ಜಗದೀಶ್ ಶೆಟ್ಟರ್ & ಶೋಭಾ ಕರಂದ್ಲಾಜೆ ಪಾಲಿಗೆ ಭರ್ಜರಿ ಲಾಟರಿ: ಬಿಜೆಪಿ ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಇದೇನಾ ನೋಡಿ?
ಲೋಕಸಭೆ ಚುನಾವಣೆಗೆ ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಫೈನಲ್ ಆಗಿದೆ ಎನ್ನಲಾಗುತ್ತಿದೆ. ನಾಳೆ ಅಥವಾ ನಾಡಿದ್ದು ಕರ್ನಾಟಕದ ಸಂಪೂರ್ಣ ಪಟ್ಟಿಯನ್ನ ರಿಲೀಸ್ ಮಾಡುವ ನಿರೀಕ್ಷೆ ಇದೆ. ಆದರೆ ಈಗಾಗಲೇ ಬಿಜೆಪಿ ಟಿಕೆಟ್ ಪಡೆಯುವ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್ ನಾಯಕರು ಸಂಪೂರ್ಣ ಮಾಹಿತಿ ಪಡೆದಿದ್ದು, ಈಗಾಗಲೇ 20 ಕ್ಷೇತ್ರಗಳಲ್ಲಿ ಯಾರು ಯಾರು ನಿಲ್ಲೆಬೇಕು ಎಂಬುದನ್ನ ಫೈನಲ್ ಮಾಡಿದ್ದಾರಂತೆ. ಹಾಗಾದರೆ ಅವರೆಲ್ಲ ಯಾರು? ಬನ್ನಿ ತಿಳಿಯೋಣ.
ಮಾಜಿ ಸಿಎಂ ಯಡಿಯೂರಪ್ಪ & ಬಿ.ವೈ. ವಿಜಯೇಂದ್ರ ಇರುವ ಬಿಜೆಪಿ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ, ಈಗಾಗಲೇ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲಾಗಿದೆ. ನಿನ್ನೆ ಈ ಬಗ್ಗೆ ಮಹತ್ವದ ಸಭೆಯನ್ನ ನಡೆಸಿರುವ ಬಿಜೆಪಿ ಕೇಂದ್ರ ನಾಯಕರು ಲೋಕಸಭೆ ಚುನಾವಣೆ 2024ರಲ್ಲಿ ಯಾರೆಲ್ಲಾ ಬಿಜೆಪಿ ಪಕ್ಷದಿಂದ ಕರ್ನಾಟಕದ ಅಖಾಡಕ್ಕೆ ಇಳಿಯಬೇಕು? ಎಂಬ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಈಗಾಗಲೇ ಹಲವರ ಹೆಸರು ಫೈನಲ್ ಆಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿ ಬಸವರಾಜ ಬೊಮ್ಮಾಯಿ ಸಮೇತ ಅನೇಕರ ಹೆಸರು ಮುನ್ನೆಲೆಗೆ ಬಂದಿದೆ. ಬಿಜೆಪಿ ಪಕ್ಷದ ಕರ್ನಾಟಕ ಅಭ್ಯರ್ಥಿಗಳ ಪಟ್ಟಿಗಾಗಿ ಮುಂದೆ ಓದಿ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ?
ಈಗಿನ ಚರ್ಚೆಯ ಪ್ರಕಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಳಗಾವಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ಹಾಗೇ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ಕ್ಷೇತ್ರದಿಂದ, ಉಡುಪಿ & ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ & ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ, ದೇವೇಗೌಡರ ಅಳಿಯ ಎ. ಮಂಜುನಾಥ್, ಹುಬ್ಬಳ್ಳಿ & ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ್ ಜೋಶಿ ಅವರು ಚುನಾವಣೆಯ ಅಖಾಡಕ್ಕೆ ಇಳಿಯುತ್ತಾರೆ ಎನ್ನಲಾಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿ ಸೂರ್ಯ, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ. ಕೆ. ಸುಧಾಕರ್, ಬೆಂಗಳೂರು ಕೇಂದ್ರದಿಂದ ಪಿ.ಸಿ. ಮೋಹನ್, ತುಮಕೂರು ಕ್ಷೇತ್ರದಿಂದ ವಿ. ಸೋಮಣ್ಣ, ವಿಜಯಪುರ ಕ್ಷೇತ್ರದಿಂದ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಫೈನಲ್ ಆಗಿದೆ ಎನ್ನಲಾಗಿದೆ. ಇದೀಗ ಅಧಿಕೃತ ಘೋಷಣೆ ಬಾಕಿ ಇದೆ ಎನ್ನುವ ಮಾತು ಕೇಳಿಬರುತ್ತಿದೆ. ಮತ್ತೊಂದು ಕಡೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು & ಕೊಡುಗ ಕ್ಷೇತ್ರಗಳ ಟಿಕೆಟ್ ಪೆಂಡಿಂಗ್ ಇಡಲಾಗಿದೆಯಂತೆ.

ಯಡಿಯೂರಪ್ಪ ಮಾತೇ ಫೈನಲ್?
