ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ 11 ಜಿಲ್ಲೆಗಳಲ್ಲಿ ಕೋವಿಡ್ ಲಾಕ್‌ಡೌನ್ ಮುಂದುವರಿಕೆ

|
Google Oneindia Kannada News

ಬೆಂಗಳೂರು, ಜೂನ್ 10: ಕೋವಿಡ್- 19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿ ಹೇಳಿದರು.

Recommended Video

ಯಾವ್ಯಾವ ಜಿಲ್ಲೆಗಳು Unlock: ಹೊಸ ಮಾರ್ಗಸೂಚಿಯಲ್ಲೇನಿದೆ? | CM Yediyurappa | Oneindia Kannada

ಕೊರೊನಾ ವೈರಸ್ ಪಾಸಿಟಿವಿಟಿ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಕಠಿಣ ಲಾಕ್‌ಡೌನ್ ವಿಸ್ತರಣೆ ಮಾಡುವುದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು, ಚಾಮರಾಜನಗರ, ಮೈಸೂರು, ದಕ್ಷಿಣ ಕನ್ನಡ ಲಾಕ್‌ಡೌನ್ ನಿಯಮ ಯಥಾಸ್ಥಿತಿ ಮುಂದುವರೆಯಲಿದೆ ಎಂದು ಸಿಎಂ ತಿಳಿಸಿದರು.

 Lockdown Extended In These 11 Districts; Here Is The List

ಲಾಕ್‌ಡೌನ್ ಮುಂದುವರೆಯುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದಿದ್ದಾರೆ.

ಅದೇ ರೀತಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೆಲವು ಸಡಿಲಿಕೆಗಳೊಂದಿಗೆ ದಿನಾಂಕ: 14-06-2021ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

English summary
Lockdown Extended In Chikkamagaluru, Shivamogga, Davanagere, Hassan, Mandya, Bengaluru Rural, Belagavi, Kodagu, Chamarajanagar, Mysuru, Dakshina Kannada Districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X