ರಾಜ್ಯದ 11 ಜಿಲ್ಲೆಗಳಲ್ಲಿ ಕೋವಿಡ್ ಲಾಕ್‌ಡೌನ್ ಮುಂದುವರಿಕೆ
ಬೆಂಗಳೂರು, ಜೂನ್ 10: ಕೋವಿಡ್- 19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿ ಹೇಳಿದರು.
Recommended Video
ಕೊರೊನಾ ವೈರಸ್ ಪಾಸಿಟಿವಿಟಿ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಕಠಿಣ ಲಾಕ್‌ಡೌನ್ ವಿಸ್ತರಣೆ ಮಾಡುವುದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು, ಚಾಮರಾಜನಗರ, ಮೈಸೂರು, ದಕ್ಷಿಣ ಕನ್ನಡ ಲಾಕ್‌ಡೌನ್ ನಿಯಮ ಯಥಾಸ್ಥಿತಿ ಮುಂದುವರೆಯಲಿದೆ ಎಂದು ಸಿಎಂ ತಿಳಿಸಿದರು.

ಲಾಕ್‌ಡೌನ್ ಮುಂದುವರೆಯುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದಿದ್ದಾರೆ.
ಅದೇ ರೀತಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೆಲವು ಸಡಿಲಿಕೆಗಳೊಂದಿಗೆ ದಿನಾಂಕ: 14-06-2021ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.












Click it and Unblock the Notifications