Get Updates
Get notified of breaking news, exclusive insights, and must-see stories!

Lok Sabha Election 2024 Result: ಮೊದಲ ಬಾರಿಗೆ ಸಂಸತ್ತು ಪ್ರವೇಶಿಸಿದ ರಾಜ್ಯ ನಾಯಕರು ಯಾರ್ಯಾರು? ಪಟ್ಟಿ ಇಲ್ಲಿದೆ

ಬೆಂಗಳೂರು, ಜೂನ್‌ 05: 2024 ರ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಬಿಜೆಪಿ 17, ಕಾಂಗ್ರೆಸ್‌ 9 ಹಾಗೂ ಜೆಡಿಎಸ್‌ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಈ ಬಾರಿ ಮೊದಲ ಬಾರಿ ಸ್ಪರ್ಧೆ ನಡೆಸಿದ ಹಲವು ನಾಯಕರು ಬಹುಮತದೊಂದಿಗೆ ಗೆಲುವು ಸಾಧಿಸಿ, ಸಂಸತ್‌ ಪ್ರವೇಶಿಸಲಿದ್ದಾರೆ.

2024 ರ ಲೋಕಸಭಾ ಚುಣಾವಣೆ ಹಲವು ಹೊಸತುಗಳಿಗೆ ಸಾಕ್ಷಿಯಾಗಿದ್ದು, ದೇಶದ ಅತೀ ಕಿರಿಯ ವಯಸ್ಸಿನ ನಾಯಕರು ಸಂಸದರಾಗಿ ಆಯ್ಕೆಯಾಗಿರುವುದು ವಿಶೇಷವಾಗಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮೈತ್ರಿ ಕೂಟ 25 ಕ್ಷೇತ್ರಗಳಿಗಿಂತ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುವ ಗುರಿ ಹಾಕಿಕೊಂಡಿತ್ತು. ಆದರೆ ಬಿಜೆಪಿ ಹಾಗೂ ಜೆಡಿಎಸ್‌ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಹಾಗಾದ್ರೆ ಮೊದಲ ಬಾರಿಗೆ ಸಂಸತ್ತು ಪ್ರವೇಶಿಸಿದವರು ಯಾರ್ಯಾರು ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

List Of MPs To Enter Parliament For The First Time After The Victory

ಹಾವೇರಿ ಕ್ಷೇತ್ರ: ಬಸವರಾಜ ಬೊಮ್ಮಾಯಿ

ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಸ್ಪರ್ಧೆ ನಡೆಸಿ, ಗೆಲುವು ಸಾಧಿಸಿ ಸಂಸತ್ತು ಪ್ರವೇಶಿಸಿದ್ದಾರೆ. ಸದ್ಯ ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿಯ ವಶವಾಗಿದೆ.

ಚಿಕ್ಕಬಳ್ಳಾಪುರ: ಡಾ. ಕೆ ಸುಧಾಕರ್

2023ರ ವಿಧಾನಸಭೆ ಚುನಾವಣೆಯಲ್ಲಿ‌ ಹೀನಾಯವಾಗಿ ಸೋಲು ಅನುಭವಿಸಿದ ಡಾ.ಸುಧಾಕರ್‌ ಅವರಿಗೆ ಬಿಜೆಪಿ ಹೈಕಮಾಂಡ್‌ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿತ್ತು. ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ದ ಬಿಜೆಪಿ ಹೈಕಮಾಂಡ್‌ ಕೊಟ್ಟ ಅವಕಾಶವನ್ನು ಸದುಪಯೋಪಡಿಸಿಕೊಂಡ ಕೆ. ಸುಧಾಕರ್​ ಅವರು ಜಯಭೇರಿ ಬಾರಿಸಿದ್ದಾರೆ.

ಚಿತ್ರದುರ್ಗ: ಗೋವಿಂದ ಕಾರಜೋಳ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರ್ಜೋಳ ಅವರಿಗೆ ಬಿಜೆಪಿ ಹೈಕಮಾಂಡ್‌ ಚಿತ್ರದುರ್ಗ ಲೋಕಸಭಾದಿಂದ ಕಣಕ್ಕಿಳಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಪ್ಪ ಅವರ ವಿರುದ್ಧ ಸ್ಪರ್ಧಿಸಿ ಗೋವಿಂದ ಕಾರಜೋಳ ಗೆಲುವಿನ ನಗೆ ಬೀರಿದಿದ್ದಾರೆ.

