ಅನಿರ್ಧಿಷ್ಟಾವಧಿಗೆ ವಿಧಾನಸಭೆ ಕಲಾಪ ಮುಂದೂಡಿಕೆ

Posted By:
Subscribe to Oneindia Kannada

ಬೆಂಗಳೂರು, ಜುಲೈ 18 : ಕರ್ನಾಟಕ ವಿಧಾನಸಭೆ ಅಧಿವೇಶನವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ. ನಿಗದಿಯಂತೆ ಜುಲೈ 30ರ ತನಕ ಅಧಿವೇಶನ ನಡೆಯಬೇಕಿತ್ತು. ಆದರೆ, ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಗದ್ದಲದ ಹಿನ್ನಲೆಯಲ್ಲಿ 12 ದಿನ ಮೊದಲೇ ಅಧಿವೇಶನ ಮೊಟಕುಗೊಳಿಸಲಾಗಿದೆ.

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಧರಣಿ ನಡೆಸುತ್ತಿದ್ದವು. ಆದ್ದರಿಂದ, ಕಳೆದ ವಾರದಿಂದ ಸದನವನ್ನು ಪದೇ-ಪದೇ ಮುಂದೂಡಲಾಗುತ್ತಿತ್ತು.

kb koliwad

ಸೋಮವಾರವೂ ಸದನದಲ್ಲಿ ಗದ್ದಲ ಮುಂದುವರೆಯಿತು. 'ಪ್ರತಿಪಕ್ಷಗಳು ಸಹಕಾರ ನೀಡದಿದ್ದರೆ ಅಧಿವೇಶನವನ್ನು ಮೊಟುಕುಗೊಳಿಸುವುದು ಅನಿವಾರ್ಯ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಮೈಸೂರಿನಲ್ಲಿ ಹೇಳಿದ್ದರು. ಸೋಮವಾರ ಸಂಜೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ಪ್ರತಿಪಕ್ಷಗಳ ಗದ್ದಲದ ನಡುವೆಯೇ ಅಧಿವೇಶನವನ್ನು ಮುಂದೂಡಿದರು.

ಹಿಂದಿನ ಸುದ್ದಿ : ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧನವಿನಿಯೋಗ ವಿಧೇಯಕ ಮಂಡಿಸಿದರು. ಪ್ರತಿಪಕ್ಷಗಳ ಗದ್ದಲದ ನಡುವೆಯೇ ವಿಧೇಯಕವನ್ನು ಅಂಗೀಕರಿಸಲಾಗಿದ್ದು, ಕಲಾಪವನ್ನು ಸಂಜೆ 4ಗಂಟೆಗೆ ಮುಂದೂಡಲಾಗಿದೆ.

ವಿಧಾನಪರಿಷತ್ತಿನಲ್ಲಿಯೂ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಗದ್ದಲಕ್ಕೆ ಕಾರಣವಾಯಿತು. ಕೆ.ಜೆ. ಜಾರ್ಜ್ ರಾಜೀನಾಮೆಗೆ ಪಟ್ಟು ಹಿಡಿದಿರುವ ಬಿಜೆಪಿ ಸದಸ್ಯರು ಧರಣಿ ನಡೆಸಿದರು. ಸದನದ ಬಾವಿಗಿಳಿದು, 'ನಮಗೆ ಸರ್ಕಾರದ ಉತ್ತರ ಬೇಡ ಜಾರ್ಜ್‌ ರಾಜೀನಾಮೆ ಬೇಕು' ಎಂದು ಘೋಷಣೆ ಕೂಗಿದರು. ಇದರಿಂದಾಗಿ ಸಭಾಪತಿ ಡಿ.ಎಚ್.ಶಂಕರಂಮೂರ್ತಿ ಅವರು ಕಲಾಪವನ್ನು ಮಧ್ಯಾಹ್ನ 3.30ಕ್ಕೆ ಮುಂದೂಡಿದರು.[ಒಂದು ದಿನದ ಕಲಾಪಕ್ಕೆ ಲಕ್ಷ-ಲಕ್ಷ ವೆಚ್ಚ, ಚರ್ಚೆ ಶೂನ್ಯ]

ಸಮಯ 11.30 : ವಿಧಾನಸಭೆ ಕಲಾಪ ಆರಂಭವಾಗಿದ್ದು 'ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯದೇ ಬೇರೆ ವಿಷಯದ ಕುರಿತು ಚರ್ಚೆ ನಡೆಸಲು ಅವಕಾಶ ನೀಡುವುದಿಲ್ಲ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕಲಾಪ ಆರಂಭವಾದ ಪ್ರತಿಪಕ್ಷ ಸದಸ್ಯರು ಗದ್ದಲ ಆರಂಭಿಸಿದರು.[ಜಾರ್ಜ್ ರಾಜೀನಾಮೆಗೆ ವಿಪಕ್ಷಗಳ ಬಿಗಿ ಪಟ್ಟು]

ಪ್ರತಿಪಕ್ಷಗಳು ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ವಿಚಾರದಲ್ಲಿ ಧರಣಿ ಮುಂದುವರೆಸಿದ್ದರಿಂದ, ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ಕಲಾಪವನ್ನು ಅರ್ಧಗಂಟೆಗಳ ಕಾಲ ಮುಂದೂಡಿದರು.[ಗದ್ದಲದ ನಡುವೆಯೇ ಪರಿಷತ್ತಿನಲ್ಲಿ 3 ವಿಧೇಯಕಗಳಿಗೆ ಒಪ್ಪಿಗೆ]

ಹಿಂದಿನ ಸುದ್ದಿ : ಎರಡು ದಿನಗಳ ಬಿಡುವಿನ ಬಳಿಕ ವಿಧಾನಮಂಡಲ ಅಧಿವೇಶನ ಇಂದು ಪುನಃ ಆರಂಭವಾಗಿದೆ. ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಧರಣಿ ಮುಂದುವರೆಸುವ ಸಾಧ್ಯತೆ ಇದೆ.

ಕರ್ನಾಟಕ ಸರ್ಕಾರ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದೆ. ನ್ಯಾ.ಕೆ.ಎನ್.ಕೇಶವನಾರಾಯಣ ಅವರು ನ್ಯಾಯಾಂಗ ತನಿಖೆಯನ್ನು ನಡೆಸಲಿದ್ದಾರೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಸಿಬಿಐ ತನಿಖೆಗೆ ಒತ್ತಾಯಿಸುತ್ತಿವೆ.

ಇಂದು ಸದನದಲ್ಲಿ ಗದ್ದಲ ಮುಂದುವರೆದರೆ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲು ನಿರ್ಧರಿಸಲಾಗಿದೆ. 'ಪ್ರತಿಪಕ್ಷಗಳು ಸಹಕಾರ ನೀಡದಿದ್ದರೆ ವಿಧಾನಸಭೆ ಅಧಿವೇಶನವನ್ನು ಮೊಟುಕುಗೊಳಿಸುವುದು ಅನಿವಾರ್ಯ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಮೈಸೂರಿನಲ್ಲಿ ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Budget session 2016 : Monday, July 18 highlights. What happened in the Assembly today?.
Please Wait while comments are loading...