Get Updates
Get notified of breaking news, exclusive insights, and must-see stories!

ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲ್‌ಗೆ ಕಠಿಣ ಸವಾಲುಗಳು!

ಮಂಗಳೂರು, ಮಾರ್ಚ್ 01: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಕರ್ನಾಟಕದಲ್ಲಿಯೂ ಚುನಾವಣಾ ಬಿಸಿ ಏರಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 25ರಲ್ಲಿ ಬಿಜೆಪಿ ಸಂಸದರು ಇದ್ದಾರೆ. ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆಯೇ?, ಹೊಸ ಅಭ್ಯರ್ಥಿ ಯಾರಾಗಬಹುದು ಎಂಬುದು ಲೆಕ್ಕಾಚಾರವಾಗಿದೆ.

ಕರ್ನಾಟಕದ ಕರಾವಳಿ ಬಿಜೆಪಿಯ ಭದ್ರಕೋಟೆ. ಆದರೆ ಈ ಬಾರಿ ಭದ್ರಕೋಟೆಯಲ್ಲಿಯೇ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಲಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಈ ಕುರಿತು ಹಲವು ಚರ್ಚೆಗಳು ಸಾಗಿವೆ. ದಕ್ಷಿಣ ಕನ್ನಡ ಸಹ ರಾಜ್ಯದ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದು.

Lok Sabha Election 2024 Challenges For Nalin Kumar Kateel

ದಕ್ಷಿಣ ಕನ್ನಡದ ಹಾಲಿ ಸಂಸದರು ನಳಿನ್ ಕುಮಾರ್ ಕಟೀಲ್. ರಾಜ್ಯ ಬಿಜೆಪಿ ಘಟಕದ ನಿಟಕಪೂರ್ವ ಅಧ್ಯಕ್ಷರು. ಮೂರು ಬಾರಿ ಗೆದ್ದಿರುವ ಅವರು 4ನೇ ಬಾರಿಯೂ ಟಿಕೆಟ್ ಪಡೆದು ಸಂಸತ್ ಪ್ರವೇಶಿಸುಸವ ಉತ್ಸಾಹದಲ್ಲಿದ್ದಾರೆ. ಆದರೆ ಈ ಬಾರಿ ಕಟೀಲ್ ಅವರಿಗೆ ಕಠಿಣ ಸವಾಲುಗಳು ಎದುರಾಗಿವೆ.

ಹಿಂದೂ ಮುಖಂಡರ ಆಕ್ರೋಶ: ದಕ್ಷಿಣ ಕನ್ನಡದಲ್ಲಿ ಹಿಂದೂ ಸಂಘಟನೆಗಳ ಮುಖಂಡರುಗಳೇ ನಳಿನ್ ಕುಮಾರ್ ಕಟೀಲ್‌ ವಿರುದ್ಧ ಆಕ್ರೋಶಗೊಂಡಿದ್ದಾರೆ. ಬೇರೆ ಅಭ್ಯರ್ಥಿ ಹುಡುಕಿ ಕಟೀಲ್‌ಗೆ ಟಿಕೆಟ್ ನೀಡಿದರೆ ಬೇರೆ ದಾರಿ ಹಿಡಿಯಬೇಕಾಗುತ್ತದೆ ಎಂಬ ಸಂದೇಶವನ್ನು ಬಿಜೆಪಿಯ ಹೈಕಮಾಂಡ್‌ಗೆ ರವಾನೆ ಮಾಡಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು. ಪುತ್ತಿಲ ಬೆಂಬಲಿಗರ ಜೊತೆ ಸಭೆ ನಡೆಸಿದ್ದರು. ಗುರುವಾರ ಅವರು ದಕ್ಷಿಣ ಕನ್ನಡದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಘೋಷಣೆ ಮಾಡಿರುವುದು ಕಟೀಲ್‌ಗೆ ಎದುರಾಗಿರುವ ಮೊದಲ ಸವಾಲಾಗಿದೆ.

