Liquor Price Hike: ಮದ್ಯ ಪ್ರಿಯರಿಗೆ ಮತ್ತೆ ಶಾಕ್: ಮದ್ಯದ ಬೆಲೆ ಹೆಚ್ಚಳ ಫಿಕ್ಸ್, ಯಾವುದಕ್ಕೆ ಎಷ್ಟು?!
Liquor Price Hike in Karnataka 2025: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಮತ್ತೊಮ್ಮೆ ಮದ್ಯ ಪ್ರಿಯರಿಗೆ ಶಾಕ್ ನೀಡುವುದಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರವು ಈಗಾಗಲೇ ಎರಡು ವರ್ಷದ ಅವಧಿಯಲ್ಲಿ ಮೂರು ಬಾರಿ ಮದ್ಯದ ಬೆಲೆಯನ್ನು ಏರಿಕೆ ಮಾಡಿದ್ದು. ಮದ್ಯ ಪ್ರಿಯರಿಗೆ ಕಿಕ್ ದುಬಾರಿ ಮಾಡಿದೆ. ಇದೀಗ ಮತ್ತೊಮ್ಮೆ ಸದ್ದಿಲ್ಲದೆ ಮದ್ಯದ ಬೆಲೆ ಏರಿಕೆ ಮಾಡಲು ಮುಂದಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೆಲೆ ಏರಿಕೆಯ ನಂತರ ಇದೀಗ ಮತ್ತೊಂದು ಬೆಲೆ ಏರಿಕೆಯ ಸರದಿ ಶುರುವಾಗಿದೆ. ಮದ್ಯದ ಬೆಲೆ ಏರಿಕೆಯಿಂದಾಗಿ ಈಗಾಗಲೇ ಮದ್ಯ ಮಾರಾಟದಲ್ಲಿ ಭಾರೀ ಕುಸಿತ ಕಂಡಿದೆ. ಬಿಯರ್ ಸೇಲ್ ಕುಸಿದಿದೆ. ಮದ್ಯ ಮಾರಾಟ ಕಂಪನಿಗಳು ಯಾವುದೇ ಕಾರಣಕ್ಕೂ ಬೆಲೆ ಏರಿಕೆ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮನವಿ ಮಾಡಿದೆ. ಇದರ ನಡುವೆ ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ.
ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿನಿಂದ ಬೆಲೆ ಏರಿಕೆ ಮಾಡಲಾಗುತ್ತಿದೆ. ಬಸ್, ಮೆಟ್ರೋ, ಹಾಲು, ಡೀಸೆಲ್ ತೆರಿಗೆ, ವಿದ್ಯುತ್ ಸುಂಕ ಹಾಗೂ ಹಾಲಿನ ಬೆಲೆ ಹೆಚ್ಚಿಸಲಾಗಿದೆ. ಸರ್ಕಾರವು ಈ ಬಾರಿ ಬಜೆಟ್‌ನಲ್ಲೂ ಮದ್ಯದ ಬೆಲೆಗೆ ಸಂಬಂಧಿಸಿದಂತೆ ಯಾವುದೇ ಮಹತ್ವದ ಕ್ರಮವನ್ನು ತೆಗೆದುಕೊಂಡಿರಲಿಲ್ಲ. ಆದರೆ ಇದೀಗ ಏಕಾಏಕಿ ಮತ್ತೆ ಮದ್ಯಗಳ ಬೆಲೆ ಏರಿಕೆಗೆ ಕೈಹಾಕಿದೆ. ಇದೀಗ ಕರ್ನಾಟಕದಲ್ಲಿ ಮದ್ಯದ ಮೇಲೆ ಬೆಲೆ ಏರಿಕೆ ಮಾಡುವುದಕ್ಕೆ ಸದ್ದಿಲ್ಲದೆ ಸಿದ್ಧತೆ ಶುರುವಾಗಿದೆ.

