ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗೆಲುವು? ಯಾರಿಗೆ ಸೋಲು?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 2024ರ ಲೋಕಸಭೆ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ಪಕ್ಷಕ್ಕೆ ದೊಡ್ಡ ಸವಾಲು ಎದುರಾಗುತ್ತಿವೆ. ಹೀಗಿದ್ದರೂ ಸಲೀಸಾಗಿ ಮತ್ತೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿ ರಣತಂತ್ರ ಹೆಣೆಯುತ್ತಿದ್ದು, ದಕ್ಷಿಣ ಭಾರತದಲ್ಲಿನ ಪ್ರಮುಖ ರಾಜ್ಯಗಳ ಪೈಕಿ ಒಂದಾದ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಅನಿವಾರ್ಯ ಆಗಿದೆ. ಹೀಗಿದ್ದಾಗ ಬಿಜೆಪಿ ನಾಯಕರಿಗೆ ಆಘಾತಗಳ ಮೇಲೆ ಆಘಾತ ಎದುರಾಗುತ್ತಿದೆ.
ಒಂದು ಕಡೆ ಕರ್ನಾಟಕದಲ್ಲಿ 28ಕ್ಕೆ 28 ಸ್ಥಾನವನ್ನೂ ಬಿಜೆಪಿ & ಜೆಡಿಎಸ್ ಮೈತ್ರಿ ಪಕ್ಷಗಳು ಗೆದ್ದು ಬೀಗುವ ಐಡಿಯಾದಲ್ಲಿ ಇದ್ದರೆ, ಬಿಜೆಪಿಗೆ ಮಾತ್ರ ಒಂದೊಂದೇ ಸ್ಥಾನಗಳು ಕೈತಪ್ಪಿ ಹೋಗುತ್ತಿವೆ. ಅದರಲ್ಲೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಬಿಜೆಪಿ ಹಿಡಿತದಿಂದಲೇ ಕೈತಪ್ಪಿ ಹೋಗುವ ಸಾಧ್ಯತೆ ದಟ್ಟವಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ 15 ರಿಂದ 17 ಸ್ಥಾನ ಗೆಲ್ಲಬಹುದು ಎಂದು ಇತ್ತೀಚಿನ ಸಮೀಕ್ಷೆಗಳು ಹೇಳುತ್ತಿವೆ. ಹೀಗಿದ್ದಾಗ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕೂಡ ತಲ್ಲಣ ಸೃಷ್ಟಿ ಆಗುತ್ತಿದೆ. ಸತತವಾಗಿ ಈ ಕ್ಷೇತ್ರದಲ್ಲಿ ಗೆಲುವು ಕಾಣುತ್ತಿದ್ದ ಪಿ.ಸಿ. ಮೋಹನ್ ಅವರಿಗೆ ಆಘಾತ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಒಟ್ಟು 24 ಲಕ್ಷ ಮತದಾರರು!
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಸುಮಾರು 24 ಲಕ್ಷ ಮತದಾರರು ಇದ್ದು, ಈ ಪೈಕಿ ಕಳೆದ 3 ಚುನಾವಣೆಗಳಲ್ಲಿ ಪಿ.ಸಿ. ಮೋಹನ್ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು. ಆದ್ರೆ ಇದೀಗ ಪಿ.ಸಿ. ಮೋಹನ್ ಅವರಿಗೆ ಸೋಲಿನ ಭಯ ಎದುರಾಗಿದೆ. ಯಾಕಂದ್ರೆ ಕಾಂಗ್ರೆಸ್‌ನ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರ ಗೆಲುವಿಗೆ ಹೊಸ ರಣತಂತ್ರ ಹೆಣೆದಿರುವ ಕಾಂಗ್ರೆಸ್ ನಾಯಕರು, ಸ್ಥಳೀಯ ಮಟ್ಟದಲ್ಲಿ ಹೊಸ ಪ್ಲಾನ್ ಮಾಡಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಪಿ.ಸಿ. ಮೋಹನ್ 6,02,853 ಮತಗಳನ್ನ ಪಡೆದಿದ್ದರೆ, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಿಜ್ವಾನ್ ಅರ್ಷದ್ ಅವರು 5,31,885 ಮತ ಪಡೆದಿದ್ದರು. ಇದೀಗ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ನಾಯಕರು ರಣತಂತ್ರ ರೂಪಿಸಿದ್ದಾರೆ. ಹಾಗೇ ಫಲಿತಾಂಶ ಗೆದ್ದು ಬೀಗಲು ಮತದಾರರ ಮನವೊಲಿಸಲು ಕಾಂಗ್ರೆಸ್ ಶತಯಾಗತಾಯ ಪ್ರಯತ್ನ ಮಾಡ್ತಿದೆ.
ಬಿಜೆಪಿ & ಜೆಡಿಎಸ್ ಮೈತ್ರಿ ಕಥೆ ಏನು?