ತುಮಕೂರು: ವಿ ಸೋಮಣ್ಣ

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವರುಣಾ ಹಾಗೂ ಚಾಮರಾಜನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹೀನಾಯಾಗಿ ಸೋಲು ಕಂಡ ಸೋಮಣ್ಣ, ಈ ಬಾರಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಅಭೂತ ಪೂರ್ವ ಗೆಲುವು ಸಾಧಿಸಿದ್ದಾರೆ.

ಬೆಳಗಾವಿ: ಜಗದೀಶ್‌ ಶೆಟ್ಟರ್‌

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಸ್ಪರ್ಧೆ ನಡೆಸಿ ಸೋಲು ಕಂಡ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ಬಿಜೆಪಿ ಹೈಕಮಾಂಡ್‌ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಿತ್ತು. ಜಗದೀಶ್‌ ಶೆಟ್ಟರ್‌ ಅವರು ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದು, ಇದೀಗ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ.

ಉತ್ತರ ಕನ್ನಡ: ವಿಶ್ವೇಶ್ವರ ಹೆಗಡೆ ಕಾಗೇರಿ

2023 ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಸ್ಪರ್ಧಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು ಸಾಧಿಸಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಿಂದೆ ಬಿಜೆಪಿ ಸರ್ಕಾರದಲ್ಲಿ ವಿಧಾನಸಭೇ ಸಭಾಪತಿಯಾಗಿದ್ದರು. ಇದೀಗ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿರುವವರಲ್ಲಿ ಇವರು ಒಬ್ಬರಾಗಿದ್ದಾರೆ.

ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಂ ಲಕ್ಷ್ಮಣ್‌ ಅವರ ವಿರುದ್ಧ ಸ್ಪರ್ಧೆ ನಡೆಸಿದ್ದು, ಮೊದಲ ಬಾರಿಗೆ ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ವಿಜಯಪತಾಕೆ ಹಾರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ: ಮಂಜುನಾಥ್‌

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಡಿ ಕೆ ಬ್ರದರ್ಸ್‌ಗಳ ಭದ್ರಕೋಟೆಯನ್ನ ಮೊದಲ ಬಾರಿಗೆ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಅಳಿಯ ಡಾ. ಮಂಜುನಾಥ್‌ ಅವರು ಛಿದ್ರಗೊಳಿಸಿದ್ದಾರೆ. ಹೃದಯವಂತ ವೈದ್ಯ ಎಂದು ಹೆಸರಿನಿಂದ ಖ್ಯಾತಿ ಪಡೆದಿರುವ ಡಾ. ಸಿಎನ್​ ಮಂಜುನಾಥ್​ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿಕೆ ಸುರೇಶ್​ ಅವರನ್ನು ಸೋಲಿಸಿ ಜಯಗಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿರುದ್ಧ ಬಿಜೆಪಿಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಬರೋಬ್ಬರಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇನ್ನೂ ಕಲಬುರ್ಗಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿಯವರು ಗೆಲುವು ಸಾಧಿಸಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಯನ್ನ ಕಣಕ್ಕಿಳಿಸಿದ್ದು, ಶಾಮನೂರು ಕುಟುಂಬದ ಸೊಸೆ, ಸಚಿವ ಎಸ್​ಎಸ್ ಮಲ್ಲಿಕಾರ್ಜುನ್​ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್​ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‌ನಿಂದ ಸಮಾಜ ಕಲ್ಯಾಣ ಖಾತೆ ಸಚಿವ ಎಚ್‌.ಸಿ. ಮಹದೇವಪ್ಪ ಅವರ ಮಗ ಸುನೀಲ್‌ ಬೋಸ್‌ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಅಲ್ಲದೇ ಸಚಿವ ಸತೀಶ್​ ಜಾರಕಿಹೊಳಿ ಪುತ್ತಿ, ಪ್ರಿಯಾಂಕಾ ಜಾರಿಕಿಹೊಳಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಗೆಲ್ಲುವ ಮೂಲಕ ಚಿಕ್ಕೋಡಿಯನ್ನು ಮತ್ತೆ ಕಾಂಗ್ರೆಸ್​ ತೆಕ್ಕೆಗೆ ಹಾಕಿದ್ದಾರೆ. ಇನ್ನೂ ಈಶ್ವರ್‌ ಖಂಡ್ರೆಯವರ ಪುತ್ರ ಸಾಗರ್‌ ಖಂಡ್ರೆ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಸ್ಪರ್ಧಿಸಿ ಗೆಲವು ಸಾಧಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+