Get Updates
Get notified of breaking news, exclusive insights, and must-see stories!

ಡಿ. ಕೆ. ಸುರೇಶ್‌ ಸೋಲಿಸಲು ವ್ಯೂಹ ರಚಿಸಿದ ಬಿಜೆಪಿ ಮತ್ತು ಜೆಡಿಎಸ್?

ಬೆಂಗಳೂರು, ಜನವರಿ 29: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ. ಕೆ. ಸುರೇಶ್‌ ಸೋಲಿಸಲು ಬಿಜೆಪಿ & ಜೆಡಿಎಸ್ ಮೈತ್ರಿಕೂಟ ವ್ಯೂಹ ರಚನೆ ಮಾಡಿದೆ. 2019ರ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿರುವ ಏಕೈಕ ಕ್ಷೇತ್ರವಿದು.

ಕರ್ನಾಟಕದ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಹೋದರ ಡಿ. ಕೆ. ಸುರೇಶ್ ಹಾಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು. ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಎಚ್. ಡಿ. ಕುಮಾರಸ್ವಾಮಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎಂಬುದು ಸುದ್ದಿ.

Lok Sabha Election 2024 BJP JDS Alliance Strategy For Bengaluru Rural Seat

2014ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನ ಪ್ರಭಾಕರ ರೆಡ್ಡಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 3,17,870 ಮತಗಳನ್ನು ಪಡೆದಿದ್ದರು. ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಡಿ. ಕೆ. ಸುರೇಶ್ ಸೋಲಿಸಿದರೆ ಡಿ. ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟು ಮಾಡಬಹುದು ಎಂಬುದು ಲೆಕ್ಕಾಚಾರವಾಗಿದೆ.

ಕುಮಾರಸ್ವಾಮಿಯೇ ಕಣಕ್ಕಿಳಿಯುತ್ತಾರಾ?: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ರಾಜರಾಜೇಶ್ವರಿ ನಗರ, ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ಬಿಜೆಪಿಯ ಭದ್ರಕೋಟೆ. ಚನ್ನಪಟ್ಟಣ, ಮಾಗಡಿ, ಕುಣಿಗಲ್, ಕನಕಪುರದಲ್ಲಿ ಜೆಡಿಎಸ್‌ನ ಒಂದಷ್ಟು ಮತಗಳಿವೆ. ಇವುಗಳನ್ನು ಒಟ್ಟು ಹಾಕಿ ಒಕ್ಕಲಿಗ ಎಂಬ ದಾಳ ಉರುಳಿಸಿದರೆ ಡಿ. ಕೆ. ಸುರೇಶ್‌ ಸೋಲಿಸಬಹುದು ಎಂದು ಅಂದಾಜಿಸಲಾಗಿದೆ.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಬೆಂಗಳೂರು ಗ್ರಾಮಾಂತರ ಯಾರಿಗೆ? ಎಂಬುದು ಇನ್ನೂ ಖಚಿತವಾಗಿಲ್ಲ. ಮೈತ್ರಿ ಅಭ್ಯರ್ಥಿಯಾಗಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ. ಸಿ. ಎನ್. ಮಂಜುನಾಥ್ ಕಣಕ್ಕಿಳಿಸಬೇಕು. ಅವರು ಒಪ್ಪಿಗೆ ನೀಡದಿದ್ದರೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯೇ ಕಣಕ್ಕಿಳಿಯಲಿದ್ದಾರೆ? ಎಂಬ ಸುದ್ದಿಗಳು ಕೇಳಿ ಬರುತ್ತಿವೆ.

ಎಚ್. ಡಿ. ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಬಿಜೆಪಿ ಹೈಕಮಾಂಡ್ ಹೇಳಿದರೆ ಅವರು ಕಣಕ್ಕಿಳಿಯಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಕಳೆದ ಎರಡು ಚುನಾವಣೆಗಳಿಂದ ಬೆಂಗಳೂರು ಗ್ರಾಮಾಂತರ ಬಿಜೆಪಿಗೆ ಒಲಿದಿಲ್ಲ. ಎರಡು ಬಾರಿಯೂ ಅಭ್ಯರ್ಥಿ ಬದಲಿಸಿ ಬಿಜೆಪಿ ಮಾಡಿದ ತಂತ್ರಗಳು ಕೈ ಕೊಟ್ಟಿವೆ. 2019ರಲ್ಲಿ ಕಾಂಗ್ರೆಸ್‌ನ ಡಿ. ಕೆ. ಸುರೇಶ್‌ 8,78,258 ಮತಗಳನ್ನು ಪಡೆದು ಜಯಗಳಿಸಿದರು. ಎದುರಾಳಿ ಬಿಜೆಪಿಯ ಅಶ್ವತ್ಥ್ ನಾರಾಯಣ ಗೌಡ 6,71,388 ಮತಗಳನ್ನು ಪಡೆದಿದ್ದರು.

2014ರ ಚುನಾವಣೆಯಲ್ಲಿ ಡಿ. ಕೆ. ಸುರೇಶ್ 6,52,723 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಬಿಜೆಪಿಯ ಮುನಿರಾಜು ಗೌಡ 4,21,243 ಮತಗಳನ್ನು ಪಡೆದು 2ನೇ ಸ್ಥಾನ ಪಡೆದರೆ, ಜೆಡಿಎಸ್‌ನ ಪ್ರಭಾಕರ ರೆಡ್ಡಿ 3,17,870 ಮತಗಳನ್ನು ಪಡೆದು 3ನೇ ಸ್ಥಾನವನ್ನು ಪಡೆದಿದ್ದರು.

2019ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದವು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆದರೆ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಗೆದ್ದಿದ್ದು ಬೆಂಗಳೂರು ಗ್ರಾಮಾಂತರ ಒಂದೇ ಕ್ಷೇತ್ರ.

ಆದರೆ ಈ ಬಾರಿ ಲೆಕ್ಕಾಚಾರ ಬದಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಡಿ. ಕೆ. ಸುರೇಶ್ ಸಹೋದರ ಡಿ. ಕೆ. ಶಿವಕುಮಾರ್ ಪ್ರಭಾವಿ ಸ್ಥಾನದಲ್ಲಿದ್ದಾರೆ. ಇತ್ತ ಕಡೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. ಆದ್ದರಿಂದ ಬೆಂಗಳೂರು ಗ್ರಾಮಾಂತರದ ಚುನಾವಣಾ ಕಣ ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸಂಚಾಲಕರಾಗಿ ಆರ್. ಆರ್. ನಗರ ಕ್ಷೇತ್ರದ ಶಾಸಕ ಮುನಿರತ್ನ ನೇಮಿಸಿದೆ. ಲೋಕಸಭೆ ಟಿಕೆಟ್ ಹಂಚಿಕೆ ಮಾಡುವ ಮುನ್ನ ಬಿಜೆಪಿ ಸಮೀಕ್ಷೆಯೊಂದನ್ನು ನಡೆಸಲಿದೆ. ಈ ಸಮೀಕ್ಷೆ ಬಳಿಕ ಎಚ್. ಡಿ. ಕುಮಾರಸ್ವಾಮಿಯನ್ನು ಕ್ಷೇತ್ರದಲ್ಲಿ ಕಣಕ್ಕಿಳಿಸುವ ಕುರಿತು ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+