ರಾಷ್ಟ್ರಮಟ್ಟದಲ್ಲಿ ಕೂಡ ಬಿಜೆಪಿ & ಜೆಡಿಎಸ್ ಮೈತ್ರಿ ದೊಡ್ಡ ಮಟ್ಟದಲ್ಲಿ ಸಂಚಲನವನ್ನು ಸೃಷ್ಟಿ ಮಾಡಿತ್ತು. ಹಾಗೇ ಲೋಕಸಭೆ ಚುನಾವಣೆಯಲ್ಲಿ ಈ ಮೈತ್ರಿ ಬಿಜೆಪಿ ಪಕ್ಷಕ್ಕೆ ದೊಡ್ಡ ಬಲ ನೀಡಲಿದೆ ಎಂಬ ನಿರೀಕ್ಷೆ ಇತ್ತು. ಆದ್ರೆ ಎಲ್ಲಾ ಉಲ್ಟಾ ಆಗುತ್ತಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅದ್ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ 15 ರಿಂದ 17 ಸ್ಥಾನಗಳನ್ನು ಗೆಲ್ಲಬಹುದು ಎಂದು ಲೋಕ್‌ಪೋಲ್ ಸಮೀಕ್ಷೆ ಈಗ ಭವಿಷ್ಯ ನುಡಿದಿದೆ. ಹಾಗೇ ಬಿಜೆಪಿ & ಜೆಡಿಎಸ್ ಮೈತ್ರಿ ಒಕ್ಕೂಟವು, ಕೇವಲ 11 ರಿಂದ 13 ಸ್ಥಾನ ಗೆಲ್ಲಬಹುದು ಎನ್ನಲಾಗಿದೆ.
ಒಟ್ನಲ್ಲಿ ಹೀಗೆ ಕರ್ನಾಟಕದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುವ ಜೊತೆಗೆ ಪ್ರಮುಖವಾಗಿ ಈ ಸಮಯದಲ್ಲಿ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರವನ್ನೂ ಕಳೆದುಕೊಳ್ಳುವ ಸಾಧ್ಯತೆಯು ದಟ್ಟವಾಗಿದೆ ಎಂಬ ವಾತಾವರಣ ನಿರ್ಮಾಣ ಆಗಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಬೆಂಗಳೂರು ಕೇಂದ್ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಏನು ಮಾಡ್ತಾರೆ? ಪಿ.ಸಿ. ಮೋಹನ್ ಅವರ ರಣತಂತ್ರ ವರ್ಕೌಟ್ ಆಗುತ್ತಾ? ಇಲ್ಲ ಕಾಂಗ್ರೆಸ್ ಗೆಲ್ಲುತ್ತಾ? ಎಂಬ ಕುತೂಹಲ ಮೂಡಿದೆ.
ಪ್ರಪಂಚದ ಕಣ್ಣು ಭಾರತದ ಮೇಲೆ!
2024ರ ಲೋಕಸಭೆ ಚುನಾವಣೆಗೆ ಅಖಾಡ ಸಿದ್ಧವಾಗಿದೆ ಅಭ್ಯರ್ಥಿಗಳೂ ಸಿದ್ಧವಾಗಿ ಕೂತಿದ್ದಾರೆ. ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿ, ರಣಕಹಳೆ ಮೊಗಳಗಿಸಿದೆ. ಇನ್ನೇನು ಕೆಲ ದಿನಗಳಲ್ಲಿ ಭಾರತೀಯರು ಹೊಸ ಸರ್ಕಾರ ಆಯ್ಕೆ ಮಾಡಲು ಮತದಾನ ಮಾಡಲಿದ್ದು, ಹಾಗೇ ಇದಕ್ಕೆ ಬೇಕಾದ ತಯಾರಿಗಳು ಕೂಡ ಸಾಗಿವೆ. ಕರ್ನಾಟಕದಲ್ಲಿ ಕೂಡ ಎಲ್ಲಾ ರೀತಿಯ ತಯಾರಿ ನಡೆದಿದೆ. ಕರ್ನಾಟಕದಲ್ಲಿ ಒಟ್ಟು 2 ಹಂತದ ಚುನಾವಣೆ ನಡೆಯಲಿದ್ದು, ಹಾಗೇ ಚುನಾವಣೆ ಫಲಿತಾಂಶ ಜೂನ್ 4ಕ್ಕೆ ಹೊರಬೀಳಲಿದೆ. ಈ ಮೂಲಕ ಇಡೀ ಪ್ರಪಂಚದ ಗಮನ ಸೆಳೆದಿರುವ ಭಾರತದ ಲೋಕಸಭಾ ಚುನಾವಣೆ ಅಂತಿಮ ಹಂತಕ್ಕೆ ತಲುಪುತ್ತಿದೆ.












Click it and Unblock the Notifications