ಕರ್ನಾಟಕ ವಿಧಾನಸಭೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್‌ಗೆ ಸಾಲುಸಾಲು ಸ್ಥಳೀಯ ಚುನಾವಣೆಗಳೇ ಸವಾಲು
ಬೆಂಗಳೂರು, ಮೇ 26: ಕರ್ನಾಟಕ ವಿಧಾನಸಭೆಯನ್ನು ಕಾಂಗ್ರೆಸ್ ವಶಪಡಿಸಿಕೊಂಡಿದೆ. ಮುಂದಿನ ವರ್ಷ ಲೋಕಸಭೆಗೆ ಚುನಾವಣೆಗಳು ನಡೆಯಲಿವೆ. ಅದಕ್ಕೂ ಮುನ್ನ ನಡೆಯಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಕಾಂಗ್ರೆಸ್ ಪಕ್ಷ ಎದುರಿಸಬೇಕಿದೆ. ಈ ಗುರುತರವಾದ ಜವಾಬ್ದಾರಿ ಕರ್ನಾಟಕ ಕಾಂಗ್ರೆಸ್ ನಾಯಕರ ಮೇಲಿದೆ.
ರಾಜ್ಯ ಚುನಾವಣಾ ಆಯೋಗವು ಹಲವು ತಿಂಗಳುಗಳಿಂದ ಬಿಬಿಎಂಪಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ತೀರ್ಪುಗಳಿಗಾಗಿ ಕಾಯುತ್ತಿದೆ.

ಬಿಬಿಎಂಪಿ ಕೌನ್ಸಿಲ್ ಅವಧಿಯು ಸೆಪ್ಟೆಂಬರ್ 2020 ರಲ್ಲಿ ಕೊನೆಗೊಂಡಿದೆ. ಆದರೂ, ಪ್ರತಿಷ್ಠಿತ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆದಿಲ್ಲ. ಇದು ಇನ್ನಷ್ಟೇ ನಡೆಯಬೇಕಿದೆ. ಆದಷ್ಟು ಬೇಗ ಚುನಾವಣೆ ಘೋಷಿಸುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಹೊಸ ಸರ್ಕಾರದಿಂದ ಜನತೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಒತ್ತಿ ಹೇಳಿದ್ದಾರೆ. ಕೆಆರ್ ವೃತ್ತದಲ್ಲಿ ಮುಳುಗಿ ಅಂಡರ್‌ಪಾಸ್‌ನಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ನಂತರ ಬಿಬಿಎಂಪಿ ಮೇಲೆ ಗುರುತರವಾದ ಜವಾಬ್ದಾರಿಗಳನ್ನು ಹೊರಿಸಲಾಗಿದೆ. ಆಡಳಿತ ಯಂತ್ರ ಸೂಸುತ್ರವಾಗಿ ನಡೆಯಬೇಕೆಂದರೆ ಚುನಾವಣೆಗಳನ್ನು ನಡೆಸಲೇಬೇಕಿದೆ.

ಹಿಂದಿನ ಬಿಜೆಪಿ ಸರ್ಕಾರವು ಎಲ್ಲಾ 243 ವಾರ್ಡ್‌ಗಳ ವಿಂಗಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿತ್ತು. ಈಗ, ಸರ್ಕಾರವು ಡಿಲಿಮಿನೇಷನ್ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.
ಪ್ರತಿಪಕ್ಷವಾಗಿ ನಾವು ಚುನಾವಣೆಗೆ ಬೇಡಿಕೆ ಇಟ್ಟಿದ್ದೇವು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ವಿಳಂಬವಾಗಲು ನಾವು ಬೀಡುವುದಿಲ್ಲವೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಬೆಂಗಳೂರಿನ 28 ಸ್ಥಾನಗಳಲ್ಲಿ ಬಿಜೆಪಿ 16 ಸ್ಥಾನಗಳನ್ನು ಗೆದ್ದಿರುವುದರಿಂದ ಇದು ಸವಾಲಾಗಿದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

ಮತ್ತೊಂದೆಡೆ, 31 ಜಿಲ್ಲಾ ಪಂಚಾಯಿತಿ ಮತ್ತು 238 ತಾಲ್ಲೂಕು ಪಂಚಾಯಿತಿಗಳ ಚುನಾವಣೆಯೂ ಬಾಕಿ ಉಳಿದಿದೆ. ಇದೂ ಸಹ ಎರಡೂವರೆ ವರ್ಷಗಳ ಹಿಂದೆಯೇ ನಡೆಯಬೇಕಿತ್ತು. ವಿವಿಧ ಕಾರಣಗಳಿಗಾಗಿ, ಹಿಂದಿನ ಬಿಜೆಪಿ ಸರ್ಕಾರವು ರಾಜ್ಯ ಚುನಾವಣಾ ಆಯೋಗದಿಂದ ಡಿಲಿಮಿಟೇಶನ್ ಮಾಡುವ ಅಧಿಕಾರವನ್ನು ಹಿಂಪಡೆದಿತ್ತು.
ಡಿಲಿಮಿಟೇಶನ್ ಮತ್ತು ಮೀಸಲಾತಿ ಪ್ರಕ್ರಿಯೆಯು ಇತ್ತೀಚೆಗಷ್ಟೇ ಮುಕ್ತಾಯಗೊಂಡಿದ್ದು, ಕಾಂಗ್ರೆಸ್‌ಗೆ ಹೊಸ ಸವಾಲು ಎದುರಾದಂತಾಗಿದೆ. ಆದರೂ, ಈ ಬಾರಿಯ ವಿಧಾನಸಭೆ ಚುಣಾವಣೆಯಲ್ಲಿ ಪಕ್ಷವು ಅಭೂತಪೂರ್ವ ಯಶಸ್ಸು ಸಾಧಿಸಿದ ನಂತರ ಕಾಂಗ್ರೆಸ್ ನಾಯಕರಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ.












Click it and Unblock the Notifications