ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಜಿಟಲ್ ಗ್ರಂಥಾಲಯದಲ್ಲಿ ದಾಖಲೆಯ ಸಂಖ್ಯೆಯ ಓದುಗರು!

|
Google Oneindia Kannada News

ಬೆಂಗಳೂರು, ಸೆ. 30: ಕೊರೊನಾ ವೈರಸ್ ಸಂಕಷ್ಟ ಜೀವನದಲ್ಲಿ ಹಲವು ಬದಲಾವಣೆಗಳನ್ನು ತಂದಿದೆ. ಮನೆಯಿಂದಲೇ ಕೆಲಸ ಮಾಡುವುದು, ಆನ್‌ಲೈನ್ ಶಿಕ್ಷಣ, ಆನ್‌ಲೈನ ಖರೀದಿ ಜೊತೆಗೆ ಇದೀಗ ಆನ್‌ಲೈನ್ ಗ್ರಂಥಾಲಯ ಶುರುವಾಗಿದೆ. ಹೌದು ಬದಲಾದ ಸಮಯದಲ್ಲಿ ಡಿಜಿಟಲ್ ಲೈಬ್ರರಿ ಪ್ರಾಮುಖ್ಯ ಪಡೆಯುತ್ತಿದೆ. ಮೊಬೈಲ್ ಸಂಖ್ಯೆಯನ್ನು ನೋಂದಣಿ ಮಾಡುವ ಮೂಲಕ ಡಿಜಿಟಲ್ ಗ್ರಂಥಾಲಯದ ಸದಸ್ಯರಾದರೆ ಸಾವಿರಾರು ಪುಸ್ತಕಗಳು ಡಿಜಿಟಲ್ ಲೈಬ್ರರಿಯಲ್ಲಿ ಲಭ್ಯವಿವೆ.

ದೇಶದಲ್ಲಿಯೇ ಪ್ರಪ್ರಥಮವಾಗಿ ರಾಜ್ಯ ಗ್ರಂಥಾಲಯ ಇಲಾಖೆ ಅನುಷ್ಠಾನಗೊಳಿಸಿದ ಡಿಜಿಟಲ್ ಗ್ರಂಥಾಲಯ ಯೋಜನೆಗೆ ಈಗಾಗಲೇ 5 ಲಕ್ಷಕ್ಕೂ ಹೆಚ್ಚು ಮಂದಿ ನೊಂದಾಯಿಸಿದ್ದು ದಾಖಲೆ ಸಂಖ್ಯೆಯ ಓದುಗರು ಡಿಜಿಟಲ್ ಗ್ರಂಥಾಲಯದ ಪ್ರಯೋಜನ ಪಡೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಸರಣದ ಹಿನ್ನೆಲೆಯಲ್ಲಿ ಲಾಕ್‌ಡೌನ್ ದಿನಗಳಲ್ಲಿ ಇಲಾಖೆಯು ಸಾರ್ವಜನಿಕರಲ್ಲಿ ಓದುವ ಸಂಸ್ಕೃತಿಯನ್ನು ಬೆಳೆಸಲು ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಸಾರ್ವಜನಿಕ ಗ್ರಂಥಾಲಯಗಳನ್ನು ತಂತ್ರಜ್ಞಾನ ಮತ್ತು ಡಿಜಿಟಲ್ ಮೂಲಸೌಕರ್ಯದೊಂದಿಗೆ ಆಧುನೀಕರಿಸುವ ಮಹತ್ವಾಕಾಂಕ್ಷೆಯ ಯೋಜನೆ ಕೈಗೆತ್ತಿಕೊಂಡಿತ್ತು.

ಡಿಜಿಟಲ್ ಗ್ರಂಥಾಲಯ ಸೌಲಭ್ಯ

ಡಿಜಿಟಲ್ ಗ್ರಂಥಾಲಯ ಸೌಲಭ್ಯ

ರಾಜ್ಯದಾದ್ಯಂತ ಈ ಯೋಜನೆ ಅಡಿಯಲ್ಲಿ 26 ನಗರ ಕೇಂದ್ರ ಗ್ರಂಥಾಲಯಗಳು 30 ಜಿಲ್ಲಾ ಕೇಂದ್ರ ಗ್ರಂಥಾಲಯಗಳು, 216 ತಾಲ್ಲೂಕು ಗ್ರಂಥಾಲಯಗಳು ಸೇರಿ ಒಟ್ಟು 272 ಸಾರ್ವಜನಿಕ ಗ್ರಂಥಾಲಯಗಳಲ್ಲಿ ಪ್ರಥಮ ಹಂತವಾಗಿ ಡಿಜಿಟಲ್ ಗ್ರಂಥಾಲಯ ಸೌಲಭ್ಯವನ್ನು ಒದಗಿಸಲಾಗಿದ್ದು ಸೆ. 25ರವರೆಗೆ ರಾಜ್ಯಾದ್ಯಂತ ಒಟ್ಟು 5,02,512 ಸದಸ್ಯರು ಡಿಜಿಟಲ್ ಗ್ರಂಥಾಲಯದಲ್ಲಿ ನೋಂದಣಿಯಾಗಿದ್ದು ಸಾರ್ವಜನಿಕರು ಬಹಳ ಪರಿಣಾಮಕಾರಿಯಾಗಿ ಇದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ.

