ಲಾಕ್‌ಡೌನ್ ವಿಸ್ತರಣೆ; ಸರ್ಕಾರಕ್ಕೆ ಎಚ್‌ಡಿಕೆ ಸಲಹೆ ಏನು?
ಬೆಂಗಳೂರು, ಮೇ 17; ಕರ್ನಾಟಕದಲ್ಲಿ ಕೋವಿಡ್ 2ನೇ ಹರಡುವಿಕೆ ತಡೆಯಲು ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಮೇ 24ರ ತನಕ ಮುಂಜಾನೆ 6 ಗಂಟೆಯ ತನಕ ಲಾಕ್‌ಡೌನ್ ಜಾರಿಯಲ್ಲಿರಲಿದೆ.
ರಾಜ್ಯದಲ್ಲಿ ಈಗ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಅದರಲ್ಲೂ ಕೆಲವು ಸಚಿವರು ವಿಸ್ತರಣೆ ಬಗ್ಗೆ ಪರವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೋಮವಾರ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ. "ಸರ್ಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್' ಆಗಿರಲಿ" ಎಂದು ಹೇಳಿದ್ದಾರೆ.

"ಆರ್ಥಿಕ, ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ಜನಹಿತದ ಲಾಕ್‌ಡೌನ್ ಕಲ್ಪನೆಯೇ ಆಗಿತ್ತು" ಎಂದು ಟ್ವೀಟ್ ಮಾಡಿದ್ದಾರೆ.
"ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು" ಎಂದು ತಿಳಿಸಿದ್ದಾರೆ.
ಸರ್ಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್' ಆಗಿರಲಿ. ಆರ್ಥಿಕ,ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ 'ಜನಹಿತದ ಲಾಕ್‌ಡೌನ್' ಕಲ್ಪನೆಯೇ ಆಗಿತ್ತು.
— H D Kumaraswamy (@hd_kumaraswamy) May 17, 2021
1/4
"ಲಾಕ್‌ಡೌನ್ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ ಈ ಲಾಕ್‌ಡೌನ್ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ" ಎಂದು ಹೇಳಿದ್ದಾರೆ.












Click it and Unblock the Notifications