ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಜೊತೆ ಮತ್ತೊಂದಿಷ್ಟು ಜಿಲ್ಲೆಗಳು ಲಾಕ್ ಡೌನ್: ವಿವರ ಇಲ್ಲಿದೆ

|
Google Oneindia Kannada News

ಧಾರವಾಡ, ಜುಲೈ.13: ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕ ಬೆಂಗಳೂರು ಮಟ್ಟಕ್ಕಷ್ಟೇ ಸೀಮಿತವಾಗಿಲ್ಲ. ಧಾರವಾಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

Recommended Video

ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಚಾರ: ಆರ್ ಅಶೋಕ್ ಸ್ಪಷ್ಟನೆ

ಜಿಲ್ಲೆಯಲ್ಲಿನ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಮತ್ತು ಹರಡುವಿಕೆ ಪ್ರಮಾಣವನ್ನು ಗಮನದಲ್ಲಿ ಇಟ್ಟುಕೊಂಡು ಒಂದು ವಾರಗಳ ಕಾಲ ಜಿಲ್ಲೆಯನ್ನು ಲಾಕ್ ಡೌನ್ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ತೀರ್ಮಾನಿಸಿದ್ದಾರೆ.

ಟಾಮ್ ಟಾಮ್ ಸುದ್ದಿ: ಬೆಂಗಳೂರು ಬಿಟ್ಟು ಹೊರಟವರಿಗೆ 800 ಬಸ್!ಟಾಮ್ ಟಾಮ್ ಸುದ್ದಿ: ಬೆಂಗಳೂರು ಬಿಟ್ಟು ಹೊರಟವರಿಗೆ 800 ಬಸ್!

ಧಾರವಾಡ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳಲ್ಲಿ ಜುಲೈ.15ರ ಬುಧವಾರ ಬೆಳಗ್ಗೆ 10 ಗಂಟೆಯಿಂದ ಜಿಲ್ಲೆಯಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗುತ್ತದೆ. ಅಲ್ಲಿಂದ ಒಂದು ವಾರಗಳ ಕಾಲ ಅಂದರೆ ಜುಲೈ.24ರ ರಾತ್ರಿ 8 ಗಂಟೆವರೆಗೂ ಲಾಕ್ ಡೌನ್ ಜಾರಿಯಲ್ಲಿ ಇರಲಿದೆ.

ಜಿಲ್ಲಾಧಿಕಾರಿ ಮತ್ತು ಉಸ್ತುವಾರಿ ಸಚಿವರಿಗೆ ಹೊಣೆ

ಜಿಲ್ಲಾಧಿಕಾರಿ ಮತ್ತು ಉಸ್ತುವಾರಿ ಸಚಿವರಿಗೆ ಹೊಣೆ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಜುಲೈ.14ರಿಂದಲೇ ಲಾಕ್ ಡೌನ್ ಮಾಡುವುದಕ್ಕೆ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಅದರಂತೆ ಅಗತ್ಯವಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸಬೇಕೇ ಬೇಡವೇ ಎನ್ನುವುದರ ಬಗ್ಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರು ತೀರ್ಮಾನಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಧಾರವಾಡ ಜಿಲ್ಲೆಯನ್ನು ಒಂದು ವಾರ ಲಾಕ್ ಡೌನ್ ಮಾಡುವುದಕ್ಕೆ ತೀರ್ಮಾನಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಕೊರೊನಾವೈರಸ್ ಕಾಟಕ್ಕೆ ಧಾರವಾಡ ಮಂದಿ ಹೈರಾಣ

ಕೊರೊನಾವೈರಸ್ ಕಾಟಕ್ಕೆ ಧಾರವಾಡ ಮಂದಿ ಹೈರಾಣ

ಧಾರವಾಡದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಪ್ರತಿನಿತ್ಯ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲೇ 129 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದವು. ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1088ಕ್ಕೆ ಏರಿಕೆಯಾಗಿದೆ. 382 ಸೋಂಕಿತರು ಗುಣಮುಖರಾಗಿದ್ದು, ಬಾಕಿ ಉಳಿದ 673 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ ಮಹಾಮಾರಿಗೆ 33 ಮಂದಿ ಪ್ರಾಣ ಬಿಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಲಾಕ್ ಡೌನ್ ಬಗ್ಗೆ ತೀರ್ಮಾನ

ದಕ್ಷಿಣ ಕನ್ನಡ ಜಿಲ್ಲೆ ಲಾಕ್ ಡೌನ್ ಬಗ್ಗೆ ತೀರ್ಮಾನ

ಧಾರವಾಡದ ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ವಾರ ಲಾಕ್ ಡೌನ್ ಜಾರಿಗೊಳಿಸುವುದಕ್ಕೆ ತೀರ್ಮಾನಿಸಲಾಗಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಈಗಾಗಲೇ ತಿಳಿಸಿದ್ದಾರೆ. ಸೋಂಕು ಹರಡುವಿಕೆ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಲಾಕ್ ಡೌನ್ ಮಾಡುವುದಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲೇ 196 ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ. ಈ ಪೈಕಿ 760 ಸೋಂಕಿತರು ಗುಣಮುಖರಾಗಿದ್ದು, 1419 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಮಹಾಮಾರಿಗೆ ಇದುವರೆಗೂ 41 ಮಂದಿ ಉಸಿರು ಚೆಲ್ಲಿದ್ದಾರೆ.

ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಲಿರುವ ಸರ್ಕಾರ

ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಲಿರುವ ಸರ್ಕಾರ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಮೈಸೂರು, ಮಂಗಳೂರು, ಉಡುಪಿ, ಬೀದರ್, ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಸಿಎಂ ಜಿಲ್ಲೆಯಲ್ಲಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಕೊರೊನಾವೈರಸ್ ಸೋಂಕು ಕಡಿಮೆ ಇರುವ ಜಿಲ್ಲಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಿಎಂ, ಎರಡು ಸಭೆ ಬಳಿಕ ಯಾವ್ಯಾವ ಜಿಲ್ಲೆಗಳನ್ನು ಲಾಕ್​ಡೌನ್ ಮಾಡಬೇಕು ಎಂದು ನಿರ್ಧರಿಸಲಿದ್ಧಾರೆ. ಅಲ್ಲದೇ, ಲಾಕ್​ಡೌನ್ ನಿಯಮಗಳು ಹೇಗಿರಬೇಕು ಎಂಬ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದ್ದಾರೆ.

English summary
Lockdown In Dharwad And Dakshina Kannada For One Week Starting July 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X