Actress Ramya: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ನಟಿ ರಮ್ಯಾ ಹೇಳಿದ್ದೇನು ಗೊತ್ತಾ?
ಬೆಂಗಳೂರು, ಆಗಸ್ಟ್ 02: ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡಿತ್ತು. ಇದೀಗ ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಈ ಕುರಿತು ಮಾಜಿ ಸಂಸದೆ ಹಾಗೂ ನಟಿ ಅವರು ಪ್ರತಿಕ್ರಿಯಿಸಿದ್ದಾರೆ.
ಮಾಜಿ ಸಂಸದೆ, ನಟಿ ರಮ್ಯಾ ಎಕ್ಸ್ ಖಾತೆಯಲ್ಲಿ ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ರಮ್ಯಾ ಪ್ರತಿಕ್ರಿಯಿಸಿದ್ದಾರೆ. ಶುಕ್ರವಾರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ ಸಂದರ್ಭದಲ್ಲಿಯೂ ರಮ್ಯಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಜೊತೆಗೆ 11 ಲಕ್ಷ ದಂಡವನ್ನ ವಿಧಿಸಿದೆ.

ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಶಿಕ್ಷೆ ಆರಂಭ, ಇಲ್ಲಿಯವರೆಗಿನ ಜೈಲುವಾಸ ಮೈನಸ್ ಆಗುವುದಿಲ್ಲ. ಏಕೆಂದರೆ ಈ ಪ್ರಕರಣದಲ್ಲಿ ಮಾಜಿ ಸಂಸದರಾದ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ, ಕೇವಲ ಬಾಡಿ ವಾರಂಟ್ ಮೇಲೆ ಪ್ರಜ್ವಲ್ ರೇವಣ್ಣ ಅವರನ್ನ ವಶಕ್ಕೆ ಪಡೆಯಲಾಗಿತ್ತು. ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ. ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ.
ಪ್ರಜ್ವಲ್ ರೇವಣ್ಣ ಶಿಕ್ಷೆಯ ವಿವರ ಇಲ್ಲಿದೆ.
* ಐಪಿಸಿ ಸೆಕ್ಷನ್ 376 (2)(k)ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ
*376(2)(n) ಅಡಿ ಪದೇಪದೆ ಅತ್ಯಾಚಾರಕ್ಕೆ ಜೀವನಪರ್ಯಂತ ಜೈಲು, 5 ಲಕ್ಷ ರೂ. ದಂಡ
*ಐಪಿಸಿ ಸೆಕ್ಷನ್ 354(A) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
*ಐಪಿಸಿ ಸೆಕ್ಷನ್ 354 (B) ಅಡಿ 7 ವರ್ಷ ಸೆರೆವಾಸ, 50,000 ರೂಪಾಯಿ ದಂಡ
*ಐಪಿಸಿ ಸೆಕ್ಷನ್ 354 (c) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
*ಸೆಕ್ಷನ್ 506 ಅಡಿ 2 ವರ್ಷ ಸೆರೆವಾಸ 10,000 ರೂ. ದಂಡ
*ಸೆಕ್ಷನ್ 201 ಅಡಿ 3 ವರ್ಷ ಸೆರೆವಾಸ 25,000 ರೂ. ದಂಡ
*ಐಟಿ ಕಾಯ್ದೆ ಸೆ.66(E) ಅಡಿ 3 ವರ್ಷ 25,000 ರೂ. ದಂಡ












Click it and Unblock the Notifications