ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ, ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಸದ್ಯದಲ್ಲೇ ತಾರ್ಕಿಕ ಅಂತ್ಯ : ಎಂಬಿ ಪಾಟೀಲ

|
Google Oneindia Kannada News

ಬೆಂಗಳೂರು, ಜನವರಿ 2 : ಅಪರಾಧ ಪ್ರಕರಣಗಳನ್ನು ತಹಬದಿಗೆ ತರುವುದು, ಮಾದಕ ವಸ್ತುಗಳ ನಿಯಂತ್ರಣ ಹಾಗೂ ನಗರದಲ್ಲಿನ ಸಂಚಾರ ದಟ್ಟಣೆಯನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ನಡೆದ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಗೃಹ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದ ಎಂಬಿ ಪಾಟೀಲ್ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದ ಎಂಬಿ ಪಾಟೀಲ್

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ಇಲಾಖೆ ಸಮಸ್ಯೆಗಳು ಹಾಗೂ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಗೃಹ ಸಚಿವರು ಮಾತುಕತೆಯ ವಿವರ ನೀಡಿದರು.

ಮುನಿಸು ಬದಿಗಿಟ್ಟು ಮಾಜಿ ಗೃಹ ಸಚಿವ-ಹಾಲಿ ಗೃಹ ಸಚಿವ ಭೇಟಿ ಮುನಿಸು ಬದಿಗಿಟ್ಟು ಮಾಜಿ ಗೃಹ ಸಚಿವ-ಹಾಲಿ ಗೃಹ ಸಚಿವ ಭೇಟಿ

ಅಪರಾಧ ಪ್ರಕರಣಗಳನ್ನು ತಡೆಗಟ್ಟುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಲಾಖೆಗೆ ಸಂಬಂಧಿಸಿದ ಕೆಲವು ಯೋಜನೆಗಳು ಆರ್ಥಿಕ ಇಲಾಖೆಯಲ್ಲಿ ಬಾಕಿ ಇವೆ ಹಾಗೂ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಅವರ ಜೀವನ ಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Logical end to Gauri and Kalburgi cases soon : MB Patil

ಗೌರಿ ಲಂಕೇಶ್ ಹಾಗೂ ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆಗಳು ನಡೆಯುತ್ತಿದ್ದು, ಎರಡೂ ಪ್ರಕರಣಗಳು ಬೇಗ ತಾರ್ಕಿಕ ಅಂತ್ಯಕ್ಕೆ ಬರುವ ವಿಶ್ವಾಸ ಇದೆ. ತನಿಖಾಧಿಕಾರಿಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಲ್ಬುರ್ಗಿ, ಗೌರಿ ಹತ್ಯೆಗೆ ಸಾಮ್ಯತೆ ಇದೆಯೇ? ಸಿಬಿಐಗೆ ಸುಪ್ರೀಂ ಪ್ರಶ್ನೆಕಲ್ಬುರ್ಗಿ, ಗೌರಿ ಹತ್ಯೆಗೆ ಸಾಮ್ಯತೆ ಇದೆಯೇ? ಸಿಬಿಐಗೆ ಸುಪ್ರೀಂ ಪ್ರಶ್ನೆ

ಅಕ್ರಮ ವಲಸಿಗರೆಂದು ರಾಜ್ಯದಲ್ಲಿ 113 ಜನರನ್ನು ಈಗಾಗಲೇ ಗುರುತಿಸಲಾಗಿದೆ. ಅಕ್ರಮ ವಲಸಿಗರ ಬಗ್ಗೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಪರಾಧಿಗಳನ್ನು ಯಾವುದೇ ಜಾತಿ ಧರ್ಮದವರೆಂದು ಗುರುತಿಸುವುದು ಸರಿಯಲ್ಲ ಎಂದು ಪಾಟೀಲರು ನುಡಿದರು.

ಪೊಲೀಸ್ ಸಿಬ್ಬಂದಿಗಳ ಜೀವನ ಮಟ್ಟ ಸುಧಾರಿಸುವ ಸಂಬಂಧ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಔರಾದ್‍ಕರ್ ವರದಿ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ವರದಿ ತರಿಸಿ ನೋಡುತ್ತೇನೆ, ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಎಂ.ಎಂ.ಕಲಬುರ್ಗಿ ಹತ್ಯೆ, ತನಿಖಾ ವರದಿ ಕೇಳಿದ ಸುಪ್ರೀಂಕೋರ್ಟ್ಎಂ.ಎಂ.ಕಲಬುರ್ಗಿ ಹತ್ಯೆ, ತನಿಖಾ ವರದಿ ಕೇಳಿದ ಸುಪ್ರೀಂಕೋರ್ಟ್

ಇಂದು ಇಲಾಖೆಯ ಕೆಲವು ವಿಭಾಗಗಳ ಬಗ್ಗೆ ಮಾತ್ರ ಮಾಹಿತಿ ಪಡೆಯಲಾಗಿದ್ದು, ಮುಂದಿನ ವಾರ ಉಳಿದ ವಿಭಾಗಗಳ ಬಗ್ಗೆಯೂ ಮಾಹಿತಿ ಪಡೆದು, ಇಲಾಖೆಯ ಒಟ್ಟಾರೆ ಪ್ರಗತಿಯ ಬಗ್ಗೆ ಮಾಹಿತಿ ಒದಗಿಸಲಾಗುವುದು. ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ, ಅವರನ್ನು ಗುರುತಿಸಿ ಪ್ರೋತ್ಸಾಹಿಸಬೇಕಾಗಿದೆ ಎಂದು ಇದೆ ಸಂದರ್ಭದಲ್ಲಿ ತಿಳಿಸಿದರು.

English summary
Logical end to Gauri Lankesh and MM Kalburgi murder cases very soon, said Karnataka home minister MB Patil. He was addressing media after conducting high level meeting with police officers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X