ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಾಮ್ ಟಾಮ್ ಸುದ್ದಿ: ಬೆಂಗಳೂರು ಬಿಟ್ಟು ಹೊರಟವರಿಗೆ 800 ಬಸ್!

|
Google Oneindia Kannada News

ಬೆಂಗಳೂರು, ಜುಲೈ.13: "ಹುಟ್ಟಿದ ಊರನ್ನು ಬಿಟ್ಟು ಬಂದ ಮೇಲೆ ಇನ್ನೇನು ಬಿಡುವುದು ಬಾಕಿ ಇದೆ"- ಯೋಗರಾಜ್ ಭಟ್ಟರು ಬರೆದಿರುವ ಈ ಹಾಡಿನ ಸಾಲುಗಳು ಇದೀಗ ಬೆಂಗಳೂರಿನಲ್ಲಿ ಬದುಕುತ್ತಿದ್ದ ಜನರ ಹೃದಯಕ್ಕೆ ಹೊಕ್ಕಂತೆ ಕಾಣುತ್ತಿದೆ.

Recommended Video

Rashid Khan : ಅಫ್ಘಾನಿಸ್ತಾನ ವಿಶ್ವಕಪ್ ಗೆದ್ದ ನಂತರವೇ ಮದುವೆಯಾಗುತ್ತೇನೆ | Oneindia Kannada

ಕೊರೊನಾವೈರಸ್ ಸೋಂಕಿನ ಹರಡುವಿಕೆ ಭೀತಿ ಹಾಗೂ ಸರ್ಕಾರವು ಜಾರಿಗೊಳಿಸಲು ಹೊರಟಿರುವ ಲಾಕ್ ಡೌನ್ ನಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಬದುಕು ಕಟ್ಟಿಕೊಳ್ಳಲು ತೆರಳಿದ್ದ ಜನರೆಲ್ಲ ತಮ್ಮೂರಿನತ್ತ ಮುಖ ಮಾಡುತ್ತಿದ್ದಾರೆ.

ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!

ಈಗಾಗಲೇ ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕನ್ನಡಿಗರು ಬೆಚ್ಚಿ ಬೀಳುವಂತಾ ವಾತಾವರಣ ಸೃಷ್ಟಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 2627 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 38843ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಲಾಕ್ ಆಗುತ್ತಾ ಬದುಕು?

ಸಿಲಿಕಾನ್ ಸಿಟಿಯಲ್ಲಿ ಲಾಕ್ ಆಗುತ್ತಾ ಬದುಕು?

ಜುಲೈ.14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಏಳು ದಿನಗಳ ಕಾಲ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವುದಾಗಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಲಾಕ್ ಡೌನ್ ನಿಂದ ಬೆದರಿದ ಸಾರ್ವಜನಿಕರು ಬೆಂಗಳೂರಿನಿಂದ ಸ್ವಂತ ಊರುಗಳಿಗೆ ವಾಪಸ್ ತೆರಳುತ್ತಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಲಾಕ್ ಆಗುತ್ತಾ ಬದುಕು?

ಸಿಲಿಕಾನ್ ಸಿಟಿಯಲ್ಲಿ ಲಾಕ್ ಆಗುತ್ತಾ ಬದುಕು?

ಜುಲೈ.14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಏಳು ದಿನಗಳ ಕಾಲ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವುದಾಗಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಲಾಕ್ ಡೌನ್ ನಿಂದ ಬೆದರಿದ ಸಾರ್ವಜನಿಕರು ಬೆಂಗಳೂರಿನಿಂದ ಸ್ವಂತ ಊರುಗಳಿಗೆ ವಾಪಸ್ ತೆರಳುತ್ತಿದ್ದಾರೆ.

ಬೆಂಗಳೂರು ಬಿಡುವವರಿಗೆ 800 ಬಸ್ ವ್ಯವಸ್ಥೆ

ಬೆಂಗಳೂರು ಬಿಡುವವರಿಗೆ 800 ಬಸ್ ವ್ಯವಸ್ಥೆ

ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮ್ಮೂರುಗಳತ್ತ ಹೊರಟ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಿದೆ. ಬೆಂಗಳೂರಿನಿಂದ ಸಂಚರಿಸುವವರಿಗೆ ಸೋಮವಾರ ಮತ್ತು ಮಂಗಳವಾರ 800 ಬಸ್ ಗಳ ವಿಶೇಷ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಕೆಎಸ್ಆರ್ ಟಿಸಿ ತಿಳಿಸಿದೆ.

ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಲಿರುವ ಸರ್ಕಾರ

ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಲಿರುವ ಸರ್ಕಾರ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಮೈಸೂರು, ಮಂಗಳೂರು, ಉಡುಪಿ, ಬೀದರ್, ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಿರುವ ಸಿಎಂ ಜಿಲ್ಲೆಯಲ್ಲಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಕೊರೊನಾವೈರಸ್ ಸೋಂಕು ಕಡಿಮೆ ಇರುವ ಜಿಲ್ಲಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಿಎಂ, ಎರಡು ಸಭೆ ಬಳಿಕ ಯಾವ್ಯಾವ ಜಿಲ್ಲೆಗಳನ್ನು ಲಾಕ್​ಡೌನ್ ಮಾಡಬೇಕು ಎಂದು ನಿರ್ಧರಿಸಲಿದ್ಧಾರೆ. ಅಲ್ಲದೇ, ಲಾಕ್​ಡೌನ್ ನಿಯಮಗಳು ಹೇಗಿರಬೇಕು ಎಂಬ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದ್ದಾರೆ.

ಕೊರೊನಾವೈರಸ್ ಕಂಡೀಷನ್ ಬೆಂಗಳೂರಿನಲ್ಲಿ ಹೇಗಿದೆ?

ಕೊರೊನಾವೈರಸ್ ಕಂಡೀಷನ್ ಬೆಂಗಳೂರಿನಲ್ಲಿ ಹೇಗಿದೆ?

ಬೆಂಗಳೂರಿನಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ವಿಕೋಪಕ್ಕೆ ಹೋಗುತ್ತಿದೆ. ಒಂದೇ ದಿನ 1525 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿದ್ದು, ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 18387ಕ್ಕೆ ಏರಿಕೆಯಾಗಿದೆ. ಈ ಪೈಕಿ 4045 ಸೋಂಕಿತರು ಗುಣಮುಖರಾಗಿದ್ದು, ಬಾಕಿ ಉಳಿದ 14067 ಮಂದಿ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಸಿಲಿಕಾನ್ ಸಿಟಿಯೊಂದರಲ್ಲೇ ಮಹಾಮಾರಿಗೆ ಈವರೆಗೂ 274 ಮಂದಿ ಪ್ರಾಣ ಬಿಟ್ಟಿದ್ದಾರೆ.

English summary
Lockdown in Bengaluru: KSRTC to Run 800 buses to various destinations today and Tomorrow
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X