ಜೂ. 7ರ ನಂತರವೂ ಲಾಕ್‌ಡೌನ್ ವಿಸ್ತರಣೆ; ಸಿಎಂ ಹೇಳುವುದೇನು?

ಬೆಂಗಳೂರು, ಮೇ 31; ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾಗಿ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಜೂನ್ 7ರ ಬೆಳಗ್ಗೆ 6 ಗಂಟೆ ತನಕ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.

ಲಾಕ್‌ಡೌನ್ ವಿಸ್ತರಣೆ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿದೆ. ತಜ್ಞರು ಸರ್ಕಾರಕ್ಕೆ ನೀಡಿರುವ ವರದಿ ಅನ್ವಯ ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಬೇಕು ಎಂಬ ಸುದ್ದಿಗಳು ಹಬ್ಬಿವೆ.

ಸೋಮವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈ ಕುರಿತು ಮಾತನಾಡಿದರು. "ಜೂನ್ 7ರ ನಂತರವೂ ಲಾಕ್‌ಡೌನ್ ವಿಸ್ತರಣೆ ಬಗ್ಗೆ ತಜ್ಞರ ಜೊತೆ ಚರ್ಚಿಸಿ ಜೂನ್ 5 ಅಥವ 6ರಂದು ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಹೇಳಿದರು.

Lockdown Extension Decision After June 5 Says Yediyurappa

"ಜೂನ್ 5ರ ನಂತರ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಜನರು ಸಹಕಾರ ನೀಡಿದರೆ ಲಾಕ್‌ಡೌನ್ ವಿಸ್ತರಣೆ ಬೇಡ" ಎಂದರು.

ಪ್ಯಾಕೇಜ್ ಘೋಷಣೆ; ಲಾಕ್‌ಡೌನ್ ಘೋಷಣೆ ಬಳಿಕ ಸಂಕಷ್ಟಕ್ಕೆ ಸಿಲುಕಿದ ಜನರಿಗಾಗಿ ಸರ್ಕಾರ ಈಗಾಗಲೇ ಮೊದಲ ಹಂತದ ಪ್ಯಾಕೇಜ್ ಘೋಷಣೆ ಮಾಡಿದೆ. 2ನೇ ಪ್ಯಾಕೇಜ್‌ ಘೋಷಣೆ ಮಾಡಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

"ರಾಜ್ಯದಲ್ಲಿ ಕೋವಿಡ್‌ನಿಂದ ಸಂಕಷ್ಟದಲ್ಲಿರುವವರಿಗೆ ನೆರವಿನ ಆಸರೆಯಾಗಿ ಇನ್ನೆರಡು ದಿನದಲ್ಲಿ ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಲಾಗುತ್ತದೆ. ಪ್ಯಾಕೇಜ್ ಸಿದ್ಧವಾಗುತ್ತಿದೆ" ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+