ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಂದು ವರ್ಷದ ಆಡಳಿತ: ಬೊಮ್ಮಾಯಿ ಸರಕಾರದಿಂದ ಹೊಸ ಯೋಜನೆಗಳ ಘೋಷಣೆ

|
Google Oneindia Kannada News

ಬೆಂಗಳೂರು, ಜುಲೈ 28: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದೆ. ಇದರ ಅಂಗವಾಗಿ ಬೊಮ್ಮಾಯಿ ಬುಧವಾರ ಹಲವು ನೂತನ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು.

ಈ ಕುರಿತು ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಇಂದು ಏರ್ಪಡಿಸಿದ್ದ ಒಂದು ವರ್ಷದ ಸಾಧನೆಯ ಮಾಹಿತಿ ನೀಡುವ ಸಮಾರಂಭವನ್ನು ರದ್ದುಪಡಿಸಲಾಗಿದೆ. ಆದರೆ ಸಾರ್ವಜನಿಕರಿಗೆ ಈವರೆಗೆ ಕೈಗೊಂಡ ಅಭಿವೃದ್ಧಿ ಯೋಜನೆಗಳ ಮಾಹಿತಿ ನೀಡುವುದು ಹಾಗೂ ಮುಂದೆ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಯೋಜನೆಗಳ ಮಾಹಿತಿ ನೀಡುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.

Breaking: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ಕೊರೊನಾ Breaking: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ಕೊರೊನಾ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಯುವಕರ ಸಬಲೀಕರಣ, ಶಿಕ್ಷಣ, ಆರೋಗ್ಯ ವಲಯದ ಮೂಲಸೌಕರ್ಯಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಈ ಕ್ಷೇತ್ರಗಳ ಅಭಿವೃದ್ಧಿ ಕುರಿತು ಯೋಜನೆಗಳ ಬಗ್ಗೆ ಅವರು ವಿವರಿಸಿದರು.

ಸ್ವಯಂ ಉದ್ಯೋಗ ಯೋಜನೆ: ಬಾಬು ಜಗಜೀವನ್ ರಾಂ ಅವರ ಹೆಸರಿನಲ್ಲಿ ಸ್ವಯಂ ಉದ್ಯೋಗ ಯೋಜನೆ ರೂಪಿಸಲಾಗಿದೆ. ಇದರಡಿ ಪ್ರತಿಯೊಂದು ಕ್ಷೇತ್ರದಲ್ಲಿ 100 ಪರಿಶಿಷ್ಟ ಜಾತಿ, ಪಂಗಡದ ಯುವಕರಿಗೆ ಸ್ವಯಂ ಉದ್ಯೋಗ ನೀಡಲಾಗುವುದು.

ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ 75ಯೂನಿಟ್ ವಿದ್ಯುತ್ ಉಚಿತ

ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ 75ಯೂನಿಟ್ ವಿದ್ಯುತ್ ಉಚಿತ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಡ ಕುಟುಂಬಗಳಿಗೆ ಉಚಿತವಾಗಿ 75ಯುನಿಟ್‌ವರೆಗೆ ವಿದ್ಯುತ್ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯ ಡಿಬಿಟಿ ವರ್ಗಾವಣೆ ಇಂದಿನಿಂದ ಪ್ರಾರಂಭವಾಗಲಿದೆ. ಸುಮಾರು 25ಲಕ್ಷ ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗಲಿದೆ. ಯೋಜನೆ ಸಾಕಾರಕ್ಕಾಗಿ ಸರ್ಕಾರ 700 ಕೋಟಿ ರೂ. ಒದಗಿಸಿದೆ ಎಂದರು.

ಶಾಲಾ ಕೊಠಡಿ ನಿರ್ಮಾಣ: ಆರೋಗ್ಯ ಕೇಂದ್ರ ಉನ್ನತಿಗೆ

ಶಾಲಾ ಕೊಠಡಿ ನಿರ್ಮಾಣ: ಆರೋಗ್ಯ ಕೇಂದ್ರ ಉನ್ನತಿಗೆ

ಕಳೆದ ಒಂದು ವರ್ಷದಲ್ಲಿ ಶಿಕ್ಷಣ ಹಾಗೂ ಅದರ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. 'ವಿವೇಕ' ಯೋಜನೆಯಡಿ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ 8,000 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ.

ಇನ್ನು ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ ಮಾಡಲು ನಿರ್ಧರಿಸಿದ್ದು, ಈಗಾಗಲೇ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸರಾಸರಿಗಿಂತ ಕಡಿಮೆ ಸೂಚ್ಯಂಕ ಇರುವ ಜನವಸತಿ ಪ್ರದೇಶಗಳಲ್ಲಿ ಸುಮಾರು 71 ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗುವುದು.

