ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್ ಡೌನ್ ವಿಸ್ತರಣೆ ಕುರಿತು ಸಿಎಂ ಯಡಿಯೂರಪ್ಪ ಹೇಳುವುದೇನು?

|
Google Oneindia Kannada News

ಬೆಂಗಳೂರು, ಮಾ. 30: ಕೊರೊನಾ ವೈರಸ್ ಹರಡದಂತೆ ತಡೆಯಲು ದೇಶಾದ್ಯಂತ ಲಾಕ್‌ಡೌನ್ ಮಾಡಲಾಗಿದೆ. ಮೊದಲು ಒಂದು ದಿನದ ಜನತಾ ಕರ್ಫ್ಯೂವನ್ನು ಪಾಲನೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಲ್ಲಿ ಮನವಿ ಮಾಡಿಕೊಂಡಿದ್ದರು. ಅದಾದ ಬಳಿಕ ಮೂರು ದಿನಗಳ ನಂತರ 21 ದಿನಗಳ ಲಾಕ್‌ಡೌನ್ ದೇಶದಲ್ಲಿ ಜಾರಿಯಾಗಿದೆ.

ಸಾಂಕ್ರಾಮಿಕ ರೋಗ ತಡೆಗಟ್ಟಲು ಸರ್ಕಾರದ ಆದೇಶ ಪಾಲನೆಯೊಂದೆ ನಮ್ಮ ಎದುರು ಕಾಣುತ್ತಿರುವ ದಾರಿ ಎಂದು ದೇಶದ ಜನತೆಗೆ ಸರ್ಕಾರ ಹೇಳಿದೆ. ಅದು ನಿಜವೂ ಕೂಡ. ಆದರೆ 21 ದಿನಗಳಿಗೆ ಈ ಲಾಕ್‌ಡೌನ್ ಆದೇಶ ಕೊನೆಯಾಗುತ್ತಾ ಎಂಬ ಚರ್ಚೆ ದೇಶದ ಜನರಲ್ಲಿ ಮನೆ ಮಾಡಿದೆ. ಈ ಸಂದರ್ಭದಲ್ಲಿಯೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆ ಮಾತನ್ನು ಹೇಳಿದ್ದಾರೆ.

ಸಂದಿಗ್ಧ ಸ್ಥಿತಿಯಲ್ಲಿ ನಾವು ಹೆಚ್ಚು ಶಿಸ್ತು ಪಾಲನೆ ಮಾಡಬೇಕಾಗಿದೆ

ಸಂದಿಗ್ಧ ಸ್ಥಿತಿಯಲ್ಲಿ ನಾವು ಹೆಚ್ಚು ಶಿಸ್ತು ಪಾಲನೆ ಮಾಡಬೇಕಾಗಿದೆ

ಕರ್ನಾಟಕದ ಜನತೆ ಶಿಸ್ತಿಗೆ ಮತ್ತು ಕಾನೂನು ಪಾಲನೆಗೆ ಹೆಸರಾದವರು. ಕರ್ನಾಟಕ ಒಂದು ಕಲ್ಯಾಣ ರಾಜ್ಯ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಹೆಚ್ಚು ಶಿಸ್ತು ಪಾಲನೆ ಮಾಡಬೇಕಾಗಿರುತ್ತದೆ. ಕರೋನಾ ವೈರಸ್ ನಮ್ಮ ತಾಳ್ಮೆಯನ್ನು ಪರೀಕ್ಷಿಸಲೆಂದೇ ಬಂದ ಒಂದು ವಿಪತ್ತು ಎಂದು ಭಾವಿಸಿದ್ದೇನೆ.

ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಆಪತ್ಬಾಂಧವವಾದ ಜಿಲ್ಲಾಡಳಿತ!ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಆಪತ್ಬಾಂಧವವಾದ ಜಿಲ್ಲಾಡಳಿತ!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ 21 ದಿನಗಳ ಕಾಲ ಲಾಕ್‍ಡೌನ್ ವಿಧಿಸಿರುವ ಅನಿವಾರ್ಯ ಪರಿಸ್ಥಿತಿಯಿಂದಾಗಿ ಇಡೀ ದೇಶದ ಜನತೆಯ ಕ್ಷಮೆಯನ್ನು ಕೇಳಿದ್ದಾರೆ. ಒಬ್ಬ ಪ್ರಧಾನಮಂತ್ರಿ ದೇಶದ ಜನತೆಯ ಕ್ಷಮೆ ಕೇಳುವ ಅನಿವಾರ್ಯತೆ ಇದೆಯೆಂದರೆ ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ. ದೇಶಕ್ಕೆ ಯಾಕೆ ಜಗತ್ತಿನ ಇತಿಹಾಸದಲ್ಲಿಯೇ ಇಂತಹ ಪರಿಸ್ಥಿತಿ ಬಂದಿರಲಿಲ್ಲ. ಈಗ ಇಂತಹ ಪರಿಸ್ಥಿತಿ ಬಂದಿದೆ ಎಂದರೆ ಅದನ್ನು ನಾವು ಎದುರಿಸಲೇಬೇಕಾಗಿದೆ. ಜನತೆಯ ಹಿತ ದೃಷ್ಟಿಯಿಂದ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಅಭಿವೃದ್ಧಿ ಹಿಂದಿದ ದೇಶಗಳ ಸ್ಥಿತಿಯೆ ಶೋಚನೀಯವಾಗಿದೆ

ಅಭಿವೃದ್ಧಿ ಹಿಂದಿದ ದೇಶಗಳ ಸ್ಥಿತಿಯೆ ಶೋಚನೀಯವಾಗಿದೆ

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕ ಪರಿಸ್ಥಿತಿಯ ಮೇಲೆ ತೀವ್ರತರವಾದ ಪರಿಣಾಮ ಈ ವೈರಾಣು ಬೀರಲಿದೆ ಎಂದು ಗೊತ್ತಿದ್ದರೂ ದೇಶವನ್ನು ಲಾಕ್‌ಡೌನ್ ಮಾಡುವಂತಹ ಕಠಿಣ ನಿರ್ಧಾರ ತೆಗೆದುಕೊಂಡಿದ್ದು ದೇಶದ ಜನತೆಯ ಹಿತದೃಷ್ಟಿಯಿಂದಲೇ ಹೊರತು ಯಾವುದೇ ಸ್ವಹಿತಾಸಕ್ತಿಯಿಂದಲ್ಲ. ಅಭಿವೃದ್ಧಿ ಹೊಂದಿದ ದೇಶಗಳ ಸಾಧನೆ ಕೋವಿಡ್-19 ನ್ನು ನಿಯಂತ್ರಿಸುವಲ್ಲಿ ಶೋಚನೀಯವಾಗಿರುವಾಗ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ಮುನ್ನೆಚ್ಚರಿಕೆ ಕ್ರಮಗಳು ಫಲಿತಾಂಶವನ್ನು ನೀಡುತ್ತಿವೆ ಮತ್ತು ದೇಶವು ಅವರ ಮತ್ತು ಅವರ ದೂರದೃಷ್ಟಿಯ ಬಗ್ಗೆ ಹೆಮ್ಮೆ ಪಡುವಂತೆ ಮಾಡುತ್ತಿದೆ. ನಾವು ಅವರ ಕೆಲಸದ ಬಗ್ಗೆ ಮೆಚ್ಚುಗೆ ಮತ್ತು ಹೆಮ್ಮೆ ಪಡುವುದು ಮಾತ್ರವಲ್ಲದೇ ಅವರ ಆಜ್ಞೆಯನ್ನು ಪಾಲಿಸುವಲ್ಲಿ ನಮ್ಮ ಗೌರವ ಅಡಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕಟ್ಟುನಿಟ್ಟಾಗಿ ಪಾಲಿಸಿ, ಲಾಕ್‌ಡೌನ್ ಕೊನೆಗೊಳ್ಳಲು ಅವಕಾಶ ಕೊಡಿ

