ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಗೆ ಡೇಟ್‌ ಫಿಕ್ಸ್: ದೆಹಲಿಗೆ ಹೊರಟ ಬಿ ಎಸ್‌ ಯಡಿಯೂರಪ್ಪ

ಬೆಂಗಳೂರು, ಮಾರ್ಚ್‌ 11: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ. ಈಗಾಗಲೇ ಬಿಜೆಪಿ ಹೈಕಮಾಂಡ್‌ ಹಲವು ಸುತ್ತಿನ ಮಾತುಕತೆಯ ಬಳಿಕ 195 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಬಿಡುಗಡೆಯಲ್ಲಿ ಕರ್ನಾಟಕದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಹೈಕಮಾಂಡ್‌ ಮುಂದಾಗಿದೆ.

ಈಗಾಗಲೇ ಬಿಜೆಪಿ ಹೈಕಮಾಂಡ್‌ ರಾಜ್ಯ ನಾಯಕರಿಗೆ ಬುಲಾವ್‌ ನೀಡಿದ್ದು, ಇಂದು ಬಿಜೆಪಿ ಹೈಕಮಾಂಡ್‌ ಚರ್ಚೆ ನಡೆಸಿ ಪಟ್ಟಿಯನ್ನ ಅಂತಿಮಗೊಳಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಂತಿಮಗಗೊಳಿಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಇಂದು ದೆಹಲಿಗೆ ತೆರಳಿದರು.

List Of BJP-JDS Candidates For Lok Sabha Polls Likely To Be Finalised Today Says BS Yediyurappa

ಇನ್ನೂ ಈ ವೇಳೆ ಮಾಧ್ಯಮಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಮಾತನಾಡಿ, ಕರ್ನಾಟಕದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಇವತ್ತು ಸಾಯಂಕಾಲ ಬಿಡುಗಡೆಯಾಗುವ ಸಾಧ್ಯತೆ ಇದೆ ಎ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಲ್ಲೇ ಇದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವವರ ಸಮಕ್ಷಮ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ತಯಾರಾಗಲಿದೆ. ಇನ್ನೂ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 25 ಗೆಲ್ಲಲಿದ್ದೇವೆ ಎಂದು ಹೇಳಿದರು.

ಈ ತಿಂಗಳು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ಪ್ರವಾಸ ಮಾಡಲಿರುವುದರಿಂದ ಅವರ ಸಭೆಗಳಿಗೆ ಹೆಚ್ಚೆಚ್ಚು ಜನರನ್ನು ಸೇರಿಸಬೇಕಿದೆ ಎಂದು ಹೇಳಿದ ಅವರು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕೃಷ್ಣದತ್ ಒಡೆಯರ್ ಸ್ಪರ್ಧಿಸುವುದು ಖಚಿತವೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ ಯಾವುದೇ ಕ್ಷೇತ್ರದ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಹೇಳಿದರು.

ಇನ್ನೂ ಈ ವೇಳೆ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸಂಸದರಾದ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಅವರ ವೈಯಕ್ತಿಕ ವಿಚಾರವೇ ಹೊರತು ಪಕ್ಷದ ವಿಚಾರ ಅಲ್ಲ ಎಂದು ತಿಳಿಸಿದರು. ಬಿಜೆಪಿ ಯಾವತ್ತೂ ಕೂಡ ಬಾಬಾ ಸಾಹೇಬ ಅಂಬೇಡ್ಕರರ ತತ್ವ, ಸಿದ್ಧಾಂತಗಳ ಜೊತೆ ಇದೆ. ನಮ್ಮ ದೇಶದಲ್ಲಿರುವ ಪ್ರತಿಯೊಬ್ಬರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆಯ ಮಾತೇ ಇಲ್ಲ ಎಂದು ಪ್ರಧಾನಿಯವರೂ ಹೇಳಿದ್ದಾರೆ.

ಸಂಸದರಾದ ಅನಂತಕುಮಾರ್ ಹೆಗಡೆ ಅವರು ಬಹಳ ಹಿಂದೆ 'ನಾವು ಬಂದಿರುವುದೇ ಸಂವಿಧಾನವನ್ನು ಬದಲಾವಣೆ ಮಾಡಲಿಕ್ಕೆ' ಎಂದು ಹೇಳಿಕೆ ಕೊಟ್ಟಿದ್ದರು. ಆಗ ಅವರು ಸಚಿವರಾಗಿದ್ದರು. ಮಾನ್ಯ ಪ್ರಧಾನಮಂತ್ರಿ ಮೋದಿಜೀ ಅವರು ಅವರನ್ನು ಸದನಕ್ಕೆ ಕರೆಸಿ ಕ್ಷಮೆ ಕೇಳಿಸುವ ಕೆಲಸ ಮಾಡಿದ್ದರು ಎಂದು ವಿವರಿಸಿದರು.

ಅದಾದ ಬಳಿಕ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಲಾಗಿತ್ತು. ಇದೆಲ್ಲವೂ ಗೊತ್ತಿದ್ದರೂ ಕೂಡ ಎರಡ್ಮೂರು ದಿನಗಳ ಹಿಂದೆ ಅವರು, ಸಂವಿಧಾನದಲ್ಲಿ ಬದಲಾವಣೆ ಮಾಡಲು 400 ಸ್ಥಾನಗಳನ್ನು ಗೆಲ್ಲುವ ಗುರಿ ಇದೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಪಕ್ಷಕ್ಕೆ ಮುಜುಗರ ತರುವ ಮತ್ತು ವಿಪಕ್ಷಕ್ಕೆ ಆಹಾರ ಕೊಡುವಂಥ ಹೇಳಿಕೆ ನೀಡುವ ಅನಂತಕುಮಾರ್ ಸ್ಥಿಮಿತದಲ್ಲಿ ಇದ್ದಾರೋ ಇಲ್ಲವೋ ಗೊತ್ತಿಲ್ಲ. ಅವರ ಹೇಳಿಕೆ ಖಂಡನಾರ್ಹ ಎಂದರು. ಇಂಥ ಹೇಳಿಕೆಯಿಂದ ದೂರ ಉಳಿಯಲು ಮನವಿ ಮಾಡಿದರು.

ದೇಶದ ಪ್ರಧಾನಿ ಮೋದಿಯವರನ್ನು ಕೀಳುಮಟ್ಟದ ಭಾಷೆಯಲ್ಲಿ ಟೀಕಿಸುವುದು ಕಾಂಗ್ರೆಸ್ಸಿಗರ ಜಾಡ್ಯ. ಇದೊಂದು ಅಂಟು ರೋಗ. ಮುಖ್ಯಮಂತ್ರಿ ಆದಿಯಾಗಿ ಕೆಲವರಿಗೆ ಇರುವ ರೋಗವು ತಳಮಟ್ಟಕ್ಕೂ ಹರಡಿದೆ. ಇದಕ್ಕೆ ರಾಜ್ಯದ ಮುಖ್ಯಮಂತ್ರಿಯವರು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+