ಮಹದಾಯಿ ಹೋರಾಟ, ಅನ್ನದಾತರ ಬಂಧನ
ಬೆಂಗಳೂರು, ಜುಲೈ 29 : ಉತ್ತರ ಕರ್ನಾಟಕದಲ್ಲಿ ಮಹದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ನಡೆಸುತ್ತಿರುವ 130ಕ್ಕೂ ಅಧಿಕ ರೈತರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಹೋರಾಟ ಹತ್ತಿಕ್ಕಲು ಸರ್ಕಾರ ಪೊಲೀಸರನ್ನು ಬಳಕೆ ಮಾಡಿಕೊಳ್ಳುತ್ತಿದೆ.
ಹುಬ್ಬಳ್ಳಿ-ಧಾರವಾಡದಲ್ಲಿ 120, ಗದಗದಲ್ಲಿ 18 ರೈತರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಹೋರಾಟ ಹಿಂಸಾಚಾರಕ್ಕೆ ತಿರುಗಿದ ನವಲಗುಂದದಲ್ಲಿ ನಿಷೇಧಾಜ್ಞೆಜಾರಿಯಲ್ಲಿದ್ದು, ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.[ಕಳಸಾ ಹೋರಾಟದ ಚಿತ್ರಗಳು]

ಪರಿಸ್ಥಿತಿಯಲ್ಲಿ ಹತೋಟಿಗೆ ತರಲು ಬಿಎಸ್‌ಎಫ್ ಪಡೆಯನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ. ಬಂಧಿತರಾಗರುವ ರೈತರನ್ನು ಧಾರವಾಡದ ಕೋರ್ಟ್‌ಗೆ ಇಂದು ಹಾಜರುಪಡಿಸಲಿದ್ದು, ಅಲ್ಲಿಯೂ ಬೃಹತ್ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.[ಮಹದಾಯಿ ತೀರ್ಪು: ಕನ್ನಡಿಗರು ಗಮನಿಸಬೇಕಾದ್ದು ಏನು?]
* ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲು ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ರೈತರು ಬೆಳಗ್ಗೆ 11 ಗಂಟೆಗೆ ಸಭೆ ನಡೆಸಲಿದ್ದಾರೆ.
* ನರಗುಂದ ಮತ್ತು ಗದಗ ಭಾಗದ ರೈತರು ಸಹ ಗದಗದಲ್ಲಿ ಇಂದು ಸಭೆ ನಡೆಸಲಿದ್ದು, ಮುಂದಿನ ಹೋರಾಟದ ರೂಪುರೇಷೆ ತಯಾರಿಸಲಿದ್ದಾರೆ.












Click it and Unblock the Notifications