ಶ್ಯೆಕ್ಷಣಿಕ ಮತ್ತು ಕಲಿಕೆಗೆ ಅಗತ್ಯವಿರುವ ಎಲ್ಲಾ ವಿಭಾಗಗಳಲ್ಲಿನ ವಿಷಯಗಳಿಗೆ ಸಂಬಂದಿಸಿದ ಇತ್ತೀಚಿನ ತಂತ್ರಜ್ಞಾನದೊಂದಿಗೆ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲಾಗಿದ್ದು, ವಿಷಯವಾರು ಇ-ಕಂಟೆಂಟ್‌ಗಳನ್ನು ನೂತನವಾಗಿ ಅಳವಡಿಸಲಾಗಿದೆ. ಈ ಸೌಲಭ್ಯ ಕನ್ನಡ, ಆಂಗ್ಲ, ಹಿಂದಿ, ಉರ್ದು, ಮರಾಠಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಪಾಠಗಳನ್ನು ಒದಗಿಸುತ್ತದೆ. ರಾಜ್ಯ ಮತ್ತು ಸಿಬಿಎಸ್ಇ ಮಂಡಳಿಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡಲು ಡಿಜಿಟಲ್ ರೂಪದಲ್ಲಿ ಮಾಹಿತಿಯನ್ನು ಸಹ ಒದಗಿಸುತ್ತದೆ.

ಲಾಗಿನ್ ಆಗುವುದು ಹೇಗೆ?

ಲಾಗಿನ್ ಆಗುವುದು ಹೇಗೆ?

ಬೆರಳ ತುದಿಯಲ್ಲಿ ಸಾವಿರಾರು ಪುಸ್ತಕಗಳನ್ನು ಓದಬಹುದಾದ ಈ ಡಿಜಿಟಲ್ ಗ್ರಂಥಾಲಯದ ಸೌಲಭ್ಯ ಪಡೆಯಲು ಮೊದಲ ಸಾರಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಣಿ ಮಾಡುವ ಮೂಲಕ ಲಾಗಿನ್ ಆಗಬೇಕು. https://www.karnatakadigitalpubliclibrary.org/login ಈ ಲಿಂಕ್‌ ತೆರೆದರೆ ಅಲ್ಲಿ ಸಂಪೂರ್ಣವಾದ ಮಾಹಿತಿ ನಿಮಗೆ ಲಭ್ಯವಿದೆ.

ಮೊದಲ ಸಲ ಒಂದು ಬಾರಿ ನೋಂದಣಿ ಮಾಡಿಕೊಂಡರೆ ಸಾಕು. ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ಪಾಸ್‌ವರ್ಡ್‌ ಹಾಕಿದರೆ ಸಾವಿರಾರು ಪುಸ್ತಕಗಳನ್ನು ನೀವಿದ್ದಲ್ಲಿಯೇ ಓದಬಹುದು. ಜೊತೆಗೆ ಮೊಬೈಲ್ ಆ್ಯಪ್‌ನಲ್ಲಿ ಕೂಡ ಡಿಜಿಟಲ್ ಲೈಬ್ರರಿ ಲಭ್ಯವಿದೆ.

ಡಿಜಿಟಲ್ ಲೈಬ್ರರಿ ಮೊಬೈಲ್ ಆ್ಯಪ್!

ಡಿಜಿಟಲ್ ಲೈಬ್ರರಿ ಮೊಬೈಲ್ ಆ್ಯಪ್!

