ಚಿಂಚೋಳಿ, ಕುಂದಗೋಳ ಬಿಜೆಪಿ ಟಿಕೆಟ್‌ಗಾಗಿ ಬಾರಿ ಲಾಬಿ
ಬೆಂಗಳೂರು, ಏಪ್ರಿಲ್ 24 : ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭೆ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ಗಾಗಿ ಬಾರಿ ಪೈಪೋಟಿ ನಡೆಯುತ್ತಿದೆ. ಮೇ 19ರಂದು ಉಪ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದ ಚಿಂಚೋಳಿ ಕ್ಷೇತ್ರ, ಸಿ.ಎಸ್.ಶಿವಳ್ಳಿ ಅವರ ನಿಧನದಿಂದಾಗಿ ಕುಂದಗೋಳ ಕ್ಷೇತ್ರದ ಶಾಸಕ ಸ್ಥಾನ ತೆರವಾಗಿದೆ. ಈಗ ಉಪ ಚುನಾವಣೆಗೆ ಅಭ್ಯರ್ಥಿಗಳು ಯಾರು? ಎಂಬುದು ಪ್ರಶ್ನೆ.
ಕುಂದಗೋಳ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಚಿಕ್ಕನಗೌಡ್ರು, ಎಂ.ಆರ್.ಪಾಟೀಲ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಚಿಕ್ಕನಗೌಡ್ರು ಅವರು ಕರ್ನಾಟಕ ಬಿ.ಎಸ್.ಯಡಿಯೂರಪ್ಪ ಅವರು ಸಂಬಂಧಿಕರು.

ಚಿಂಚೋಳಿ ಕ್ಷೇತ್ರದ ಟಿಕೆಟ್‌ಗಾಗಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸುನೀಲ್ ವಲ್ಯಾಪುರೆ ಮತ್ತು ಡಾ.ಉಮೇಶ್ ಜಾಧವ್ ಕುಟುಂಬಸ್ಥರ ನಡುವೆ ಪೈಪೋಟಿ ನಡೆಯುತ್ತಿದೆ. ಸುನೀಲ್ ವಲ್ಯಾಪುರೆ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.
ಚಿಂಚೋಳಿ ಕ್ಷೇತ್ರದಿಂದ ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಬಯಸಿದೆ. ಕೆ.ರತ್ನಪ್ರಭಾ ಅವರು ಕೆಲವು ದಿನಗಳ ಹಿಂದೆ ಬಿಜೆಪಿ ಸೇರಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 29 ಕೊನೆಯ ದಿನವಾಗಿದೆ. ಏಪ್ರಿಲ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಮೇ 2 ಕೊನೆಯ ದಿನವಾಗಿದೆ. ಮೇ 19ರಂದು ಚುನಾವಣೆ ನಡೆಯಲಿದೆ.












Click it and Unblock the Notifications