BJP 2nd Candidates List: ಬಿಜೆಪಿ ಎರಡನೇ ಪಟ್ಟಿ ಇಂದು ಬಿಡುಗಡೆ ನಿರೀಕ್ಷೆ
ಬೆಂಗಳೂರು ಮಾರ್ಚ್ 13: ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಗೆ ತಡವಾಗುತ್ತಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಈಗಾಗಲೇ ಪಟ್ಟಿ ಸಿದ್ಧವಾಗಿದ್ದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಬೇಕಿದೆ. ಆದರೆ ಪಟ್ಟಿ ಬಿಡುಗಡೆಗೆ ಇಂದು ನಾಳೆ ಎನ್ನುತ್ತ ಕ್ಷೇತ್ರಗಳಲ್ಲಿ ಆಗುವ ಬದಲಾವಣೆಗಳನ್ನು ಬಿಜೆಪಿ ಸೂಕ್ಷ್ಮವಾಗಿ ಅವಲೋಕಿಸುತ್ತಿರುವಂತೆ ಕಾಣಿಸುತ್ತಿದೆ.
ರಾಜ್ಯದ ಅಭ್ಯರ್ಥಿಗಳನ್ನು ಒಳಗೊಳ್ಳಲಿರುವ ಬಿಜೆಪಿಯ ಎರಡನೇ ಪಟ್ಟಿ ಬುಧವಾರ/ಗುರುವಾರ ಬಿಡುಗಡೆ ಆಗುವ ನಿರೀಕ್ಷೆಯಿದ್ದು, ಚುನಾವಣಾ ರಾಜ ಕಾರಣದಿಂದ ನಿವೃತ್ತಿ ಫೋಷಿಸಿರುವ ನಾಲ್ವರನ್ನು ಹೊರತುಪಡಿಸಿ ಇತರ ಹಾಲಿ ಸಂಸದರ ಪೈಕಿ ಅರ್ಧಕ್ಕಿಂತ ಹೆಚ್ಚು ಅಂದರೆ, ಸುಮಾರು 12 ಮಂದಿಗೆ ಮತ್ತೊಮ್ಮೆ ಟಿಕೆಟ್ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಒಟ್ಟು 28 ಹಾಲಿ ಸಂಸದರ ಪೈಕಿ 25 ಬಿಜೆಪಿಯ ಸಂಸದರಿದ್ದಾರೆ. ಇವರಲ್ಲಿ ಚಾಮರಾಜನಗರದ ವಿ.ಶ್ರೀನಿವಾಸ ಪ್ರಸಾದ್, ಚಿಕ್ಕಬಳ್ಳಾಪುರದ ಬಿ.ಎಸ್.ಬಸವರಾಜು ವಯೋ ಕಾರಣದಿಂದ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಈಗಾಗಲೇ ಘೋಷಿಸಿದ್ದಾರೆ.
ಹಾವೇರಿಯ ಶಿವಕುಮಾರ್ ಉದಾಸಿ ಅವರಿಗೆ ವಯಸ್ಸು ಇದ್ದರೂ ಕೂಡ ವೈಯಕ್ತಿಕ ಕಾರಣದಿಂದಾಗಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಮದು ಸ್ಪಷ್ಟಪಡಿಸಿದ್ದಾರೆ. ಇನ್ನುಳಿಯುವ 21 ಸಂಸದರ ಪೈಕಿ12 ಮಂದಿಗೆ ಟಿಕೆಟ್ ಸಿಗುತ್ತಾ ಎಂಬುದರ ಬಗ್ಗೆ ಚರ್ಚೆ ಬಿಜೆಪಿ ಪಾಳೆಯದಲ್ಲಿ ಗಂಭೀರವಾಗಿ ಕೇಳಿಬರುತ್ತಿದೆ.