2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಕರ್ನಾಟಕದಲ್ಲಿ ಸೋತಿತ್ತು. ಈ ಎಲ್ಲ ಬೆಳವಣಿಗೆ ಮಧ್ಯೆ ಬಿಜೆಪಿ ಕೇಂದ್ರ ನಾಯಕರು 2024ರ ಲೋಕಸಭೆ ಚುನಾವಣೆಗೆ ಮೊದಲೇ ಅಲರ್ಟ್ ಆಗಿದ್ದು ಯಡಿಯೂರಪ್ಪ ಅವರ ಕೈ ಬಲಪಡಿಸಿದ್ದಾರೆ. ಈ ಕಾರಣಕ್ಕೆ ಇದೀಗ 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧೆ ಮಾಡಲಿರುವ ಬಿಜೆಪಿ ಅಭ್ಯರ್ಥಿಗಳನ್ನು ಯಡಿಯೂರಪ್ಪ ಅವರೇ ಆಯ್ಕೆ ಮಾಡಿ ಪಟ್ಟಿ ರೆಡಿ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ, ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿದೆ 2024ರ ಲೋಕಸಭೆ ಚುನಾವಣೆ.
ಮೈಸೂರು ಟಿಕೆಟ್ ಯಾರ ಪಾಲಿಗೆ?
ಕರ್ನಾಟಕದ ಮೈಸೂರು & ಕೊಡಗು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವು ಇದೀಗ ಭರ್ಜರಿ ಚರ್ಚೆಯನ್ನ ಹುಟ್ಟುಹಾಕಿದೆ. ಈ ಬಾರಿ ಮಾಜಿ ಪತ್ರಕರ್ತ ಹಾಗೂ ಹಾಲಿ ಮೈಸೂರು & ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗಲ್ಲ ಎನ್ನಲಾಗುತ್ತಿದ್ದು, ಹೀಗಾಗಿ ಬಿಜೆಪಿ ಕೇಂದ್ರ ನಾಯಕರು ಸಿಂಹಗೆ ಟಿಕೆಟ್ ಕೊಡಬೇಕಾ? ಬೇಡವೋ? ಎಂಬ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇದೆಲ್ಲವನ್ನೂ ನೋಡುತ್ತಿದ್ದರೆ ಮೈಸೂರು ಕ್ಷೇತ್ರದಲ್ಲಿ ಕೂಡ ಹೊಸ ಅಭ್ಯರ್ಥಿ ಎಂಟ್ರಿ ಆಗುವ ಸಾಧ್ಯತೆ ದಟ್ಟವಾಗಿದೆ.
10 ವರ್ಷ ನಿರಂತರ ಆಡಳಿತ
ಬಿಜೆಪಿ 2014ರಲ್ಲಿ ಮೊದಲನೆಯ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿಯಿತು ಅಲ್ಲಿಂದ ಈವರೆಗೆ ಒಟ್ಟಾರೆ 10 ವರ್ಷ ಆಡಳಿತದಲ್ಲಿ ಮತ್ತಷ್ಟು ಪ್ರಬಲವಾಗಿ ಬೆಳೆದಿದೆ. ಅದರಲ್ಲೂ ಈಗಿನ ಪರಿಸ್ಥಿತಿ ನೋಡುತ್ತಿದ್ದರೆ, ಬಿಜೆಪಿ ಭರ್ಜರಿ ಗೆಲುವುನ್ನ ದಾಖಲಿಸುತ್ತದೆ ಎನ್ನಲಾಗುತ್ತಿದೆ. ಕರ್ನಾಟಕದಲ್ಲಿ ಈಗ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಭರ್ಜರಿ ದಿಗ್ವಿಜಯ ಸಿಗುವುದು ಗ್ಯಾರಂಟಿ, ಅಂತಾ ಹೇಳಲಾಗುತ್ತಿದೆ. ಸಮೀಕ್ಷೆಗಳು ಈ ರೀತಿಯಾಗಿ ಭವಿಷ್ಯ ನುಡಿಯುತ್ತಿವೆ. ಹೀಗಾಗಿ ಬಿಜೆಪಿಯ ಕೇಂದ್ರದ ನಾಯಕರಿಗೆ ಕೂಡ ಮತ್ತಷ್ಟು ಹುಮ್ಮಸ್ಸು ಬಂದಂತಾಗಿದೆ.
ಸಮೀಕ್ಷೆಗಳ ಭವಿಷ್ಯ ನಿಜವಾಗುತ್ತಾ?
ಲೋಕಸಭೆ ಚುನಾವಣೆ ಅಖಾಡ ರಂಗು ರಂಗಾಗಿದೆ ಜಯ ಒಂದೇ ಮಂತ್ರ ಅಂತ, ಈಗ ಕಾಂಗ್ರೆಸ್ & ಬಿಜೆಪಿ ನಾಯಕರು ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ, ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷ ಕೈಜೋಡಿಸಿ ಎನ್‌ಡಿಎ ಒಕ್ಕೂಟಕ್ಕೆ ಸೇರಿದೆ. ಈ ಕಾರಣ ವಾತಾವರಣ ಬಹುತೇಕ ಬದಲಾಗಿ ಹೋಗಿದೆ. ಇದೀಗ ಹೊರಬಿದ್ದಿರುವ ಕೆಲವು ಸಮೀಕ್ಷೆಗಳ ಪ್ರಕಾರ, ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಕರ್ನಾಟಕದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ 22-28 ಸ್ಥಾನಗಳ ಗೆಲ್ಲಬಹುದು ಎನ್ನಲಾಗುತ್ತಿದೆ. ಹೀಗಾಗಿ ಚುನಾವಣೆಗೆ ಮೊದಲೇ ಕುತೂಹಲ ಡಬಲ್ ಆಗಿದೆ.












Click it and Unblock the Notifications