ಕಟ್ಟುನಿಟ್ಟಾಗಿ ಪಾಲಿಸಿ, ಲಾಕ್‌ಡೌನ್ ಕೊನೆಗೊಳ್ಳಲು ಅವಕಾಶ ಕೊಡಿ

ನಿಮ್ಮ ಆಹಾರ, ಊಟಕ್ಕೆ ತೊಂದೆರೆಯಾಗದಂತೆ ಸರಕಾರ ಎಚ್ಚರವಹಿಸಿದೆ. ಯಾವುದೇ ಸುಳ್ಳು ಸುದ್ದಿಗಳಿಗೆ ಮತ್ತು ವದಂತಿಗಳಿಗೆ ಕಿವಿಗೊಡಬೇಡಿ. ನೀವು ಎಷ್ಟು ಕಟ್ಟುನಿಟ್ಟಿನಿಂದ ಮನೆಯಲ್ಲಿ ಇರುವುದನ್ನು ಪಾಲಿಸುತ್ತೀರೋ ಅಷ್ಟು ಬೇಗ ಅಂದರೆ ಏಪ್ರಿಲ್-14 ಕ್ಕೆ ಲಾಕ್‌ಡೌನ್ ಮುಗಿಯುವುದು. ಲಾಕ್‌ಡೌನ್ ಪರಿಸ್ಥಿತಿ ನಿಮ್ಮ ಕರ್ಫ್ಯೂ ಪಾಲನೆ ಮೇಲೆ ಅವಲಂಬಿತವಾಗಿದೆ. ಇನ್ನೊಮ್ಮೆ ನಿಮ್ಮೆಲ್ಲರಲ್ಲಿ ಮನವಿ ಏನೆಂದರೆ ಕಟ್ಟುನಿಟ್ಟಾಗಿ ಕರ್ಫ್ಯೂ ಪಾಲಿಸಿ, ಜೊತೆಗೆ ಲಾಕ್‌ಡೌನ್ ಕೊನೆಗೊಳ್ಳಲು ಅವಕಾಶ ಕೊಡಿ ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ: ಲಾಕ್‌ಡೌನ್ ಸಂದರ್ಭದಲ್ಲಿ ಇ ಪಾಸ್ ಪಡೆಯುವುದು ಹೇಗೆ?ಕೊರೊನಾ: ಲಾಕ್‌ಡೌನ್ ಸಂದರ್ಭದಲ್ಲಿ ಇ ಪಾಸ್ ಪಡೆಯುವುದು ಹೇಗೆ?

ಲಾಕ್‌ಡೌನ್ ಬೇಗ ಮುಗಿಯಲು ಕಟ್ಟುನಿಟ್ಟಿನ ಪಾಲನೆ ಅಗತ್ಯ

ಲಾಕ್‌ಡೌನ್ ಬೇಗ ಮುಗಿಯಲು ಕಟ್ಟುನಿಟ್ಟಿನ ಪಾಲನೆ ಅಗತ್ಯ

ಈಗಾಗಲೇ ಜಾರಿಲ್ಲಿರುವ ಲಾಕ್‌ಡೌನ್ ಅವಧಿ, ಅದನ್ನು ಹೇಗೆ ಪಾಲನೆ ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ 21 ದಿನಗಳಿಗೆ ಲಾಕ್‌ಡೌನ್ ಅವಧಿ ಮುಗಿಯುವುದು ಬಹುತೇಕ ಇಲ್ಲ ಎಂಬಂತೆ ಮುಖ್ಯಮಂತ್ರಿಗಳು ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅವರು ಕೂಡ ರಾಜ್ಯದಲ್ಲಿ ಸರುಯಾಗಿ ಲಾಕ್‌ಡೌನ್ ಆದೇಶವನ್ನು ಪಾಲನೆ ಮಾಡುತ್ತಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಎಚ್ಚರಿಸಿದ್ದಾರೆ. ಜೊತೆಗೆ ಸರಿಯಾಗಿ ಕರ್ಫ್ಯೂ ಪಾಲನೆ ಮಾಡುವಂತೆಯೂ ಸೂಚಿಸಿದ್ದಾರೆ. ಹೀಗಾಗಿ ಇದೀಗ ಮುಖ್ಯಮಂತ್ರಿಗಳು ಕೊಟ್ಟಿರುವ ಹೇಳಿಕೆ ಜನರಿಗೆ ಕೊಟ್ಟಿರುವ ಮುನ್ಸೂಚನೆಯೆ ಆಗಿದೆ. ಜನರು ಸರಿಯಾಗಿ ಕರ್ಫ್ಯೂ ಪಾಲನೆ ಮಾಡದಿದ್ದರೆ ಲಾಕ್‌ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದೆ.

