• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೇ 10ರಿಂದ ಲಾಕ್ ಡೌನ್; ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ

|
Google Oneindia Kannada News

ಬೆಂಗಳೂರು, ಮೇ 09; ಕರ್ನಾಟಕ ಸರ್ಕಾರ ಮೇ 10ರ ಸೋಮವಾರದಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಆದರೆ ಕೆಲವು ಅಂಶಗಳಲ್ಲಿ ಬದಲಾವಣೆ ಮಾಡಲಾಗಿದೆ.

ಶನಿವಾರ ಸರ್ಕಾರ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ. ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ ಮದುವೆಯಲ್ಲಿ 40 ಜನರು ಭಾಗವಹಿಸಬಹುದು. ಮೊದಲು ವಿವಾಹ ಕಾರ್ಯಕ್ರಮದಲ್ಲಿ 50 ಜನರು ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು.

ಲಾಕ್ ಡೌನ್; ಕಾರ್ಮಿಕರಿಗೆ ಮನೆಯಲ್ಲಿ ಆಶ್ರಯ ಕೊಟ್ಟ ಬೆಳ್ತಂಗಡಿ ಕೃಷಿಕ! ಲಾಕ್ ಡೌನ್; ಕಾರ್ಮಿಕರಿಗೆ ಮನೆಯಲ್ಲಿ ಆಶ್ರಯ ಕೊಟ್ಟ ಬೆಳ್ತಂಗಡಿ ಕೃಷಿಕ!

ಲಾಕ್ ಡೌನ್ ಜಾರಿಯಲ್ಲಿರುವ ಅವಧಿಯಲ್ಲಿ ಈಗಾಗಲೇ ನಿಗದಿಯಾಗಿರುವ ವಿವಾಹಗಳನ್ನು ಮನೆಯಲ್ಲಿ ನಡೆಸಬಹುದು ಮತ್ತು ಅದರಲ್ಲಿ 40 ಜನರು ಪಾಲ್ಗೊಳ್ಳಬಹುದು. ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪರಿಷ್ಕೃತ ಆದೇಶದಲ್ಲಿ ತಿಳಿಸಲಾಗಿದೆ.

ಕೇರಳದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ; ಮೇ 8ರಿಂದ ಜಾರಿ ಕೇರಳದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ; ಮೇ 8ರಿಂದ ಜಾರಿ

ಈಗಾಗಲೇ ನಿಗದಿಯಾಗಿರುವ ವಿವಾಹಗಳನ್ನು ಕಲ್ಯಾಣ ಮಂಟಪದಲ್ಲಿ ನಡೆಸಲು ಸಾಧ್ಯವಿಲ್ಲ. ಹಿಂದೆ ಇದ್ದ ನಿಯಮದಂತೆ ಸ್ಥಳೀಯ ಆಡಳಿವು ವಿವಾಹದಲ್ಲಿ ಪಾಲ್ಗೊಳ್ಳುವ ಜನರಿಗೆ ಪಾಸ್ ವಿತರಣೆ ಮಾಡಲಿದೆ.

ದಕ್ಷಿಣ ಕನ್ನಡ; ವಾರಾಂತ್ಯದ ಕರ್ಫ್ಯೂ ನಡುವೆಯೂ 372 ವಿವಾಹ!ದಕ್ಷಿಣ ಕನ್ನಡ; ವಾರಾಂತ್ಯದ ಕರ್ಫ್ಯೂ ನಡುವೆಯೂ 372 ವಿವಾಹ!

   ಸ್ವಂತ ಖರ್ಚಿನಲ್ಲಿ ಆಕ್ಸಿಜನ್ ವ್ಯವಸ್ಥೆ ! | Oneindia Kannada

   ಪರಿಷ್ಕತ ಮಾರ್ಗಸೂಚಿಯ ಪ್ರಕಾರ ಕಬ್ಬಿಣದ ಅದಿರು ಗಣಿಗಾರಿಕೆಗೆ ಹಾಗೂ ಸಿಮೆಂಟ್‌ಗೆ ಬಳಸುವ ಲೈಮ್ ಸ್ಟೋನ್ ತಯಾರಿಕೆಗೆ ಅನುಮತಿ ನೀಡಲಾಗಿದೆ. ಉಳಿದಂತೆ ಶುಕ್ರವಾರ ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರೆಯಲಿವೆ.

   English summary
   Karnataka government announced lockdown from May 10 to 24, 2021. According to guidelines 40 people allowed at a wedding ceremony.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X