ಹುಬ್ಬಳ್ಳಿಯಲ್ಲಿ ಕಟ್ಟಡ ಕುಸಿತ, 7 ಸಾವು

Posted By:
Subscribe to Oneindia Kannada

ಹುಬ್ಬಳ್ಳಿ, ಫೆಬ್ರವರಿ 09 : ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಇಲಾಖೆಗೆ ಸೇರಿದ 50 ವರ್ಷ ಹಳೆಯ ಪಾರ್ಸೆಲ್ ಕಟ್ಟಡ ಸೋಮವಾರ ಮಧ್ಯಾಹ್ನ ಕುಸಿದು ಬಿದ್ದಿದೆ. ಭೀಕರ ದುರಂತದಲ್ಲಿ ಈವರೆಗೆ 7 ಜನರು ದುರ್ಮರಣಕ್ಕೀಡಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಸತತ 17 ಗಂಟೆಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಮಂಗಳವಾರ ಬೆಳಗ್ಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಗಳು ಪೊಲೀಸ್ ಪದೇ ಎಸ್.ಎಸ್.ದೀಕ್ಷಿತ್ ಅವರ ಶವವನ್ನು ಹೊರತೆಗೆದಿದ್ದಾರೆ. ಇನ್ನೂ ಮೂವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.[ಸೋಮವಾರದ ಕಾರ್ಯಾಚರಣೆ ಮಾಹಿತಿ]

hubballi

ಸಮಯ 11 ಗಂಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ಗಂಟೆಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಲಿದ್ದಾರೆ

ಸಮಯ 10 ಗಂಟೆ : ಕಟ್ಟಡದ ಅವಶೇಷಗಳಡಿ ಸಿಲುಕಿ ಮೃತಪಟ್ಟ 7 ಜನರ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗುತ್ತದೆ.

ಸಮಯ 9 ಗಂಟೆ : 'ಕಚೇರಿ ಸ್ಥಳಾಂತಕ್ಕೆ ಸೂಚಿಸಿದ್ದರೂ ಇದುವರೆಗೂ ಯಾಕೆ ಇಲ್ಲಿಯೇ ಕಾರ್ಯನಿರ್ವಹಿಸಲಾಗುತ್ತಿತ್ತು ಎಂಬುದು ತಿಳಿದಿಲ್ಲ. ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಘಟನೆಗೆ ಕಾರಣರಾದ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು' ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ. [ಚಿತ್ರಗಳು : ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಆಗಿದ್ದೇನು?]

ಸಮಯ 8 ಗಂಟೆ : ಇಂದು ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಪ್ರಚಾರ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಗೂ ಭೇಟಿ ನೀಡುವ ಸಾಧ್ಯತೆ ಇದೆ.

ಸಮಯ 7.30 : ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಸೋಮವಾರ ರಾತ್ರಿ ಭೇಟಿ ನೀಡಿದ್ದ ಕೇಂದ್ರ ಸಚಿವ ಅನಂತಕುಮಾರ್ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದರು. ಗಾಯಗೊಂಡವರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.

ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ. ತಾಯಿ ಮತ್ತು ಮಗು ಅವಶೇಷಗಳಡಿ ಸಿಲುಕಿರಬಹುದು ಎಂದು ಶಂಕಿಸಲಾಗಿದ್ದು ಕಾರ್ಯಾಚರಣೆ ಮುಂದುವರೆದಿದೆ. [ಚಿತ್ರಗಳು : ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಕಟ್ಟಡ ಕುಸಿತ]

ಮೃತಪಟ್ಟವರು : ಹುಬ್ಬಳ್ಳಿಯ ಕೈಲಾಸ ರಂಜನ್‌ (68), ಸಂಡೂರಿನ ಎಂ.ಗಾಳೆಪ್ಪ (39), ಬುಕ್ಕಿಂಗ್ ಕಚೇರಿಯ ವಾಣಿಜ್ಯ ವಿಭಾಗದ ಮುಖ್ಯ ಗುಮಾಸ್ತ ತಿಮ್ಮಾರೆಡ್ಡಿ (50), ಕೂಲಿ ಕಾರ್ಮಿಕ ಸಲೀಂ ರಫೀಕ್‌ ಈಟಿ (38), ಪೊಲೀಸ್‌ ಇನ್‌ಸ್ಪೆಕ್ಟರ್‌ ಕಚೇರಿ ರೈಟರ್‌ ಸಿದ್ದಯ್ಯ ಹಿರೇಮಠ (32), ಪೊಲೀಸ್‌ ಕಚೇರಿ ದ್ವಿತೀಯ ದರ್ಜೆ ಸಹಾಯಕಿ ದಾಕ್ಷಾಯಿಣಿ ಗೌಡರ (35), ಪೊಲೀಸ್ ಪೇದೆ ಎಸ್.ಎಸ್.ದೀಕ್ಷಿತ್

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Hubballi central railway station parcel counter building collapsed on Monday, February 8, 2016. 7 found dead, more than 3 people trapped inside the collapsed building. Rescue operation continues on Tuesday morning.
Please Wait while comments are loading...