ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಜೂನ್ 7ರ ಬಳಿಕವೂ ಲಾಕ್‌ಡೌನ್ ವಿಸ್ತರಣೆ?

|
Google Oneindia Kannada News

ಬೆಂಗಳೂರು, ಮೇ 26: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಕೂಡ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕವೂ ಕೂಡ ಲಾಕ್‌ಡೌನ್ ಮುಂದುವರೆಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಈಗಾಗಲೇ ಮೇ 10ರಿಂದ 24ರವರೆಗಿದ್ದ ಲಾಕ್‌ಡೌನ್‌ ಅನ್ನು ಮತ್ತೆ 14 ದಿನಗಳ ಕಾಲ ಅಂದರೆ ಜೂನ್ 7ರವರೆಗೆ ವಿಸ್ತರಿಸಲಾಗಿತ್ತು, ಬೆಳಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.

 ಎಚ್ಚರ: ಭಾರೀ ಇಳಿಕೆ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ ಎಚ್ಚರ: ಭಾರೀ ಇಳಿಕೆ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಿಧಾನಗತಿಯಲ್ಲಿ ಬರುತ್ತಿದ್ದರೂ ಕೂಡ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ವಿಸ್ತರಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.

 ಕಂಟೈನ್ಮೆಂಟ್ ಜೋನ್‌ಗಳ ಮೇಲೆ ನಿಗಾ

ಕಂಟೈನ್ಮೆಂಟ್ ಜೋನ್‌ಗಳ ಮೇಲೆ ನಿಗಾ

ನಗರ ಬಳಿಕ ಗ್ರಾಮೀಣ ಭಾಗಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಕಂಟೈನ್ಮೆಂಟ್ ಜೋನ್‌ಗಳ ಮೇಲೆ ಹೆಚ್ಚಿನ ನಿಗಾ ಇರುವಂತೆ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಸೂಚನೆ ನೀಡಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯಗಳಲ್ಲಿ ಸಮಿತಿ ರಚಿಸಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಸಮಿತಿಗಳಲ್ಲಿ ಸ್ಥಳೀಯ ಅಧಿಕಾರಿಗಳು ಹಾಗೂ ಪೊಲೀಸರು ಇರಲಿದ್ದಾರೆ ಎಂದು ಹೇಳಿದ್ದಾರೆ.
ಹಳ್ಳಿಗಳಲ್ಲಿ ಕೊರೊನಾ ಹರಡುವಿಕೆ ನಿಯಂತ್ರಣಕ್ಕೆ ಸರ್ಕಾರ ಹೆಚ್ಚಿನ ನಿಗಾವಹಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾದರೆ ಆ ಹಳ್ಳಿಯನ್ನು ಮೈಕ್ರೋ ಕಂಟೈನ್ಮೆಂಟ್ ವಲಯ ಎಂದು ಗುರಿಸಲಾಗುತ್ತದೆ. ಈ ವಲಯಗಳಿಗೆ ನಿಯಮಿತವಾಗಿ ಸೋಂಕಿತರ ಆರೋಗ್ಯ ತಪಾಸಣೆ ನಡೆಸುವಂತೆ ವೈದ್ಯರಿಗೆ ಆದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 ಜೂನ್ 5ರಂದು ಸಭೆ

ಜೂನ್ 5ರಂದು ಸಭೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್ 5 ರಂದು ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಲಾಕ್‌ಡೌನ್ ಮುಂದುವರೆಸಲೇಬೇಕು ಇಲ್ಲವಾದರೆ ಕೊರೊನಾ ಕೊಂಡಿಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಹಲವು ತಜ್ಞರು ತಮ್ಮ ಅಭಿಪ್ರಾಯವನ್ನು ಸರ್ಕಾರದ ಮುಂದಿರಿಸಿದ್ದಾರೆ. ಜೂನ್ 5ರಂದು ಅಂತಿಮ ನಿರ್ಧಾರ ಹೊರಬೀಳಲಿದೆ.

ನಾಯಕತ್ವ ಬದಲಾವಣೆ ಗಾಳಿ ಸುದ್ದಿ ಬೆನ್ನಲ್ಲೇ, ಬಿಜೆಪಿ ಶಾಸಕರ ಸಭೆ ಕರೆದ ಸಿಎಂ ಯಡಿಯೂರಪ್ಪನಾಯಕತ್ವ ಬದಲಾವಣೆ ಗಾಳಿ ಸುದ್ದಿ ಬೆನ್ನಲ್ಲೇ, ಬಿಜೆಪಿ ಶಾಸಕರ ಸಭೆ ಕರೆದ ಸಿಎಂ ಯಡಿಯೂರಪ್ಪ

 ಸಾರಿಗೆ ಸಂಚಾರಕ್ಕೆ ಅನುಮತಿ

ಸಾರಿಗೆ ಸಂಚಾರಕ್ಕೆ ಅನುಮತಿ

ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಓಲಾ, ಆಟೋ ಸಂಚಾರಕ್ಕೆ ಅವಕಾಶ ನೀಡುವ ಸಾದ್ಯತೆ ಇದೆ, ಏ.50ರಷ್ಟು ಪ್ರಯಾಣಿಕರು ಮಾತ್ರ ಸಂಚಾರ ಮಾಡಲು ಅವಕಾಶ ನೀಡುವ ಸಾಧ್ಯತೆ ಇದೆ. ಮದುವೆಯಲ್ಲಿ 40 ಮಂದಿ, ಅಂತ್ಯ ಸಂಸ್ಕಾರದಲ್ಲಿ 10 ಮಂದಿಗೆ ಅವಕಾಶ ನೀಡುವ ಚಿಂತನೆಯೂ ಸರ್ಕಾರದಲ್ಲಿದೆ ಎಂದು ಹೇಳಲಾಗುತ್ತಿದೆ.

 ಹೋಂ ಐಸೊಲೇಷನ್ ರದ್ದು ಮಾಡಲು ಚಿಂತನೆ

ಹೋಂ ಐಸೊಲೇಷನ್ ರದ್ದು ಮಾಡಲು ಚಿಂತನೆ

ಹೋಂ ಐಸೊಲೇಷನ್‌ನಲ್ಲಿದ್ದರೆ ಮನೆಯವರೆಲ್ಲರಿಗೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ, ಮತ್ತೊಂದು ವಿಷಯವೇನೆಂದರೆ ಯಾವ ಪ್ರಮಾಣದಲ್ಲಿ ಸೋಂಕು ತಗುಲಿದೆ ಎನ್ನುವ ಕುರಿತು ವೈದ್ಯರಿಗೂ ತಿಳಿಯುವುದಿಲ್ಲ, ರೋಗಿಗಳು ಕಣ್ಮುಂದೆ ಇದ್ದಾಗ ಮಾತ್ರ ಚಿಕಿತ್ಸೆ ನೀಡಲು ಸಹಾಯವಾಗುತ್ತದೆ, ಒಂದೊಮ್ಮೆ ಅನ್‌ಲಾಕ್ ಮಾಡಿದರೂ ಕೂಡ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಬಾರದು ಎನ್ನುವ ಒತ್ತಾಯವೂ ಕೇಳಿಬಂದಿದೆ.

Recommended Video

June 7ರ ನಂತರ ಕೂಡ Lockdown ಮುಗಿಯೋದಿಲ್ಲ | Lockdown | Oneindia Kannada

English summary
Karnataka Lockdown Likely To Be Continue After June 7, number of corona cases declining but number of fatality rate increasing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X