ಡಿಜಿಟಲ್ ಗ್ರಂಥಾಲಯವನ್ನು ಮೊಬೈಲ್ ಮೂಲಕ ವೀಕ್ಷಿಸಲು e-Sarvajanika Granthalaya ಆ್ಯಪ್‌ನ್ನು ಸಾರ್ವಜನಿಕ ಸೇವೆಗೆ ಒದಗಿಸಲಾಗಿದೆ. ಗೂಗಲ್ ಪ್ಲೇ ಸ್ಟೋರ್‌ನಲ್ಲಿ e-Sarvajanika Granthalaya ಎಂದು ಟೈಪ್ ಮಾಡಿದರೆ ಮೊಬೈಲ್ ಆ್ಯಪ್ ಸಿಗುತ್ತದೆ. ಆ ಆ್ಯಪ್ ಡೌನ್ ಲೋಡ್ ಮಾಡಿಕೊಂಡು ಮೊಬೈಲ್ ದೂರವಾಣಿ ಸಂಖ್ಯೆಯನ್ನು ನೋಂದಣಿ ಮಾಡುವ ಮೂಲಕ ಡಿಜಿಟಲ್ ಗ್ರಂಥಾಲಯದ ಸೌಲಭ್ಯ ಪಡೆಯಬಹುದು.

ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ಎಲ್ಲ ಬಗೆಯ ಪರೀಕ್ಷೆಗಳೂ ಸೇರಿದಂತೆ ಬಹುತೇಕ ಪುಸ್ತಕಗಳನ್ನು ಈ ಡಿಜಿಟಲ್ ಗ್ರಂಥಾಲಯದ ಮೂಲಕ ಓದಬಹುದು. ಅದಕ್ಕೆ ಪ್ರತ್ಯೇಕ ಶುಲ್ಕವಿರುವುದಿಲ್ಲ. ನಿಮ್ಮ ಮೊಬೈಲ್‌ಗೆ ಇಂಟರ್‌ನೆಟ್ ಸೌಲಭ್ಯವಿದ್ದರೆ ಸಾಕು.

Recommended Video

Y.S.V Datta : ನನ್ boss ದೇವೇಗೌಡ್ರು | Oneindia Kannada
ಸಾವಿರಾರು ಪುಸ್ತಕಗಳು-ವಿಡಿಯೋಗಳು!

ಸಾವಿರಾರು ಪುಸ್ತಕಗಳು-ವಿಡಿಯೋಗಳು!

ಕಲೆ ಮತ್ತು ಮಾನವಿಕತೆ, ವ್ಯಕ್ತಿತ್ವಕೌಶಲ್ಯ ಮತ್ತು ಸಾಹಿತ್ಯವನ್ನು ಒಳಗೊಂಡಂತೆ ಶಾಲೆ, ಕಾಲೇಜು ಮುಂತಾದ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸುಮಾರು 5000ಕ್ಕೂ ಹೆಚ್ಚು ಕನ್ನಡ ವಿಷಯಗಳಿವೆ. ನಿರ್ದಿಷ್ಟವಾಗಿ ರಾಜ್ಯ ಮತ್ತು ಸಿಬಿಎಸ್ಇ ಶಾಲಾ ಮಕ್ಕಳಿಗೆ ಪಠ್ಯಕ್ರಮದ ಪ್ರಕಾರ ಇ-ಪುಸ್ತಕಗಳು ಮತ್ತು ವೀಡಿಯೋಗಳನ್ನು ಒದಗಿಸಲಾಗಿದ್ದು, 1 ರಿಂದ 12ನೇ ತರಗತಿಯವರೆಗೆ ಸಂಪೂರ್ಣ ವಿಷಯಗಳನ್ನು ಒಳಗೊಂಡಿದೆ. ಕನ್ನಡದಲ್ಲಿ ಸುಮಾರು 4200ಕ್ಕೂ ಹೆಚ್ಚು ಇ-ಪುಸ್ತಕಗಳಿಗೆ ಮತ್ತು ಕನ್ನಡ ಭಾಷೆಯಲ್ಲಿ ಸುಮಾರು 600ಕ್ಕೂ ಹೆಚ್ಚು ವೀಡಿಯೋಗಳಿವೆ.

ಸಾರ್ವಜನಿಕರು ಡಿಜಿಟಲ್ ಗ್ರಂಥಾಲಯ ಆಪ್ ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ಓದುವುದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಇಲಾಖೆಯ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬೇಕೆಂದು ಸುರೇಶ್ ಕುಮಾರ್ ಕೋರಿದ್ದಾರೆ. ವಿವಿಧ ಜಾಲತಾಣಗಳ ಲಿಂಕ್ಸ್‌ಗಳನ್ನೂ ಕರ್ನಾಟಕ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯ ಜಾಲತಾಣದಲ್ಲಿ ಒದಗಿಸಲಾಗಿದೆ.

English summary
The Karnataka Education Department has started the Digital Library facility during the Corona Virus Lockdown. Education minister S Suresh Kumar said that the digital library project implemented by the State Library Department for the first time in the country has already registered more than 5 lakh people and has benefited a record number of readers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X