ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ರೇಕಿಂಗ್ ನ್ಯೂಸ್: ರಾಜ್ಯ ಮಾರ್ಗಸೂಚಿಗಳ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ

|
Google Oneindia Kannada News

ಬೆಂಗಳೂರು, ಮೇ.18: ಕರ್ನಾಟಕದಲ್ಲಿ ಲಾಕ್ ಡೌನ್ 4.Oಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಚರ್ಚೆ ನಡೆಸಲಾಗುತ್ತಿದೆ.

ಭಾರತದಲ್ಲಿ ಮೇ.31ರವರೆಗೂ ನಾಲ್ಕನೇ ಅವಧಿಗೆ ಲಾಕ್ ಡೌನ್ ವಿಸ್ತರಿಸಿದ್ದು, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯಕ್ಕೆ ಅನ್ವಯಿಸುವಂತೆ ಮರ್ಗಸೂಚಿಗಳನ್ನು ರಚಿಸಬೇಕಾದ ಸವಾಲು ರಾಜ್ಯ ಸರ್ಕಾರದ ಮುಂದಿದೆ.

ತುತ್ತಿನ ಚೀಲ ತುಂಬಿಸಿಕೊಳ್ಳಲು ವಲಸೆ ಹೋದ ಕಾರ್ಮಿಕರಿಗೆಂಥಾ ಶಿಕ್ಷೆ? ತುತ್ತಿನ ಚೀಲ ತುಂಬಿಸಿಕೊಳ್ಳಲು ವಲಸೆ ಹೋದ ಕಾರ್ಮಿಕರಿಗೆಂಥಾ ಶಿಕ್ಷೆ?

ಭಾನುವಾರವೇ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಎಲ್ಲ ರಾಜ್ಯಗಳ ಜೊತೆ ವಿಡಿಯೋ ಸಂವಾದದ ಮೂಲಕ ಚರ್ಚೆ ನಡೆಸಿದ್ದರು. ರಾಜ್ಯಗಳಿಗೆ ಸಂಬಂಧಿಸಿದಂತೆ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಜೊತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದಾರೆ.

India Lockdown 4.O: Guidelines Released By The Karnataka Government

ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ:

ಕರ್ನಾಟಕದಲ್ಲಿ ಲಾಕ್ ಡೌನ್ ನಿಯಮಕ್ಕೆ ಸಂಬಂಧಿಸಿದಂತೆ ಸರ್ಕಾರವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ. ಬಹುತೇಕ ಮೂರನೇ ಅವಧಿಯ ಲಾಕ್ ಡೌನ್ ನಿಯಮಗಳನ್ನೇ ಮುಂದುವರಿಸುವ ಸಾಧ್ಯತೆಗಳಿದ್ದು, ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆಗಳಿವೆ. ಅದಕ್ಕೂ ಮುನ್ನ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಎರಡೂ ಸಾರಿಗೆ ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದೆ.

English summary
India Lockdown 4.O: Guidelines Released By The Karnataka Government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X