Get Updates
Get notified of breaking news, exclusive insights, and must-see stories!

ಲೋಕಸಭೆ ಚುನಾವಣೆ ಸಮೀಕ್ಷೆ; ಕರ್ನಾಟಕದಲ್ಲಿ ಬಿಜೆಪಿಗೆ 20 ಸೀಟು

ಬೆಂಗಳೂರು, ಜನವರಿ 25: ಕರ್ನಾಟಕ ಬಿಜೆಪಿ ಲೋಕಸಭೆ ಚುನಾವಣೆ ತಯಾರಿ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ರಾಜ್ಯದಲ್ಲಿ ಪಕ್ಷ ಎಷ್ಟು ಸ್ಥಾನಗಳಿಸಬಹುದು? ಎಂದು ಚರ್ಚೆ ನಡೆಯತ್ತಿದೆ. ರಾಜ್ಯದಲ್ಲಿ ಚುನಾವಣಾ ಪೂರ್ವ ಸಮೀಕ್ಷೆಯನ್ನು ಸಂಸ್ಥೆಯೊಂದು ನಡೆಸಿದ್ದು, ವರದಿ ಬಿಡುಗಡೆ ಮಾಡಿದೆ.

2024ರ ಲೋಕಸಭೆ ಚುನಾವಣೆ ಕುರಿತು Janmatpolls ವಿವಿಧ ರಾಜ್ಯಗಳಲ್ಲಿ ಸಮೀಕ್ಷೆಯನ್ನು ನಡೆಸುತ್ತಿದೆ. ಕರ್ನಾಟಕದಲ್ಲಿಯೂ ಸಮೀಕ್ಷೆ ಮಾಡಿದ್ದು, ಸಮೀಕ್ಷೆಯ ವರದಿ ಬಿಜೆಪಿ ನಾಯಕರ ಚುನಾವಣಾ ಉತ್ಸಾಹವನ್ನು ಹೆಚ್ಚಿಸಿದೆ.

Lok Sabha Election 2024 BJP May Win 20 Seats In Karnataka

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಪಡೆಯುವ ಗುರಿ ಹೊಂದಿದೆ. ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯೂ ಬಿಜೆಪಿಗೆ ಸಹಾಯಕವಾಗಲಿದೆ ಎಂದು ಅಂದಾಜಿಸಲಾಗಿದೆ.

ಬಿಜೆಪಿ ಪಕ್ಷಕ್ಕೆ ಎಷ್ಟು ಸೀಟು?; ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. 2024ರ ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಕುತೂಹಲ ಮೂಡಿಸಿದೆ. ಇದಕ್ಕೆ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವುದು ಮತ್ತು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದು.

Janmatpolls ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಕರ್ನಾಟಕದ ಪ್ರತಿಪಕ್ಷ ಬಿಜೆಪಿ 18-20 ಸ್ಥಾನಗಳಲ್ಲಿ ಜಯಗಳಿಸಲಿದೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪಕ್ಷವಾಗಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ.

ಕಾಂಗ್ರೆಸ್ ಪಕ್ಷ 7-9 ಸ್ಥಾನಗಳಲ್ಲಿ ಜಯಗಳಿಸಲಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷವನ್ನು ಬಿಜೆಪಿ ಜೊತೆ ಸೇರಿಸಲಾಗಿದೆ. ಜೆಡಿಎಸ್‌ ಎಷ್ಟು ಸ್ಥಾನಗಳಿಸಲಿದೆ ಎಂದು ಸಮೀಕ್ಷೆ ಪ್ರತ್ಯೇಕವಾಗಿ ಹೇಳಿಲ್ಲ.

2019ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಿರುವುದು 1 ಸ್ಥಾನ (ಬೆಂಗಳೂರು ಗ್ರಾಮಾಂತರ). ಜೆಡಿಎಸ್‌ ಗೆದ್ದಿರುವುದು 1 ಸ್ಥಾನ (ಹಾಸನ). ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದವು. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ.

ಕಳೆದ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ ಈ ಬಾರಿ ಬಿಜೆಪಿಗೆ ಸೀಟುಗಳು ಕಡಿಮೆಯಾಗಿವೆ. ಕಳೆದ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಜಯಗಳಿಸಿತ್ತು. ಅಲ್ಲದೇ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದರು.

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 66 ಸ್ಥಾನಗಳಲ್ಲಿ ಜಯಗಳಿಸಿ ಅಧಿಕಾರ ಕಳೆದುಕೊಂಡಿತ್ತು. ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿತ್ತು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ. ವೈ. ವಿಜಯೇಂದ್ರರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು.

ಲೋಕಸಭೆ ಚುನಾವಣೆಯಲ್ಲಿ 20+ ಸ್ಥಾನಗಳಲ್ಲಿ ಜಯಗಳಿಸುತ್ತೇವೆ ಎಂದು ಬಿ. ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಬೆಂಬಲವೂ ಸಿಗುವ ಕಾರಣ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

Lok Poll ಕರ್ನಾಟಕದಲ್ಲಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 12-14 ಸ್ಥಾನ, ಬಿಜೆಪಿ 10-12 ಸ್ಥಾನ, ಜೆಡಿಎಸ್ 1-2 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿತ್ತು. ಕಾಂಗ್ರೆಸ್ ಹೈಕಮಾಂಡ್ ನಾಯಕರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವುದರಿಂದ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಗುರಿ ನೀಡಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಸಹ ಎಷ್ಟು ಸೀಟುಗಳನ್ನು ಜೆಡಿಎಸ್‌ಗೆ ಹಂಚಿಕೆ ಮಾಡಲಾಗುತ್ತದೆ ಎಂಬುದು ಇನ್ನೂ ಅಂತಿಮವಾಗಿಲ್ಲ. ಮಂಡ್ಯ, ಹಾಸನ ಕ್ಷೇತ್ರವನ್ನು ಬಿಟ್ಟು ಕೊಡಲಾಗುತ್ತದೆ ಎಂಬ ಮಾಹಿತಿ ಇದೆ. ಮಂಡ್ಯದ ಸಂಸದೆ ಸುಮಲತಾ ಈಗಾಗಲೇ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಆದ್ದರಿಂದ ಮಂಡ್ಯ ಕ್ಷೇತ್ರ ಯಾರಿಗೆ ಎಂಬುದು ಕುತೂಹಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+