Fact Check: ಪಿಎಂ ಕೇರ್ಸ್ ದೇಣಿಗೆ ನೀಡುವ ಮುನ್ನ ಫೇಕ್ ಐಡಿ ಬಗ್ಗೆ ಗಮನಿಸಿFact Check: ಪಿಎಂ ಕೇರ್ಸ್ ದೇಣಿಗೆ ನೀಡುವ ಮುನ್ನ ಫೇಕ್ ಐಡಿ ಬಗ್ಗೆ ಗಮನಿಸಿ

ಇನ್ನೂ 16 ದಿನಗಳು ನಿಮ್ಮ ಮನೆಯಲ್ಲಿಯೇ ಇರಿ

ಇನ್ನೂ 16 ದಿನಗಳು ನಿಮ್ಮ ಮನೆಯಲ್ಲಿಯೇ ಇರಿ

ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿದೆ, ಆದರೆ ಕೆಲವು ನಗರ ಪ್ರದೇಶಗಳಲ್ಲಿನ ಜನತೆ ಕರ್ಫ್ಯೂ ಧಿಕ್ಕರಿಸಿ ರಸ್ತೆಗಳಲ್ಲಿ ಓಡಾಡುವುದನ್ನು ಮಾಡುತ್ತಿದ್ದಾರೆ. ಈ ಸಮಯದಲ್ಲಿ ನನ್ನ ಕಳಕಳಿಯ ಮನವಿ ಏನೆಂದರೆ, ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಬೆಲೆ ಕೊಡಿ ಮತ್ತು ಲಾಕ್‌ಡೌನ್ ಪಾಲಿಸಿ. ಪೊಲೀಸರು ಕೂಡ ನಿಮ್ಮ ಹಿತವನ್ನೇ ಬಯಸುವವರು. ಅವರೇನು ನಿಮ್ಮ ವೈರಿಗಳಲ್ಲ. ಪೊಲೀಸರಿಗೆ ಅನಿವಾರ್ಯತೆಯನ್ನು ಸೃಷ್ಟಿಸಬೇಡಿ. ಇನ್ನೂ 16 ದಿನಗಳು ನಿಮ್ಮ ಮನೆಯಲ್ಲಿಯೇ ಇರಿ. ಮನೆಯವರೊಂದಿಗೆ ಕಾಲ ಕಳೆಯಲು ನಿಮಗೆ ಒದಗಿ ಬಂದ ಒಂದು ಸದಾವಕಾಶ ಎಂದು ಭಾವಿಸಿ. ನೀವು ಎಷ್ಟು ಮನೆಯ ಒಳಗಡೆ ಇರುತ್ತೀರೋ ಅದರಿಂದ ನಿಮಗೆ ಮತ್ತು ದೇಶಕ್ಕೆ ಒಳ್ಳೆಯದಾಗುತ್ತದೆ. ಪುಸ್ತಕಗಳನ್ನು ಓದಿರಿ.

ಬಡವರು ಕೂಡ ನೀವಿದ್ದ ಸ್ಥಳದಲ್ಲಿಯೇ ಸಕಾರಾತ್ಮಕ ಸದಾಕಾಲ ಚಟುವಟಿಕೆಗಳಲ್ಲಿ ಕಾಲ ಕಳೆಯಿರಿ. ಈ ಸಂದರ್ಭದಲ್ಲಿ ಕೊರೋನಾ ವೈರಸ್ ಪೀಡಿತ ನೂರಾರು ಜನರ ಪ್ರಾಣ ಉಳಿಸಲು ಸತತವಾಗಿ ಕೆಲಸದಲ್ಲಿ ತೊಡಗಿರುವ ವೈದ್ಯರು, ದಾದಿಯರು, ಆರೋಗ್ಯ ಸಿಬ್ಬಂದಿ ಮತ್ತು ನಾಗರಿಕ ಸೇವೆಯಲ್ಲಿ ತೊಡಗಿರುವ ಸಾವಿರಾರು ಕಾರ್ಯಕರ್ತರಿಗೆ ನಾವುಗಳು ನೈತಿಕ ಬೆಂಬಲ ವ್ಯಕ್ತಪಡಿಸಿ ಅವರಿಗೆ ಮನೋಸ್ಥೈರ್ಯ ಕುಗ್ಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.

English summary
CM Yeddyurappa said the lockdown period was dependent on how the people follow the curfew. He said the lockdown period could be extended.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X