• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಸಂಭಾವ್ಯ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು

|

ಹಾಲೀ ಪಾರ್ಲಿಮೆಂಟಿನ ಅವಧಿ ಮುಗಿಯಲು ಇನ್ನೂ ಹತ್ತು ತಿಂಗಳು ಇದೆ, ಸಾರ್ವತ್ರಿಕ ಚುನಾವಣೆ ಬೇಗ ಎದುರಾಗುವ ಸಾಧ್ಯತೆಯಿದೆ ಎನ್ನುವ ಸುದ್ದಿಯ ನಡುವೆ, ಯಾವ ಕ್ಷೇತ್ರ ಸೇಫ್ ಎನ್ನುವ ಬಗ್ಗೆ ಈಗಾಗಲೇ ಲೆಕ್ಕಾಚಾರ ಶುರುವಾಗಿದೆ.

ಕರ್ನಾಟಕದ ಪಾಲಿಗೆ ಬಿಜೆಪಿ ಪಾಲಿಗೆ ತುಸು ಸೇಫ್ ಎನಿಸಿರುವ ಕ್ಷೇತ್ರಗಳಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಕೂಡಾ ಒಂದು. ಹಾಲೀ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ಬಯಸುತ್ತಿರುವುದರಿಂದ, ಬಿಜೆಪಿ ಟಿಕೆಟಿಗೆ ಡಿಮಾಂಡ್ ಜಾಸ್ತಿಯಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ಗಮನಿಸಬೇಕಾದ ಅಂಶವೇನಂದರೆ, ಶೋಭಾ ಕರಂದ್ಲಾಜೆ 2014ರ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಅಭ್ಯರ್ಥಿಯಾಗಿದ್ದ ಜಯಪ್ರಕಾಶ್ ಹೆಗಡೆಯವರನ್ನು 181,643 ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ, ಜಯಪ್ರಕಾಶ್ ಹೆಗಡೆ ಈಗ ಬಿಜೆಪಿಯಲ್ಲಿದ್ದಾರೆ.

ಲೋಕಸಭೆ ಚುನಾವಣೆ : ಬಿಜೆಪಿ ಕೋರ್ ಕಮಿಟಿ ಸಭೆ ನಿರ್ಣಯಗಳು

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ನಾಲ್ಕು ಕ್ಷೇತ್ರ (ಬೈಂದೂರು ಕ್ಷೇತ್ರ ಶಿವಮೊಗ್ಗ ವ್ಯಾಪ್ತಿಗೆ ಬರುತ್ತದೆ) ಮತ್ತು ಚಿಕ್ಕಮಗಳೂರಿನ ನಾಲ್ಕು (ಕಡೂರು ಕ್ಷೇತ್ರ ಹಾಸನ ವ್ಯಾಪ್ತಿಗೆ ಬರುತ್ತದೆ), ಒಟ್ಟು ಎಂಟು ಅಸೆಂಬ್ಲಿ ಕ್ಷೇತ್ರಗಳಲ್ಲಿ, ಬಿಜೆಪಿ ಏಳು ಕ್ಷೇತ್ರವನ್ನು ಗೆದ್ದಿದ್ದರೆ, ಕಾಂಗ್ರೆಸ್ ಒಂದು ಕ್ಷೇತ್ರವನ್ನು ಗೆದ್ದಿತ್ತು.

ಕಾರ್ಕಳ ಕ್ಷೇತ್ರದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಮತ್ತು ಚಿಕ್ಕಮಗಳೂರು ಶಾಸಕ ಸಿ ಟಿ ರವಿಯವರನ್ನು, ಈ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ಹೇರಲಾಗಿತ್ತು, ಆದರೆ ಅವರಿಬ್ಬರೂ ನಿರಾಸಕ್ತಿ ತೋರುತ್ತಿದ್ದಾರೆ ಎನ್ನುವ ಮಾಹಿತಿಯಿದೆ.

ಹಾಸನ ಅಥವಾ ಮಂಡ್ಯ ಕಾಂಗ್ರೆಸ್‌ಗೆ ಬಿಟ್ಟುಕೊಡಿ: ಎ. ಮಂಜು ಪಟ್ಟು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಭಾವ್ಯ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಸ್ಲೈಡಿನಲ್ಲಿ ಮುಂದುವರಿಸಲಾಗಿದೆ. ಇದನ್ನು ಹೊರತಾಗಿ, ಅಂತಿಮ ಹಂತದಲ್ಲಿ ಅಭ್ಯರ್ಥಿ ಬದಲಾದರೂ ಆಗಬಹುದು:

