Eshwar Khandre: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಈಶ್ವರ್ ಖಂಡ್ರೆ ಹೇಳಿದ್ದೇನು?
ಬೆಂಗಳೂರು, ಫೆಬ್ರವರಿ 07: ಲೋಕಸಭಾ ಚುನಾವಣೆಗೆ ಸಂಬಂಧ ಟಿಕೆಟ್ ಲೆಕ್ಕಾಚಾರ, ರಣತಂತ್ರಗಳು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ ಕ್ಷೇತ್ರದಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುದರ ಮೇಲೂ ಗೆಲುವು ನಿರ್ಧರಿಸುತ್ತದೆ ಎಂಬ ಮಾತಿದೆ. ಹಾಗಾದರೆ ಈ ಬಾರಿ ಹಾಲಿ ಅರಣ್ಯ ಸಚಿವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವರೇ?. ಈ ಪ್ರಶ್ನೆಗೆ ಸ್ವತಃ ಸಚಿವರೇ ಉತ್ತರಿಸಿದ್ದಾರೆ.
ಮುಂಬರಲಿರುವ ಲೋಕಸಭಾ ಚುನಾವಣೆ 2024ರಲ್ಲಿ ಕರ್ನಾಟಕದಲ್ಲಿರುವ 28 ಲೋಕಸಭಾ ಕ್ಷೇತ್ರಗಳ ಪೈಕಿ 22 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ವಿಶ್ವಾಸ ನಮಗಿದೆ ಎಂದು ಅವರು ತಿಳಿಸಿದರು ಎಂದು 'ಡಿಎಚ್' ವರದಿ ಮಾಡಿದೆ.

ಹಾಗಾದರೆ ಈ ಬಾರಿ ನೀವು ಸ್ಪರ್ಧಿಗೆ ಇಳಿಯುತ್ತೀರಿ? ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವನಾಗಿ ಪಕ್ಷವು ಕಣಕ್ಕಿಳಿಸುವ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಅವರು ತಿಳಿಸಿದರು.
ಹಲವಾರು ಚುನಾವಣಾ ಆಕಾಂಕ್ಷಿಗಳಿದ್ದಾರೆ: ಸಚಿವರು
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅನೇಕ ಆಕಾಂಕ್ಷಿಗಳು ರಾಜ್ಯದಲ್ಲಿ ಮತ್ತು ಪಕ್ಷದಲ್ಲಿದ್ದಾರೆ. ಯಾರು ಯಾವ ಕ್ಷೇತ್ರಕ್ಕೆ ಸೂಕ್ತ ಅಂಥವರನ್ನೆ ಪಕ್ಷ ಆಯ್ಕೆ ಮಾಡಿ ಕಣಕ್ಕಿಳಿಸಲಿದೆ ಎಂದು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಅವರು ಪುನರುಚ್ಚರಿಸಿದರು.
ಪಕ್ಷ ತೊರೆದು ಮತ್ತೆ ಬಿಜೆಪಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರ್ಪಡೆಯಾಗಿದ್ದಾರೆ. ಹಾಗಾದರೆ ಲಕ್ಷ್ಮಣ ಸವದಿ ಅವರು ಸೇರ್ಪಡೆ ವಿಚಾರ ಕುರಿತ ಪ್ರಶ್ನೆಗೆ, ಈಶ್ವರ್ ಖಂಡ್ರೆ ಅವರು ಖಡಕ್ ಉತ್ತರ ನೀಡಿದ್ದಾರೆ. ಯಾವ ಕಾರಣಕ್ಕೆ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ಸೇರುವುದಿಲ್ಲ ಎಂದು ತಿಳಿಸಿದ್ದಾರೆ.
ಫೆಬ್ರವರಿ 17ಕ್ಕೆ ರಾಜ್ಯಮಟ್ಟದ ಸಭೆ
ಎಲ್ಲರೂ ಕಾಂಗ್ರೆಸ್ ಜೊತೆಗಿದ್ದಾರೆ. ಫೆಬ್ರವರಿ 17 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಭೆ ನಡೆಯಲಿದೆ. ಪಕ್ಷದ ಗೆಲುವಿಗಾಗಿ ನಾವೆಲ್ಲ ಮುಖಂಡರು, ಕಾರ್ಯಕರ್ತರು ಶ್ರಮಿಸುತ್ತಿದ್ದೇವೆ ಎಂದು ಅವರು ವಿವರಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಭರವಸೆಯ ಯೋಜನೆಗಳನ್ನು ಜಾರಿಗೆ ತಂದಿದೆ ಮತ್ತು ಮತಗಳು ಮತ್ತೊಮ್ಮೆ ನಮ್ಮನ್ನು ಆಶೀರ್ವದಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯ ಗೆಲುವಿನ ಖುಷಿಯಲ್ಲಿರುವ ಕಾಂಗ್ರೆಸ್ ನಾಯಕರಿಗೆ ಲೋಕಸಭಾ ಚುನಾವನೆಯ ಗೆಲುವಿನ ವಿಶ್ವಾಸದಲ್ಲಿರುವ ಇದರಿಂದ ಗೊತ್ತಾಗುತ್ತದೆ.
ಕೇಂದ್ರದ ವಿರುದ್ಧ ಹರಿಹಾಯ್ದ ಸಚಿವ
ಕೇಂದ್ರ ಬಿಜೆಪಿ ಸರ್ಕಾರವು ಕರ್ನಾಟಕ ರಾಜ್ಯದ ವಿರುದ್ಧ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ರಾಜ್ಯವು ಕೇಂದ್ರದಿಂದ ನ್ಯಾಯಸಮ್ಮತವಾದ ಬಾಕಿ ಹಣ ಪಡೆಯುವಲ್ಲಿ ವಂಚಿತವಾಗಿದೆ. ಈ ಸಂಬಂಧ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಅವರು ಮಂಗಳವಾರ ತಿಳಿಸಿದ್ದರು.
ಎನ್‌ಡಿಆರ್‌ಎಫ್ ಅಡಿಯಲ್ಲಿ ಹಣ ಬಿಡುಗಡೆ ಮಾಡುವಲ್ಲಿ ಕೇಂದ್ರ ವಿಫಲವಾಗಿದೆ. ಬರ ವರದಿಯನ್ನು ಈಗಾಗಲೇ ಸಲ್ಲಿಸಲಾಗಿದ್ದು, ಬರ ಎದುರಿಸಲು ಹಣ ಬಿಡುಗಡೆ ಮಾಡುವಲ್ಲಿ ಕೇಂದ್ರ ವಿಫಲವಾಗಿದೆ ಎಂದು ಅವರು ಆಪಾದಿಸಿದರು.
ಕಲ್ಯಾಣ ಕರ್ನಾಟಕಕ್ಕೆ ನಮ್ಮ ಸರ್ಕಾರ ಯಾವ ನಿರ್ಲಕ್ಷ್ಯ, ತಾರತಮ್ಯ ನೀತಿ ಅನುಸರಿಸಿಲ್ಲ. ಅಲ್ಲದೇ ಭಾಗಕ್ಕೆ 3000 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾಗಿ ಸಚಿವರು ಮಾಹಿತಿ ನೀಡಿದರು.












Click it and Unblock the Notifications