Get Updates
Get notified of breaking news, exclusive insights, and must-see stories!

ದರ ಏರಿಕೆಯಾದರೂ ಮದ್ಯ ಮಾರಾಟ ಜೋರು: ಅಬಕಾರಿ ಇಲಾಖೆಗೆ ಭರ್ಜರಿ ಆದಾಯ

ಬೆಂಗಳೂರು, ಮೇ 27: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪ್ರಯತ್ನ ನಡೆಸುತ್ತಿರುವ ಸಂದರ್ಭದಲ್ಲಿ ಸಿಹಿಸುದ್ದಿಯೊಂದು ಸಿಕ್ಕಿದೆ. ರಾಜ್ಯದಲ್ಲಿ ಮದ್ಯದ ದರ ಏರಿಕೆಯಾದರೂ ಸಹ ಅಬಕಾರಿ ಇಲಾಖೆಯ ಆದಾಯ ಹೆಚ್ಚಾಗಿದೆ. ಇದರಿಂದಾಗಿ ಖಜಾನೆ ತುಂಬಲಿದೆ.

ರಾಜ್ಯದಲ್ಲಿ ಮದ್ಯ ಮಾರಾಟದಲ್ಲಿ ಹೆಚ್ಚಳ ಕಂಡುಬಂದಿದೆ. ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಆದಾಯ ತಂದುಕೊಡುವ ಅಬಕಾರಿ ಇಲಾಖೆಯ ಆದಾಯ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Liquor Sales Karnataka Government Get More Revenue

ಮೂರು ಬಾರಿ ರಾಜ್ಯದಲ್ಲಿ ಮದ್ಯದ ದರ ಏರಿಕೆ ಮಾಡಲಾಗಿದೆ. ಆದರೆ ಮದ್ಯ ಮಾರಾಟ ಇಳಿಮುಖವಾಗಿಲ್ಲ. ಅಬಕಾರಿ ಇಲಾಖೆ ಕಳೆದ ವರ್ಷಕ್ಕಿಂತ ಶೇ 15ರಷ್ಟು ಹೆಚ್ಚಿನ ಆದಾಯವನ್ನು ಸಂಗ್ರಹಣೆ ಮಾಡಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸ ತುಂಬಿದೆ.

ಎಷ್ಟು ಗುರಿ ನೀಡಲಾಗಿತ್ತು?; ಹಣಕಾಸು ವರ್ಷದ ಆರಂಭದಲ್ಲಿಯೇ ಸರ್ಕಾರ ವಿವಿಧ ಇಲಾಖೆಗಳ ಆದಾಯ ಸಂಗ್ರಹಣೆಗೆ ಗುರಿ ನೀಡುತ್ತದೆ. ಈ ವರ್ಷ 34,500 ಕೋಟಿ ರೂ. ಆದಾಯ ಸಂಗ್ರಹದ ಗುರಿಯನ್ನು ನೀಡಲಾಗಿತ್ತು. ಮಾರ್ಚ್ ಅಂತ್ಯದ ತನಕ 34,628 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಕಳೆದ ವರ್ಷ ಇಲಾಖೆಗೆ ನೀಡಿದ್ದ ಗುರಿ 32,000 ಕೋಟಿ. ಆದರೆ ಆರ್ಥಿಕ ವರ್ಷದ ಅಂತ್ಯದಲ್ಲಿ 29,920 ಕೋಟಿ ರೂ. ಮಾತ್ರ ಆದಾಯ ಸಂಗ್ರಹವಾಗಿತ್ತು. ಆದರೆ ಈ ಬಾರಿ ಮೂರು ಬಾರಿ ಮದ್ಯದ ದರಗಳು ಹೆಚ್ಚಾದರೂ ಅದು ಮಾರಾಟದ ಮೇಲೆ ಯಾವುದೇ ಪ್ರಭಾವ ಬೀರಿಲ್ಲ.

ರಾಜ್ಯ ಸರ್ಕಾರಕ್ಕೆ ಅಬಕಾರಿ ಸುಂಕ ಬಹುದೊಡ್ಡ ಆದಾಯದ ಮೂಲವಾಗಿದೆ. ಕಂದಾಯ, ಮುಜರಾಯಿ, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳು ರಾಜ್ಯದ ಆದಾಯಕ್ಕೆ ಪ್ರಮುಖ ಮೂಲಗಳು. ಇದರಲ್ಲಿ ಅಬಕಾರಿ ಇಲಾಖೆಯು ಗುರಿಗಿಂತ ಹೆಚ್ಚಿನ ಲಾಭ ಮಾಡಿದ್ದು, ಸರ್ಕಾರಕ್ಕೆ ಸಹಾಯಕವಾಗಿದೆ.

ಲೋಕಸಭೆ ಚುನಾವಣೆ 2024 ಅಬಕಾರಿ ಇಲಾಖೆಯ ಆದಾಯ ಹೆಚ್ಚಳವಾಗಲು ಸಹಾಯಕವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮಾರ್ಚ್‌ನಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಯಿತು. ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಿತು.

ರಾಜಕೀಯ ಸಮಾವೇಶ, ಚುನಾವಣಾ ಪ್ರಚಾರ ಎಂದು ಚುನಾವಣೆ ಸಮಯದಲ್ಲಿ ಮದ್ಯ ಮಾರಾಟವಾಗುವುದು ಹೆಚ್ಚು ಸುಮಾರು ಎರಡು ತಿಂಗಳ ಕಾಲದ ಚುನಾವಣೆಯ ಕಾವು, ಬೇಸಿಗೆಯ ಧಗೆ ಮದ್ಯ ಮಾರಾಟ ಹೆಚ್ಚಳಕ್ಕೆ ಕಾರಣ ಎಂದು ಸಹ ವಿಶ್ಲೇಷಿಸಲಾಗುತ್ತಿದೆ.

ಮದ್ಯ ಮಾರಾಟ ನಿಷೇಧ: ಜೂನ್‌ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ 6 ಕ್ಷೇತ್ರಗಳಿಗೆ ಮತದಾನ ಜೂನ್ 3ರಂದು ನಡೆಯಲಿದೆ.

ಈ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10ಬಿ ಅಡಿಯಲ್ಲಿ ಪ್ರತ್ಯಾಯೊಜಿತವಾಗಿರುವ ಅಧಿಕಾರದಂತೆ ಜೂನ್ 1ರ ಸಂಜೆ 4 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಜೂನ್ 3ರಂದು ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಮತದಾನ ನಡೆಯುತ್ತಿದೆ. ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ನಗರ (ಕೇಂದ್ರ, ಉತ್ತರ, ದಕ್ಷಿಣ), ಬೆಂಗಳೂರು ಗಾಮೀಣ ಮತ್ತು ರಾಮನಗರ ಜಿಲ್ಲೆಗಳು ಒಳಪಡುತ್ತವೆ. ಆದ್ದರಿಂದ ಬೆಂಗಳೂರು ನಗರದಲ್ಲಿಯೂ ಮದ್ಯ ಮಾರಾಟ ನಿಷೇಧಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+