ಪ್ರಭಾವಿ ಸಚಿವರಾಗಿದ್ದ ವಿನಯ್ ಕುಮಾರ್ ಸೊರಕೆ

ಪ್ರಭಾವಿ ಸಚಿವರಾಗಿದ್ದ ವಿನಯ್ ಕುಮಾರ್ ಸೊರಕೆ

ಕಳೆದ ಸಿದ್ದರಾಮಯ್ಯನವರ ಸರಕಾರದಲ್ಲಿ ಪ್ರಭಾವಿ ಸಚಿವರಾಗಿದ್ದ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಲಾಲಾಜಿ ಮೆಂಡನ್ ವಿರುದ್ದ 11,917 ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಕಾಂಗ್ರೆಸ್ಸಿಗೆ ಅತ್ಯಂತ ಅನಿರೀಕ್ಷಿತ ಫಲಿತಾಂಶ ಇದಾಗಿತ್ತು. ಜಿಲ್ಲೆಯಲ್ಲಿ ಮೋದಿ ಹವಾ ಫುಲ್ ವರ್ಕೌಟ್ ಆಗಿತ್ತು. ಸೊರಕೆ, ಉಡುಪಿ-ಚಿಕ್ಕಮಗಳೂರಿನ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿಗಳಲ್ಲೊಬ್ಬರು ಎನ್ನುವ ಸುದ್ದಿಯಿದೆ. 1999ರ ಲೋಕಸಭಾ ಚುನಾವಣೆಯಲ್ಲಿ ಸೊರಕೆ ಗೆದ್ದುಬಂದಿದ್ದರೂ ಕೂಡಾ.

ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ : ಶೋಭಾ ಕರಂದ್ಲಾಜೆ

ಮೊಯ್ಲಿ, ಮೂಲತಃ ಉಡುಪಿ ಜಿಲ್ಲೆ ಕಾರ್ಕಳದವರು

ಮೊಯ್ಲಿ, ಮೂಲತಃ ಉಡುಪಿ ಜಿಲ್ಲೆ ಕಾರ್ಕಳದವರು

ಹಾಲೀ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದರಾಗಿರುವ ವೀರಪ್ಪ ಮೊಯ್ಲಿ, ಕ್ಷೇತ್ರದ ಬದಲಾವಣೆಗೆ ಮುಂದಾಗಿದ್ದಾರೆ ಎನ್ನುವ ಮಾಹಿತಿಯಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯ ಬಚ್ಚೇಗೌಡ ವಿರುದ್ದ ಮೊಯ್ಲಿ ಗೆದ್ದಿದ್ದರೂ, ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದರಿಂದ ಮತ ವಿಭಜನೆಯಾಗಿತ್ತು. ಕ್ಷೇತ್ರದಲ್ಲಿ ಹಿಂದಿನ ಚುನಾವಣೆಯಂತೆ ಅನುಕೂಲಕರ ವಾತಾವರಣ ಇಲ್ಲದೇ ಇರುವುದು, ಜೊತೆಗೆ ಮೈತ್ರಿಯಿಂದಾಗಿ ಜೆಡಿಎಸ್ ಅಭ್ಯರ್ಥಿ ಇಲ್ಲಿಂದ ಕಣಕ್ಕಿಳಿಯುವ ಸಾಧ್ಯತೆಯೂ ಇರುವುದರಿಂದ ಮೊಯ್ಲಿ ಉಡುಪಿ ಕ್ಷೇತ್ರದತ್ತ ಕಣ್ಣುಹಾಕಿದ್ದಾರೆ. ಮೊಯ್ಲಿ, ಮೂಲತಃ ಉಡುಪಿ ಜಿಲ್ಲೆ ಕಾರ್ಕಳದವರು.

ಎಚ್.ಸಿ.ಬಾಲಕೃಷ್ಣ, ಚೆಲುವರಾಯಸ್ವಾಮಿ ಬಿಜೆಪಿಗೆ?

ಜಯಪ್ರಕಾಶ್ ಹೆಗಡೆ, ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳಲ್ಲೊಬ್ಬರು

ಜಯಪ್ರಕಾಶ್ ಹೆಗಡೆ, ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳಲ್ಲೊಬ್ಬರು

ಒಂದು ಬಾರಿ ಕಾಂಗ್ರೆಸ್ ಟಿಕೆಟಿನಿಂದ ಸ್ಪರ್ಧಿಸಿ ಸಂಸದರೂ ಆಗಿರುವ ಜಯಪ್ರಕಾಶ್ ಹೆಗಡೆ, ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳಲ್ಲೊಬ್ಬರು. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟಿಗಾಗಿ ಭಾರೀ ಲಾಬಿ ನಡೆಸಿದ್ದ ಹೆಗಡೆಯವರ ಪ್ರಯತ್ನ ಫಲಗೂಡಿರಲಿಲ್ಲ. ಕ್ಲೀನ್ ಇಮೇಜ್ ರಾಜಕಾರಣಿಯೆಂದೇ ಹೆಸರಾಗಿರುವ ಹೆಗಡೆ ಬಿಜೆಪಿ ಟಿಕೆಟಿಗಾಗಿ ಭಾರೀ ಪ್ರಯತ್ನ ನಡೆಸುತ್ತಿದ್ದಾರೆ. ಅಸೆಂಬ್ಲಿ ಚುನಾವಣೆಯ ವೇಳೆ, ಲೋಕಸಭಾ ಟಿಕೆಟ್ ನೀಡುವುದಾಗಿ ಹೇಳಿಯೇ ಅವರನ್ನು ಸಮಾಧಾನ ಪಡಿಸಲಾಗಿತ್ತು ಎನ್ನುವ ಮಾಹಿತಿಯಿದೆ. ಒಂದು ವೇಳೆ, ಬಿಜೆಪಿ ಟಿಕೆಟ್ ಸಿಗದೇ ಇದ್ದರೆ, ಇವರು ಕಾಂಗ್ರೆಸ್ ಟಿಕೆಟಿನಿಂದ ಸ್ಪರ್ಧಿಸಿದರೂ ಆಶ್ಚರ್ಯ ಪಡಬೇಕಾಗಿಲ್ಲ, ಯಾಕೆಂದರೆ ಇದು ರಾಜಕೀಯ.

ತಂತ್ರ ರೂಪಿಸಿರುವ ಬಿಜೆಪಿ ಮೂವರು... ಆಷಾಢ ಮುಗಿದ ಕೂಡಲೇ ಲೋಕಸಭಾ ಚುನಾವಣಾ ಅಖಾಡಕ್ಕೆ ಯಡಿಯೂರಪ್ಪ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಸದಾನಂದ ಗೌಡ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಸದಾನಂದ ಗೌಡ

ಕೇಂದ್ರ ಸಚಿವ ಮತ್ತು ಹಾಲೀ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ ವಿ ಸದಾನಂದ ಗೌಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟಿಗಾಗಿ ಈಗಾಗಲೇ ಸರ್ವೇ, ಲಾಬಿ ನಡೆಸಲು ಆರಂಭಿಸಿದ್ದಾರೆ ಎನ್ನುವ ಮಾಹಿತಿಯಿದೆ. ಕಳೆದ ಚುನಾವಣೆಯಲ್ಲಿ ದೇಶಾದ್ಯಂತ ಇದ್ದ ಮೋದಿ ಹವಾದಿಂದ ಗೌಡ್ರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ನಿರಾಯಾಸವಾಗಿ ಗೆದ್ದಿದ್ದರು. ಆದರೆ, ಈಗ ಪಕ್ಷಕ್ಕೆ ಪೂರಕ ವಾತಾವರಣ ಇಲ್ಲದೇ ಇರುವುದರಿಂದ, ಉಡುಪಿ ಕ್ಷೇತ್ರದತ್ತ ಗೌಡ್ರ ಕಣ್ಣು ನೆಟ್ಟಿದೆ ಎನ್ನಲಾಗುತ್ತಿದೆ. ಈ ಕ್ಷೇತ್ರದಿಂದ ಒಮ್ಮೆ ಗೆದ್ದಿರುವ ಗೌಡ್ರು, ಮೂಲತಃ ಪಕ್ಕದ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನವರು.

ಮೂಲ ಕಾಂಗ್ರೆಸ್ಸಿಗ ಬಿ ಕೆ ಹರಿಪ್ರಸಾದ್

ಮೂಲ ಕಾಂಗ್ರೆಸ್ಸಿಗ ಬಿ ಕೆ ಹರಿಪ್ರಸಾದ್

ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳ ಪೈಕಿ ಹರಿದಾಡುತ್ತಿರುವ ಇನ್ನೊಂದು ಹೆಸರು ಮೂಲ ಕಾಂಗ್ರೆಸ್ಸಿಗ ಬಿ ಕೆ ಹರಿಪ್ರಸಾದ್ ಅವರದ್ದು. ಎಐಸಿಸಿಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಹರಿಪ್ರಸಾದ್, ಕಾಂಗ್ರೆಸ್ ಹೈಕಮಾಂಡ್ ಆಪ್ತವಲಯದಲ್ಲಿ ಕಾಣಿಸಿಕೊಂಡವರು. ಅವರೂ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟಿಗಾಗಿ ಟವೆಲ್ ಹಾಕುವ ಸಾಧ್ಯತೆಯಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಪರಾಜಿತ ಬಿಜೆಪಿ ಅಭರ್ಥಿ ಜೀವರಾಜ್

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಪರಾಜಿತ ಬಿಜೆಪಿ ಅಭರ್ಥಿ ಜೀವರಾಜ್

ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಪರಾಜಿತ ಬಿಜೆಪಿ ಅಭರ್ಥಿ ಡಿ ಎನ್ ಜೀವರಾಜ್ ಅವರನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವೊಲಿಸಲಾಗುತ್ತಿದೆ ಎನ್ನುವ ಮಾಹಿತಿಯಿದೆ. 2008, 2013ರ ಚುನಾವಣೆಯಲ್ಲಿ ಗೆದ್ದಿದ್ದ ಜೀವರಾಜ್, 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ದ 1,989 ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಜೀವರಾಜ್, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಉತ್ಸಾಹ ತೋರುತ್ತಿಲ್ಲ ಎನ್ನುವ ಸುದ್ದಿಯಿದೆ. ಆದರೂ, ಪ್ರಯತ್ನ ಮುಂದುವರಿದಿದೆ....

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
List of probable BJP and Congress candidates from Udupi-Chikmagalur parliament constituency. There are six probables including DV Sadananda Gowda, Veerappa Moily, B K Hari Prasad etc.,

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more