ಹೀಗೆ ಚರ್ಚೆಗೆ ಒಳಪಟ್ಟವರೆಂದರೆ ಮೈಸೂರಿನ ಪ್ರತಾಪ್ ಸಿಂಹ, ಬೆಂಗಳೂರು ಉತ್ತರದಡಿ ವಿ ಸದಾನಂದ ಗೌಡ, ಕೋಲಾರದ ಮುನಿಸ್ವಾಮಿ, ದಕ್ಷಿಣ ಕನ್ನಡದ ನಳಿನ್‌ಕುಮಾರ್ ಕಟೀಲ್, ಕೇಂದ್ರ ಸಚಿವರಾಗಿರುವ ಚಿತ್ರದುರ್ಗದ ಎ.ನಾರಾಯಣಸ್ವಾಮಿ, ದಾವಣಗೆರೆಯ ಜಿ.ಎಂ.ಸಿದ್ದೇಶ್ವರ್, ಉತ್ತರ ಕನ್ನಡದ ಅನಂತಕುಮಾರ್ ಹೆಗಡೆ, ಬೆಳಗಾವಿಯ ಮಂಗಳಾ ಅಂಗಡಿ, ವಿಜಯಪುರದ ರಮೇಶ್ ಜಿಗಜಿಣಗಿ, ಕೇಂದ್ರ ಸಚಿವರಾಗಿರುವ ಬೀದರ್‌ನ ಭಗವಂತ ಖೂಬಾ, ಬಳ್ಳಾರಿಯ ದೇವೇಂದ್ರಪ್ಪ ಹಾಗೂ ಕೊಪ್ಪಳದ ಕರಡಿ ಸಂಗಣ್ಣ.
ಬಿಜೆಪಿ ವರಿಷ್ಠರು ಸಂಸದರ ಸಾಧನೆಯನ್ನು ಪರಿಗಣಿಸುವುದರ ಜೊತೆಗೆ ಕೆಲವು ಕ್ಷೇತ್ರಗಳಲ್ಲಿ ಹೊಸ ಪ್ರಯೋಗದ ಮೂಲಕ ಹೊಸಬರಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದೆ. ಆದರೆ ಕಳೆದ ವಿಧಾನಸಭಾ ಚುನಾವಣೆಯ ಅನುಭವದ ಆಧಾರದ ಮೇಲೆ ಈ ಬಾರಿ ಹೊಸ ಪ್ರಯೋಗ ಮಾಡುವುದು ಬೇಡ ಎಂಬ ಅಭಿಪ್ರಾಯವನ್ನು ಪಕ್ಷದ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ಈಗಾಗಲೇ ವರಿಷ್ಠಗೆ ತಿಳಿಸಿದ್ದಾರೆ.
ಆದರೂ, ಹಾಲಿ ಸಂಸದರ ಪೈಕಿ ಬಹುತೇಕರಿಗೆ ಟಿಕೆಟ್ ಸಿಗುತ್ತಾ ಎಂಬುದರ ಬಗ್ಗೆ ಖಾತರಿಯಿಲ್ಲ. ರಾಜ್ಯ ಬಿಜೆಪಿಯ ನಾಯಕರನ್ನು ಒಳಗೊಂಡಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ದೆಹಲಿಯಲ್ಲಿ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆದಿದ್ದರೂ ಕೆಲವು ಕ್ಷೇತ್ರಗಳ ಬಗ್ಗೆ ಒಮ್ಮತಾಭಿಪ್ರಾಯಕ್ಕೆ ಬರಲು ಸಾಧ್ಯವಾಗಲಿಲ್ಲ. ಹೀಗಾಗಿಯೇ ಈ ಪಟ್ಟಿಯಲ್ಲಿ ಸುಮಾರು 18-20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇನ್ನುಳಿಯುವ ಕ್ಷೇತ್ರಗಳಿಗೆ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿಗೆ ತೆರಳಿದ್ದ ರಾಜ್ಯ ನಾಯಕರ ಪೈಕಿ ಯಡಿಯೂರಪ್ಪ, ಮಾಜಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಮಂಗಳವಾರ ಬೆಂಗಲೂರಿಗೆ ವಾಪಾಸಾದರು. ಆದರೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೆಹಲಿಯಲ್ಲೇ ವಾಸ್ತವ್ಯ ಮುಂದುವರೆಸಿ ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಈ ಬಾರಿ ಲೋಕಸಭಾ ಚುನಾವಣೆ ಭಾರೀ ಕುತೂಹಲವನ್ನು ಹುಟ್ಟಿಸಿದ್ದು, ಹೈಕಮಾಂಡ್ ಯಾಋಇಗೆ ಮಣೆ ಹಾಕಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications