Get Updates
Get notified of breaking news, exclusive insights, and must-see stories!

ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ 2 ಹಂತದ ಮತದಾನ

ಬೆಂಗಳೂರು, ಮಾರ್ಚ್ 10 : ಕೇಂದ್ರ ಚುನಾವಣಾ ಆಯೋಗ 17ನೇ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ಭಾನುವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರು. ಏಪ್ರಿಲ್ 18 ಮತ್ತು 23ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. ಏಪ್ರಿಲ್ 18 ರಂದು 14 ಸ್ಥಾನ, ಏಪ್ರಿಲ್ 23ರಂದು ಉಳಿದ 14 ಸ್ಥಾನಗಳಿಗೆ ಮತದಾನ ನಡೆಯಲಿದೆ. ಚುನಾವಣಾ ಫಲಿತಾಂಶ ಮೇ 23ರಂದು ಘೋಷಣೆಯಾಗಲಿದೆ.

Lok sabha election 2019 schedule : Two phase elections in Karnataka

ಮೊದಲ ಹಂತದ ಮತದಾನ (14 ಕ್ಷೇತ್ರಗಳು)

* ಮಾರ್ಚ್ 19 ನಾಮಪತ್ರ ಸಲ್ಲಿಕೆ ಆರಂಭ
* ಮಾರ್ಚ್ 26 ನಾಮಪತ್ರ ಸಲ್ಲಿಕೆಗೆ ಕೊನೆ ದಿನ
* ಮಾರ್ಚ್ 27 ನಾಮಪತ್ರ ಪರಿಶೀಲನೆ
* ಮಾರ್ಚ್ 29 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
* ಏಪ್ರಿಲ್ 18 ರಂದು ಮತದಾನ

2ನೇ ಹಂತದ ಮತದಾನ (14 ಕ್ಷೇತ್ರಗಳು)
* ಮಾರ್ಚ್ 28 ನಾಮಪತ್ರ ಸಲ್ಲಿಕೆ ಆರಂಭ
* ಏಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆ ದಿನ
* ಏಪ್ರಿಲ್ 5 ನಾಮಪತ್ರ ಪರಿಶೀಲನೆಗೆ ಕೊನೆ ದಿನ
* ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
* ಏಪ್ರಿಲ್ 23 ಮತದಾನ

ಏಪ್ರಿಲ್ 18 ಎಲ್ಲಿ ಮತದಾನ : ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಉಡುಪಿ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ.

ಏಪ್ರಿಲ್ 23 ಎಲ್ಲಿ ಮತದಾನ : ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ರಾಯಚೂರು, ಗುಲ್ಬರ್ಗ, ಬೀದರ್, ಕೊಪ್ಪಳ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+