ಸ್ಥಳೀಯ ಸಂಸ್ಥೆಗಳ ಚುನಾವಣೆ ಮೈತ್ರಿ, ಕಾಂಗ್ರೆಸ್ ಹೇಳಿದ್ದೇನು?

ಬೆಂಗಳೂರು, ಆಗಸ್ಟ್ 03 : ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದೆ. ಆದರೆ, ಆ.29ರಂದು ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎರಡೂ ಪಕ್ಷಗಳ ನಡುವೆ ಯಾವುದೇ ಮೈತ್ರಿ ಇರುವುದಿಲ್ಲ!.

ರಾಜ್ಯ ಚುನಾವಣಾ ಆಯೋಗ ಗುರುವಾರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಒಟ್ಟಾಗಿ ಚುನಾವಣೆ ಎದುರಿಸಲಿವೆಯೇ? ಎಂಬ ಪ್ರಶ್ನೆ ಎದ್ದಿತ್ತು. ಆದರೆ, ಕಾಂಗ್ರೆಸ್ ತನ್ನ ನಿಲುವು ಹೇಳಿದೆ, ಜೆಡಿಎಸ್ ಇನ್ನೂ ಮೌನವಾಗಿದೆ.

ಕರ್ನಾಟಕ ಕಾಂಗ್ರೆಸ್‌ ಮೈತ್ರಿಯ ಬಗ್ಗೆ ಶುಕ್ರವಾರ ತೀರ್ಮಾನ ಕೈಗೊಂಡಿದೆ. ಚುನಾವಣಾ ಪೂರ್ವ ಮೈತ್ರಿ ಎರಡು ಪಕ್ಷದ ನಡುವೆ ಇಲ್ಲ. ಅಗತ್ಯವಿದ್ದರೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.

'ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. ಅಗತ್ಯವಿದ್ದರೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳಿ. ಮೈತ್ರಿ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ಸ್ಥಳೀಯ ನಾಯಕರಿಗೆ ಸೇರಿದ್ದು' ಎಂಬ ಸ್ಪಷ್ಟ ಸಂದೇಶವನ್ನು ಕೆಪಿಸಿಸಿ ಸ್ಥಳೀಯ ನಾಯಕರಿಗೆ ಕಳುಹಿಸಿ ಕೊಟ್ಟಿದೆ...

ಕಾಂಗ್ರೆಸ್ ಹೇಳುವುದೇನು?

ಕಾಂಗ್ರೆಸ್ ಹೇಳುವುದೇನು?

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಚುನಾವಣೆ ಮುಗಿದ ಬಳಿಕ ಅಗತ್ಯವಿದ್ದರೆ ಮೈತ್ರಿ ಮಾಡಿಕೊಳ್ಳೋಣ ಎಂಬ ತೀರ್ಮಾನವನ್ನು ಕಾಂಗ್ರೆಸ್ ತೆಗೆದುಕೊಂಡಿದೆ.

ಈಗಾಗಲೇ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದ ಬಗ್ಗೆ ಕೆಲವು ಜಿಲ್ಲೆಗಳಲ್ಲಿ ಅಪಸ್ವರ ಕೇಳಿಬರುತ್ತಿದೆ. ಆದ್ದರಿಂದ, ಕಾರ್ಯಕರ್ತರ ಅಸಮಾಧಾನವನ್ನು ಬಗೆಹರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದು ಸದ್ಯದ ಮಾಹಿತಿ.

ಜೆಡಿಎಸ್ ವಿರೋಧ

ಜೆಡಿಎಸ್ ವಿರೋಧ

ಚುನಾವಣಾ ಪೂರ್ವ ಮೈತ್ರಿಗೆ ಜೆಡಿಎಸ್ ಸಹ ವಿರೋಧ ವ್ಯಕ್ತಪಡಿಸುತ್ತಿದೆ. ಹಲವು ಜೆಡಿಎಸ್ ನಾಯಕರು ಕಾಂಗ್ರೆಸ್ ಜೊತೆ ಮೈತ್ರಿ ಬೇಡ ಎಂದು ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ.

ಚುನಾವಣಾ ಪೂರ್ವ ಹೊಂದಾಣಿಕೆ ಬೇಡ. ಅಗತ್ಯವಿದ್ದರೆ ಚುನಾವಣೆ ನಂತರ ಮೈತ್ರಿ ಮಾಡಿಕೊಳ್ಳೋಣ ಎಂದು ಜೆಡಿಎಸ್ ನಾಯಕರು ಕುಮಾರಸ್ವಾಮಿ ಅವರ ಬಳಿ ಹೇಳಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ

ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ

2018ರ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಲೋಕಸಭೆ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳುವುದಾಗಿ ಉಭಯ ಪಕ್ಷಗಳ ನಾಯಕರು ಘೋಷಣೆ ಮಾಡಿದ್ದಾರೆ. ಆದರೆ, ಸೀಟುಗಳ ಹಂಚಿಕೆ ಇನ್ನೂ ಆಗಿಲ್ಲ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದೆ. ಕಾಂಗ್ರೆಸ್‌ಗೆ ಮೇಯರ್ ಸ್ಥಾನ, ಜೆಡಿಎಸ್‌ ಉಪ ಮೇಯರ್ ಸ್ಥಾನವನ್ನು ಹಂಚಿಕೊಂಡಿವೆ.

ಆಗಸ್ಟ್ 29 ಚುನಾವಣೆ, ಸೆ.1 ಫಲಿತಾಂಶ

ಆಗಸ್ಟ್ 29 ಚುನಾವಣೆ, ಸೆ.1 ಫಲಿತಾಂಶ

ರಾಜ್ಯ ಚುನಾವಣಾ ಆಯೋಗ 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಿದೆ. ಆಗಸ್ಟ್ 29ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 1ರಂದು ಫಲಿತಾಂಶ ಪ್ರಕಟವಾಗಲಿದೆ.

ಮೊದಲ ಹಂತದಲ್ಲಿ 29 ನಗರ ಸಭೆ, 53 ಪುರಸಭೆ, 23 ಪಟ್ಟಣ ಪಂಚಾಯಿತಿ ಸೇರಿ 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಚುನಾವಣಾ ನೀತಿ ಸಂಹಿತೆ ಗುರುವಾರದಿಂದಲೇ ಜಾರಿಗೆ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+