ಕರ್ನಾಟಕದಲ್ಲಿ ಮದ್ಯದ ಬೆಲೆ ದುಬಾರಿ ಆಗಿರುವಾಗಲೇ ಮದ್ಯದ ಬೆಲೆಯನ್ನು ಪ್ರತಿ ತ್ರೈಮಾಸಿಕಕ್ಕೆ (ಪ್ರತಿ ಮೂರು ತಿಂಗಳು)10 ರೂಪಾಯಿ ಯಿಂದ 15 ರೂಪಾಯಿ ಹೆಚ್ಚಳ ಹಾಗೂ ಬಿಯರ್ ಬೆಲೆಯನ್ನು ಈಗ ಇರುವ ಬೆಲೆಗಿಂತ ಶೇ.10% ರಷ್ಟು ಹೆಚ್ಚಳ ಮಾಡಲು ಭರ್ಜರಿ ಸಿದ್ಧತೆ ಶುರುವಾಗಿದೆ. ಈ ಸಂಬಂಧ ಕರ್ನಾಟಕ ಸರ್ಕಾರದ ಅಬಕಾರಿ ಇಲಾಖೆಯಿಂದ ಮಂಗಳವಾರ ಸಂಜೆ ಅಧಿಸೂಚನೆ ಹೊರಡಿಸಲಾಗಿದೆ. ಇದು ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿದೆ. ಇನ್ಮುಂದೆ ಹೆಚ್ಚು ಕಿಕ್ ಬೇಕಾದರೆ ಹೆಚ್ಚು ದುಡ್ಡು ಪಾವತಿ ಮಾಡಬೇಕಾಗುತ್ತದೆ.
ಯಾವೆಲ್ಲ ಮದ್ಯದ ಬೆಲೆ ಏರಿಕೆಯಾಗಲಿದೆ ?
ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ಮಂಗಳವಾರ ಅಧಿಸೂಚನೆ ಹೊರಡಿಸಿದೆ. ಹೊಸ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಜನರಿಂದ ಆಕ್ಷೇಪಣೆಗಳನ್ನು ಸಲ್ಲಿಸುವುದಕ್ಕೆ 7 ದಿನ ಕಾಲಾವಕಾಶ ಕೊಟ್ಟಿದೆ. ಸರ್ಕಾರದ ಹೊಸ ಅಧಿಸೂಚನೆಯ ಅನ್ವಯ, ವಿಸ್ಕಿ, ಜಿನ್ ಹಾಗೂ ರಮ್ ಸೇರಿದಂತೆ ವಿವಿಧ ಮದ್ಯಗಳ ಬೆಲೆ ಏರಿಕೆಯಾಗಲಿದೆ. ಈ ಮದ್ಯದ ಬೆಲೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ 10 ರೂಪಾಯಿ ಯಿಂದ 15 ರೂಪಾಯಿ ಹೆಚ್ಚಳ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಇದರಲ್ಲಿ ಬಿಯರ್, ಟಾಡಿ ಹಾಗೂ ವೈನ್ ಮದ್ಯಗಳನ್ನು ಸೇರಿಸಿಲ್ಲ.

ಅಬಕಾರಿ ಇಲಾಖೆಗೆ ಟಾರ್ಗೆಟ್: ಇನ್ನು ರಾಜ್ಯ ಸರ್ಕಾರವು ಈ ಬಾರಿ ಅಬಕಾರಿ ಇಲಾಖೆಗೆ ಬರೋಬ್ಬರಿ 40,000 ಕೋಟಿ ರೂಪಾಯಿಗಳ ಟಾರ್ಗೆಟ್ ನೀಡಿದೆ. ಹೀಗಾಗಿ, ಈ ಅಬಕಾರಿ ಸುಂಕವನ್ನು ಗಮನದಲ್ಲಿ ಇರಿಸಿಕೊಂಡು ಮದ್ಯದ ಬೆಲೆಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ಮದ್ಯ ಬೆಲೆ ಏರಿಕೆಗೆ ಮದ್ಯ ಕಂಪನಿಗಳು ಹಾಗೂ ಮದ್ಯ ಪ್ರಿಯರಿಂದ ವಿರೋಧ ವ್ಯಕ್ತವಾಗಿದೆ.












Click it and Unblock the Notifications