ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್ ಡೌನ್; ಸೋಮವಾರ ಯಡಿಯೂರಪ್ಪ ಮಹತ್ವದ ಸಭೆ

|
Google Oneindia Kannada News

ಬೆಂಗಳೂರು, ಜುಲೈ 12 : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಿರುವ ಜಿಲ್ಲೆಗಳು ಲಾಕ್ ಡೌನ್ ಆಗಲಿವೆಯೇ?. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡುವುದಾಗಿ ಈಗಾಗಲೇ ಸರ್ಕಾರ ಘೋಷಣೆ ಮಾಡಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭಾನುವಾರ ಕಂದಾಯ ಸಚಿವ ಆರ್. ಅಶೋಕ, ಬಿಬಿಎಂಪಿ ಆಯುಕ್ತ ಬಿ. ಎಚ್. ಅನಿಲ್ ಕುಮಾರ್ ಜೊತೆ ಸಭೆ ನಡೆಸಿದರು. ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯುವ ಬಗ್ಗೆ ಚರ್ಚೆ ನಡೆಸಿದರು.

ಗಾಂಧಿ ಬಜಾರ್ ವ್ಯಾಪಾರಿಗಳಿಂದ ಸ್ವಯಂ ಲಾಕ್ ಡೌನ್ ಗಾಂಧಿ ಬಜಾರ್ ವ್ಯಾಪಾರಿಗಳಿಂದ ಸ್ವಯಂ ಲಾಕ್ ಡೌನ್

ಸೋಮವಾರ ಯಡಿಯೂರಪ್ಪ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. 1000ಕ್ಕೂ ಅಧಿಕ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇರುವ ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ.

ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!

ಮುಖ್ಯಮಂತ್ರಿಗಳ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಆರ್. ಅಶೋಕ, "ಸೋಮವಾರ ಜಿಲ್ಲಾಧಿಕಾರಿಗಳ ಜೊತೆ ಸಭೆ ಇದೆ. ಹೆಚ್ಚು ಸಮಸ್ಯೆ ಇರುವ ಜಿಲ್ಲೆಗಳ ಮೀಟಿಂಗ್ ಮೊದಲು‌ ಮಾಡುತ್ತೇವೆ. ಕಡಿಮೆ ಸೋಂಕು ಇರುವ ಜಿಲ್ಲೆಗಳ ಸಭೆ ಮಧ್ಯಾಹ್ನದ ಬಳಿಕ‌ ಕರೆದಿದ್ದೇವೆ. 12 ಜಿಲ್ಲೆಗಳಲ್ಲಿ ಹೆಚ್ಚು ಗಂಭೀರತೆ ಇದೆ" ಎಂದರು.

ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ ಕೊರೊನಾ ಪಾಸಿಟಿವ್!ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ ಕೊರೊನಾ ಪಾಸಿಟಿವ್!

ಮಾಧ್ಯಮ ವರದಿಗಳ ಬಗ್ಗೆ ಚರ್ಚೆ

ಮಾಧ್ಯಮ ವರದಿಗಳ ಬಗ್ಗೆ ಚರ್ಚೆ

ಬೆಂಗಳೂರು ನಗರದಲ್ಲಿ ಅಂಬ್ಯುಲೆನ್ಸ್, ಹಾಸಿಗೆ ಸಿಗುತ್ತಿಲ್ಲ ಎಂಬ ವರದಿಗಳು ಬರುತ್ತಿವೆ. ಅಂಬ್ಯುಲೆನ್ಸ್ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ಖಾಸಗಿ ಆಸ್ಪತ್ರೆ ಹಾಸಿಗೆಗಳು ರೋಗಿಗಳಿಗೆ ಏಕೆ ಸಿಗುತ್ತಿಲ್ಲ? ಎಂದು ಯಡಿಯೂರಪ್ಪ ಸಭೆಯಲ್ಲಿ ಅಧಿಕಾರಿಗಳನ್ನು ಪ್ರಶ್ನಿಸಿದರು.

ಮಾರ್ಗಸೂಚಿ ಬಿಡುಗಡೆ

ಮಾರ್ಗಸೂಚಿ ಬಿಡುಗಡೆ

ಸಭೆಯ ಬಳಿಕ ಮಾತನಾಡಿದ ಆರ್. ಅಶೋಕ, "ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಒಂದು ವಾರದ ಮಟ್ಟಿಗೆ ಲಾಕ್ ಡೌನ್ ಮಾಡಿದ್ದೇವೆ. ಲಾಕ್ ಡೌನ್ ಮಾರ್ಗಸೂಚಿಯನ್ನು ಸೋಮವಾರ ಬಿಡುಗಡೆ ಮಾಡಲಿದ್ದೇವೆ" ಎಂದರು.

ಜಿಲ್ಲಾಧಿಕಾರಿಗಳ ಜೊತೆ ಸಭೆ

ಜಿಲ್ಲಾಧಿಕಾರಿಗಳ ಜೊತೆ ಸಭೆ

ಸೋಮವಾರ ಜಿಲ್ಲಾಧಿಕಾರಿಗಳ ಜೊತೆಗಿನ ಸಭೆಯ ಬಳಿಕ ಬಳ್ಳಾರಿ, ಕಲಬುರಗಿ, ಯಾದಗಿರಿ, ಬೀದರ್, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ವಿಜಯಪುರ, ಧಾರವಾಡ, ಮಂಡ್ಯ ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಎಲ್ಲಾ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಿವೆ.

ಆಂಟಿಜೆನ್ ಟೆಸ್ಟ್ ಆರಂಭ

ಆಂಟಿಜೆನ್ ಟೆಸ್ಟ್ ಆರಂಭ

ಬೆಂಗಳೂರಿನ ಯಲಹಂಕದ ಆಸ್ಪತ್ರೆಯಲ್ಲಿ ಆಂಟಿಜೆನ್ ಟೆಸ್ಟ್ ಮಾಡಲು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಭಾನುವಾರ ಚಾಲನೆ ನೀಡಿದ್ದಾರೆ. ಈ ಪರೀಕ್ಷೆಯಿಂದಾಗಿ ಕೇವಲ 30 ನಿಮಿಷಗಳಲ್ಲಿ ಕೊರೊನಾ ವೈರಸ್ ಸೋಂಕು ಇರುವ ಕುರಿತು ಮಾಹಿತಿ ತಿಳಿಯಲಿದೆ.

English summary
Karnataka chief minister B. S. Yediyurappa meeting with revenue minister R. Ashoka and BBMP commissioner Anil Kumar and other officials in view of lock down in Bengaluru from July 14 to 23, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X