲ್, ಶಿಗ್ಗಾಂವ್, ಹಿರೇಕೆರೂರು, ರಾಣಿಬೆನ್ನೂರು ಹಾಗೂ ಬ್ಯಾಡಗಿ ಸೇರಿ ಒಟ್ಟು 06 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು.

Lingayat vs Lingayat Fight in Haveri in Lok Sabha Elections BJP Set To Field Ex CM Know Who

ಈಗಾಗಲೇ ಕಾಂಗ್ರೆಸ್‌ ಲಿಂಗಾಯತ ನಾಯಕನಾದ ಆನಂದ್‌ ಸ್ವಾಮಿ ಗಡ್ಡದೇವರ ಮಠ ಅವರನ್ನ ಕಣಕ್ಕಿಳಿಸಿದ್ದು, ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿರುವುದರಿಂದ ಸುಲಭವಾಗಿ ಹಗೆಲ್ಲುವ ನಿಟ್ಟಿನಲ್ಲಿ ಲಿಂಗಾಯತ ನಾಯಕನಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಇತ್ತ ಬಿಜೆಪಿಯಲ್ಲಿ ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಸ್ಪರ್ಧಿಸುವುದಿಲ್ಲ ಎಂದು ಹೇಳಿರುವ ಹಿನ್ನೆಲೆಯಲ್ಲಿ ಹೊಸ ಅಭ್ಯರ್ಥಿಗಾಗಿ ಹುಡುಕಾಟವನ್ನ ಕಮಲ ಪಡೆ ನಡೆಸುತ್ತಿರುವ ಬಿಜೆಪಿ ನಾಯಕತ್ವವು ಹಾವೇರಿ ಲೋಕಸಭಾ ಕ್ಷೇತ್ರದಿಂದ ಲಿಂಗಾಯತ ನಾಯಕನ್ನ ಕಣಕ್ಕಿಳಿಸಲು ಚಿಂತನೆ ನಡೆಸಿದ್ದು, ಹಾವೇರಿಯಲ್ಲಿ ಈ ಬಾರಿ ಲಿಂಗಾಯತ ಅಭ್ಯರ್ಥಿಗಳ ಪೈಪೋಟಿಗೆ ಸಾಕ್ಷಿಯಾಗಲಿದೆ.

ಕಾಂಗ್ರೆಸ್ ನಿಂದ ಲಿಂಗಾಯತ ನಾಯಕರಾದ ಆನಂದ್ ಸ್ವಾಮಿ ಗಡ್ಡ ದೇವರಮಠ ಅವರನ್ನ ಕಣಕ್ಕಿಳಿಸಿದ್ದು, ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿಗಳ ಹೆಸರು ಕೇಳಿ ಬರುತ್ತಿದೆ. ಈ ಹಿಂದೆ ವಿಧಾನಸಭಾ ಚುನಾವಣೆ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನಲೆ ಬಿಜೆಪಿಗೆ ಗುಡ್‌ ಬಾಯ್‌ ಹೇಳಿದ್ದ ಜಗದೀಶ್‌ ಶೆಟ್ಟರ್‌ ಇದೀಗ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಹಾವೇರಿ ಕ್ಷೇತ್ರವನ್ನ ಮರಳಿ ಪಡೆಯಬೇಕು ಎಂದರೆ, ಲಿಂಗಾಯತ ನಾಯಕನನ್ನೇ ಕಣಕ್ಕಿಳಿಸಬೇಕು ಎಂದು ಸ್ಥಳೀಯ ನಾಯಕರು ಹೇಳಿದ್ದಾರೆ.

Lingayat vs Lingayat Fight in Haveri in Lok Sabha Elections BJP Set To Field Ex CM Know Who

ಇತ್ತ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರನ್ನ ಬೆಳಗಾವಿ ಲೋಕಸಭಾ ಚುನಾವಣೆಯಿಂದ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್‌ ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಕಣಕ್ಕಿಳಿಸಬೇಕು ಎನ್ನುವ ಕೂಗು ಕೇಳಿ ಬಂದಿದೆ. ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಆಯ್ಕೆಯಾಗಿದ್ದಾರೆ. ಶಿಗ್ಗಾಂವಿ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸೇರಿದರೂ ಹಾವೇರಿ ಜಿಲ್ಲೆಯಲ್ಲಿ ಮಾಜಿ ಸಿಎಂ ಗಣನೀಯ ಪ್ರಭಾವ ಹೊಂದಿದ್ದಾರೆ. ಅದಲ್ಲದೇ ಮುಖ್ಯಮಂತ್ರಿ ಆಗಿದ್ದಾಗ ಹಾವೇರಿ ಜಿಲ್ಲೆಯ ಅಭಿವೃದ್ಧಿಗಾಗಿ ಮಾಡಿದ ಕೆಲಸಗಳನ್ನು ಹೈಕಮಾಂಡ್‌ ಗಮನಿಸಿದ್ದು, ಇವು ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಗೆಲ್ಲಿಸುತ್ತವೆ ಎಂಬ ಚಿಂತನೆಯಲ್ಲಿ ಪಕ್ಷದ ನಾಯಕರು ಹೇಳಿದ್ದಾರೆ.

ಶಿವಕುಮಾರ್‌ ಉದಾಸಿ ಅವರು 2009ರಿಂದ ಹಾವೇರಿಯಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ಆದರೆ, ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇದರಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಅವರ ಪುತ್ರ ಕಾಂತೇಶ್‌, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ್‌ ಕಲ್ಕೋಟಿ, ಮಾಜಿ ಸಚಿವ ಬಿ ಸಿ ಪಾಟೀಲ್‌ ಹಾಗೂ ಒಬಿಸಿ ನಾಯಕ ರಾಜಶೇಖರ್‌ ಕತ್ತೆಗೌಡರ್‌ ಬಿಜೆಪಿ ಟಿಕೆಟ್‌ಗೆ ಲಾಬಿ ನಡೆಸಿದ್ದಾರೆ. ಈ ಎಲ್ಲಾ ನಾಯಕರ ಬದಲಿದೆ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರನ್ನ ಕಣಕ್ಕಿಳಿಸಿದರೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿರುತ್ತೆ ಎನ್ನುವ ಮಾತು ಹಾವೇರಿ ಜಿಲ್ಲಾ ನಾಯಕರಿಂದ ಕೇಳಿ ಬಂದಿದ್ದು, ಬಹುತೇಕ ಬೊಮ್ಮಾಯಿ ಟಿಕೆಟ್‌ ಸಿಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+