ಕೆಲವು ದಿನಗಳ ಹಿಂದೆ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಬಿಜೆಪಿ ಟಿಕೆಟ್ ಕೊಡಿ ಇಲ್ಲವಾದಲ್ಲಿ ಸ್ವತಂತ್ರ ಸ್ಪರ್ಧೆಗೆ ರೆಡಿ ಎಂಬ ಸಂದೇಶರವಾನೆ ಮಾಡಿದ್ದರು. ಇದು ಕಟೀಲ್‌ಗೆ ಎದುರಾಗಿರುವ 2ನೇಯ ಸವಾಲು.

2009ರ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ 499,385 ಮತಗಳನ್ನು ಪಡೆದು ಜಯಗಳಿಸಿದರು. ಎದುರಾಳಿಯಾಗಿದ್ದ ಕಾಂಗ್ರೆಸ್‌ನ ಜನಾರ್ದನ ಪೂಜಾರಿ 458,965 ಮತಗಳನ್ನು ಪಡೆದರು. 2014ರ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ 642,739 ಮತಗಳನ್ನು ಪಡೆದು ಜಯಗಳಿಸಿದರು. ಎದುರಾಳಿಯಾಗಿದ್ದ ಕಾಂಗ್ರೆಸ್‌ನ ಜನಾರ್ದನ ಪೂಜಾರಿ 499,030 ಮತಗಳನ್ನು ಪಡೆದು ಸೋತರು.

2019ರಲ್ಲಿಯೇ ಕಟೀಲ್‌ಗೆ ಟಿಕೆಟ್ ಸಿಗುವುದಿಲ್ಲ ಎಂಬ ಸುದ್ದಿಗಳು ಬಲವಾಗಿ ಕೇಳಿ ಬಂದಿತ್ತು. ಆದರೆ ಅವರು ಟಿಕೆಟ್ ಪಡೆದರು, 774,285 ಮತಗಳನ್ನು ಪಡೆದು ಜಯಗಳಿಸುವ ಮೂಲಕ ಹ್ಯಾಟ್ರಿಕ ಬಾರಿಸಿದರು. ಕಾಂಗ್ರಸ್ ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಮಿಥುನ್ ರೈ ಕಣಕ್ಕಿಳಿಸಿತು. ಅವರು 499,664 ಮತಗಳನ್ನು ಪಡೆದು ಸೋಲು ಕಂಡರು.

ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಸಹ ಅಭ್ಯರ್ಥಿ ಬದಲಾವಣೆ ಮಾಡುವ ನಿರೀಕ್ಷೆ ಇದೆ. ಬಿಜೆಪಿಯಲ್ಲಿ ಕಟೀಲ್ ಬದಲು ಹಿಂದೂಗಳ ಪರ ಕೆಲಸ ಮಾಡುತ್ತಿರುವ ಬ್ರಿಜೇಶ್ ಚೌಟ ಹಾಗೂ ಪತ್ರಕರ್ತ ಮಹೇಶ್ ವಿಕ್ರಮ್ ಹೆಗ್ಡೆಗೆ ಟಿಕೆಟ್ ನೀಡಬೇಕು ಎಂಬ ಮಾತುಗಳಿವೆ. ಕಾಂಗ್ರೆಸ್ ಸಹ ಕಟೀಲ್ ಕಣಕ್ಕಿಳಿಯಲಿಲ್ಲ ಎಂದರೆ ಅಭ್ಯರ್ಥಿ ಬದಲಾವಣೆ ಮಾಡುವ ತಂತ್ರವನ್ನು ರೂಪಿಸಿದೆ.

ಪ್ರವೀಣ್ ನೆಟ್ಟಾರ ಹತ್ಯೆ ಪ್ರಕರಣದ ಬಳಿಕ ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲ್ ವಿರುದ್ಧ ಹಿಂದೂ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದೂ, ಕಟೀಲ್ ರಾಜ್ಯಾಧ್ಯಕ್ಷರಾಗಿದ್ದರೂ ಈ ಹತ್ಯೆ ನಡೆದಿತ್ತು. 2023ರ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ತಪ್ಪಿದಾಗಲೂ ಕಟೀಲ್ ವಿರುದ್ಧ ಅಸಮಾಧಾನ ಹೊರಬಂದಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+