'ಸ್ತ್ರೀ ಸಾಮರ್ಥ್ಯ' ಯೋಜನೆ

'ಸ್ತ್ರೀ ಸಾಮರ್ಥ್ಯ' ಯೋಜನೆ

ಸ್ತ್ರೀಶಕ್ತಿ ಸಂಘಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ 1.50 ಲಕ್ಷ ರೂ. ನೀಡುವ ಜೊತೆಗೆ ಸುಲಭವಾಗಿ ಸಾಲ ಸೌಲಭ್ಯ ಒದಗಿಸಲು ಆಂಕರ್ ಬ್ಯಾಂಕ್ ಜೋಡಣೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ನೀಡುವ 'ಸ್ತ್ರೀ ಸಾಮರ್ಥ್ಯ ಯೋಜನೆ' ಗೆ ಚಾಲನೆ ನೀಡಲಾಗಿದೆ. ಇದರಿಂದ ಸುಮಾರು 5ಲಕ್ಷ ಮಹಿಳೆಯರು ಸ್ವಾವಲಂಬನೆ ಸಾಧಿಸಲಿದ್ದು, ಅವರಿಗೆ ಎಂಡ್ ಟು ಎಂಡ್‍ ನೆರವು ನೀಡಲಾಗುತ್ತಿದೆ ಎಂದು ಬೊಮ್ಮಾಯಿ ವಿವರಿಸಿದರು.

ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ

ರಾಜ್ಯದ ಸುಮಾರು 28,000 ಗ್ರಾಮಗಳಲ್ಲಿ ತಲಾ ಒಂದು ಒಂದು ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸಿ, ಯುವಕರಿಗೂ ಆರ್ಥಿಕ ನೆರವು, ಬ್ಯಾಂಕ್ ವ್ಯವಸ್ಥೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಯೋಜನೆಯನ್ನು ಬಿಜೆಪಿ ಸರ್ಕಾರ ರೂಪಿಸಿದೆ. ದೇಶಕ್ಕೆ ಯುವಕರೆ ಆಸ್ತಿ ಎಂಬುದನ್ನು ಬಿಜೆಪಿ ಮನಗಂಡಿದೆ. ಈ ಯೋಜನೆಯಿಂದ 5ಲಕ್ಷ ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುತ್ತದೆ. ನಿರುದ್ಯೋಗ ಸಮಸ್ಯೆಯೂ ನೀಗುತ್ತದೆ ಎಂದರು.

 ಪುಣ್ಯಕೋಟಿ ದತ್ತು ಯೋಜನೆ

ಪುಣ್ಯಕೋಟಿ ದತ್ತು ಯೋಜನೆ

ಗೋವುಗಳ ಸಂರಕ್ಷಣೆಯಲ್ಲಿ ಜನರ ಪಾಲುದಾರಿಕೆಯನ್ನು ಉತ್ತೇಜಿಸಲು ಪುಣ್ಯಕೋಟಿ ದತ್ತು ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಗೆ ಸಂಬಂಧಿಸಿದ ವೆಬ್‌ಸೈಟ್‌ ಅನ್ನು ಲೋಕಾರ್ಪಣೆ ಮಾಡಲಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ವಾರ್ಷಿಕ 11,000 ರೂ. ಪಾವತಿಸಿ, ಒಂದು ಗೋವಿನ ಒಂದು ವರ್ಷದ ನಿರ್ವಹಣೆಯನ್ನು ಮಾಡಬಹುದಾಗಿದೆ. ಅವರೇ ಗೋವುಗಳನ್ನು ದತ್ತು ತೆಗೆದುಕೊಳ್ಳಬಹುದು, ಅಥವಾ 11,000 ಮೊತ್ತ ಪಾವತಿಸಿದ್ದಲ್ಲಿ ಸರ್ಕಾರದ ಗೋ ಶಾಲೆಗಳಲ್ಲಿ ಗೋವುಗಳ ರಕ್ಷಣೆಗೆ ಈ ಮೊತ್ತವನ್ನು ಬಳಸಿಕೊಳ್ಳುತ್ತದೆ ಎಂದು ಹೇಳುವ ಮೂಲಕ ಗೋ ರಕ್ಷಣೆ ಕುರಿತು ಬೊಮ್ಮಾಯಿ ವಿವರಿಸಿದರು.

ವಿವಿಧ ವರ್ಗದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಣೆ

ವಿವಿಧ ವರ್ಗದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಣೆ

ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭಿಸಿರುವ ರಾಜ್ಯ ಸರ್ಕಾರದ ವತಿಯಿಂದ ರಾಜ್ಯದ 10ರಿಂದ 12 ಸಾವಿರ ಮಕ್ಕಳಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಅಲ್ಲದೇ ಈ ವಿದ್ಯಾನಿಧಿ ಯೋಜನೆಯನ್ನು ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿಸ್ತರಿಸಲಾಗಿದೆ. ಒಟ್ಟು ಸುಮಾರು 50,000 ಟ್ಯಾಕ್ಸಿ ಚಾಲಕರ ಮಕ್ಕಳು ಇದರ ಲಾಭ ಪಡೆಯಲಿದ್ದಾರೆ. ಹಿಂದುಳಿದ ವರ್ಗದ ಮಕ್ಕಳ ಶೈಕ್ಷಣಿಕತೆ ಅಭಿವೃದ್ಧಿಗೊಳ್ಳಲು ಈ ಯೋಜನೆ ಸಹಕಾರಿಯಾಗುತ್ತದೆ. ಸಾಲದೆಂಬಂತೆ ರಾಜ್ಯದಲ್ಲಿರುವ ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗಿದೆ.

ಈ ಎಲ್ಲ ವಿದ್ಯಾನಿಧಿ ಯೋಜನೆಗಳ ಕುರಿತು ಆದೇಶವನ್ನು ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಹೊರಡಿಸಲಾಗಿದೆ. ಹಿಂದೆಯೇ ಅನುದಾನದ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

English summary
CM Basavaraj Bommai led Karnataka government Completes one Year. As part of this List of Schemes Announced by CM Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X