ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇ 17ರಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಬೆಂಗಳೂರು ಮೇ 12. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಮಧ್ಯಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದಾಗಿ ರಾಜ್ಯದಲ್ಲೂ ಜಿಲ್ಲಾ, ತಾಲೂಕು ಪಂಚಾಯ್ತಿ ಸೇರಿದಂತೆ ಚುನಾವಣೆ ಬಾಕಿ ಇರುವ ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆಯ ಕಣ ರಂಗೇರುತ್ತಿದೆ.

ಬಹುತೇಕ ಅಭ್ಯರ್ಥಿಗಳು ಇನ್ನೇ ಚುನಾವಣೆ ಘೋಷಣೆಯಾಗಿಯೇ ಬಿಟ್ಟಿತು ಎಂಬ ಉಮೇದಿನಲ್ಲಿದ್ದಾರೆ. ಅತ್ತ ಸರಕಾರ, ಹಿಂದುಳಿದ ವರ್ಗಳ ಮೀಸಲು ಒದಗಿಸುವ ಕಾರಣ ಮುಂದಿಟ್ಟುಕೊಂಡು ಚುನಾವಣೆ ಮುಂದೂಡಿಸಲು ಪ್ರಯತ್ನ ನಡೆಸುತ್ತಿರುವುದರ ಮಧ್ಯಯೇ, ರಾಜ್ಯ ಚುನಾವಣಾ ಆಯೋಗ ಚುನಾವಣೆಯನ್ನು ನಡೆಸಲು ಸಿದ್ಧತೆ ನಡೆಸಿದೆ.

ಅದು ಆದಷ್ಟು ಬೇಗ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಹೈಕೋರ್ಟ್ ನಲ್ಲಿ ಗುರುವಾರ ಮೆಮೋ ಸಲ್ಲಿಸಿದೆ.

 Local bodies elections: HC will hear election commission plea on May 17

ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ರಾಜ್ಯ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧದ ಅರ್ಜಿಯನ್ನು ಮೇ17ರಂದು ಹೈಕೋರ್ಟ್ ವಿಚಾರಣೆಗೆ ಮನವಿ ಮಾಡಿತ್ತು.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಮೆಮೋ ಪರಿಗಣಿಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ಪ್ರಸಾದ್ ಹಾಗೂ ನ್ಯಾ. ಎಂ.ಜಿ.ಎಸ್ ಕಮಾಲ್ ಅವರಿದ್ದ ರಜಾಕಾಲದ ವಿಶೇಷ ನ್ಯಾಯಪೀಠ ಮೇ 17ರಂದು ಮಂಗಳವಾರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಆದೇಶಿಸಿದೆ.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ನ್ಯಾಯವಾದಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡಿ, ಬಾಕಿ ಇರುವ ಎಲ್ಲ ಸಂಸ್ಥೆಗಳ ಚುನಾವಣೆಯನ್ನು ನಡೆಸುವಂತೆ ಕಟ್ಟಾಜ್ಞೆ ವಿಧಿಸಿದೆ.

ಅದರಂತೆ, ರಾಜ್ಯದಲ್ಲೂ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಸಬೇಕಾಗಿದೆ. ಈಗಾಗಲೇ ಚುನಾವಣೆ ಸಾಕಷ್ಟು ವಿಳಂಬವಾಗಿದೆ. ಈ ಕುರಿತ ಚುನಾವಣಾ ಆಯೋಗದ ಅರ್ಜಿ ವಿಚಾರಣಾ ಹಂತದಲ್ಲಿದೆ. ಸುಪ್ರೀಂಕೋರ್ಟ್ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದ್ದು, ಅದಕ್ಕಾಗಿ ಮೆಮೋ ಸಲ್ಲಿಸಲಾಗಿದೆ. ಮೇ 17ರಂದು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿಬೇಕು ಎಂದು ಮನವಿ ಮಾಡಿದರು.

ಆ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿಯನ್ನು ಮೇ 17ರಂದು ವಿಚಾರಣೆ ನಡೆಸುವುದಾಗಿ ಹೇಳಿ, ವಿಚಾರಣೆಯನ್ನು ಮುಂದೂಡಿತು.

ಆಯೋಗದ ಸಿದ್ಧತೆಗೆ ಸರ್ಕಾರ ಬ್ರೇಕ್:

ರಾಜ್ಯ ಚುನಾವಣಾ ಆಯೋಗ ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿ.ಪಂ ಹಾಗೂ ತಾ.ಪಂಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿತ್ತಯ. ಅದಕ್ಕಾಗಿ ಚುನಾವಣಾ ಆಯೋಗ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿಯನ್ನೂ ಸಹ ಪ್ರಕಟ ಮಾಡಿತ್ತು ಹಾಗೂ ಮೀಸಲು ನಿಗದಿಯ ಕರಡು ಸಹ ಪ್ರಕಟಿಸಲಾಗಿತ್ತು.

ಇನ್ನೇನು ದಿನಾಂಕ ಘೋಷಣೆ ಮಾಡಬೇಕೆನ್ನುವಷ್ಟರಲ್ಲಿ ಸರಕಾರ, ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲು ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಅದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಆ ಅರ್ಜಿ ಇನ್ನೂ ವಿಚಾರಣಾ ಹಂತದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+