ಲೋಕಸಭಾ ಚುನಾವಣೆ: 5 ಕ್ಲಸ್ಟರ್ ರಚಿಸಿದ ಕಾಂಗ್ರೆಸ್‌ನಿಂದ ಗೆಲುವಿಗೆ ಭರ್ಜರಿ ಸಿದ್ಧತೆ, ವಿವರಣೆ
ಬೆಂಗಳೂರು, ಜನವರಿ 12: ಕರ್ನಾಟಕ ವಿಧಾನಸಭೆಯ ಗೆಲುವಿನ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಗೆದ್ದು ಬರಲು ನಾನಾ ತಂತ್ರಗಾರಿಕೆ ಹೆಣೆಯುತ್ತಿದೆ. ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟದವರಿಗೆ ಚುನಾವಣಾ ಚಟುವಟಿಕೆಗಳು ಕಾಂಗ್ರೆಸ್‌ನಲ್ಲಿ ಗರಿಗೆದರಿವೆ.
ಕಾಂಗ್ರೆಸ್ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಒಟ್ಟು 5 ಕ್ಲಸ್ಟರ್ ಮಾಡಿಕೊಂಡು ಮುನ್ನುಗ್ಗಲು ಸಜ್ಜಾಗಿದೆ. ಕರ್ನಾಟಕವು ಮೊದಲ ಕ್ಲಸ್ಟರ್‌ನಲ್ಲಿ ಬರಲಿದೆ. ಅದರೊಂದಿಗೆ ತೆಲಂಗಾಣ ಮತ್ತು ಕೇರಳ ರಾಜ್ಯಗಳು ಇದ್ದು, ಈ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಚುನಾವಣಾ ಕಸರತ್ತು ನಡೆಸಿದೆ. ಅಗತ್ಯ ಸೂಚನೆ ನೀಡಿದೆ.

ಮೊದಲ ಕ್ಲಸ್ಟರ್‌ನಲ್ಲಿರುವ ಎಲ್ಲ ರಾಜ್ಯಗಳ ನಾಯಕರು ಸಭೆ ಆಗಮಿಸಿದ್ದರು. ಸಭೆಯಲ್ಲಿ ಕೆಲವು ನಿರ್ಧಿಷ್ಟ ಸೂಚನೆಗಳನ್ನು ವರಿಷ್ಠರು ನೀಡಿದ್ದಾರೆ ಎಂದು ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಶುಕ್ರವಾರ ಮಾಹಿತಿ ನೀಡಿದ್ದಾರೆ.
ಯಾವ ರೀತಿಯಾಗಿ ಬಿಎಲ್ಎಗಳನ್ನು, ಪಂಚಾಯಿತಿ ಹಂತಗಳಲ್ಲಿ ಸಮಿತಿಗಳ ರಚನೆ ಮಾಡುವುದು, ಪ್ರಚಾರ ಯಾವ ರೀತಿ ಕೈಗೊಳ್ಳಬೇಕು ಹಾಗೂ ಅಭ್ಯರ್ಥಿಗಳ ಆಯ್ಕೆ ನಂತರ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ಬಹಳ ವ್ಯವಸ್ಥಿತ ನಿರ್ದೇಶನ ದೊರೆತಿದೆ.

ವೀಕ್ಷಕರ ಬದಲಾಗಿ, ಸಮನ್ವಯಕಾರರ ನೇಮಕ
ಈ ಹಿಂದೆ ಪ್ರತಿ ಕ್ಷೇತ್ರಕ್ಕೆ ಒಬ್ಬರನ್ನು ವೀಕ್ಷಕರನ್ನು ನೇಮಿಸಲಾಗುತ್ತಿತ್ತು. ಈ ಬಾರಿ, ಅದರ ಬದಲಿಗೆ ಸಮನ್ವಯಕಾರರನ್ನು (Coordinator) ನೇಮಿಸಲಾಗಿದೆ. ವಾರ್ ರೂಮ್ ಎನ್ನುವುದನ್ನು ಕನೆಕ್ಟ್ ಸೆಂಟರ್ ಎಂದು ಬದಲಿಸಲಾಗಿದೆ. ಇದೆಲ್ಲವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಷ್ಟ್ರೀಯ ಕೋರ್ಡಿನೇಷನ್ ಚೇರ್ಮನ್ ಶಶಿಕಾಂತ್ ಸೆಂಥಿಲ್ ಅವರು ವಿವರಿದ್ದಾರೆ.
ಇನ್ನೂ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಕೆರಳ ಸೇರಿದಂತೆ ದಕ್ಷಿಣ ಭಾರತದ ಜಿಲ್ಲೆಗಳಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಸೂಚನೆ ನೀಡಿದರು. ಕನೆಕ್ಟ್ ಸೆಂಟರ್ ಮೂಲಕ ನೇರವಾಗಿ ಕೋರ್ಡಿನೇಟರ್ ಜೊತೆ ಸಂಪರ್ಕದಲ್ಲಿದ್ದು ಕೆಲಸ ಮಾಡಬೇಕು ಎಂಬುದನ್ನು ತಿಳಿಸಿದ್ದಾರೆ ಎಂದರು.
ರಾಜ್ಯ ಸಚಿವರಿಗೆ ಜವಾಬ್ದಾರಿ ಹಂಚಿಕೆ
ಶಶಿಕಾಂತ್ ಸೆಂಥಿಲ್ ಅವರು ರಾಜ್ಯದ ಎಲ್ಲಾ ಸಚಿವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಚುನಾವಣೆಯಲ್ಲಿ ರಾಜ್ಯದ ಮೇಲೆ ಹೈಕಮಾಂಡ್ ಇಟ್ಟಿರುವ ನಿರೀಕ್ಷೆ ಹಾಗೂ ಸಚಿವರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದ್ದಾರೆ.
ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮತದಾರರ ಹತ್ತಿರ ಹೋಗಲು ಆಕ್ಷೇಪಣೆ ಇಲ್ಲ. ಯಾರು ಬೇಕಾದರೂ ಮತ ಕೇಳಬಹುದು. ಭಾರತೀಯ ಜನತಾ ಪಾರ್ಟಿಯವರು ಚುನಾವಣೆಯನ್ನು ಎದುರಿಸುವ ವಿಧಾನ ಹಾಗೂ ಚುನಾವಣಾ ವಿಧಾನ ಬೇರೆ ರೀತಿ ಆಗಿರುತ್ತದೆ. ಆದರೆ, ಅಂತಿಮವಾಗಿ ಮತದಾರರು ಮಾಡುವ ತೀರ್ಮಾನವನ್ನು ಯಾರು ಊಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಸುರ್ಜೇವಾಲಾ ಮತ್ತೆ ರಾಜ್ಯಕ್ಕೆ ಭೇಟಿ
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ಚುನಾವಣಾ ತಂತ್ರಗಾರಿಕೆ ಬಗ್ಗೆ ಮಾತ್ರ ಚರ್ಚೆ ನಡೆದಿದೆ. ಈ ವೇಳೆ, ಆದಷ್ಟು ಬೇಗ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮ ಮಾಡಿ ಪಟ್ಟಿ ಬಿಡುಗಡೆ ಮಾಡುವಂತೆ ತಿಳಿಸಿದ್ದೇವೆ.
ಇದೇ ವಿಚಾರವಾಗಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪ್ರದೇಶ ಚುನಾವಣಾ ಸಮಿತಿ ಸಭೆ ಕರೆದು ಇಲ್ಲಿ ತೀರ್ಮಾನ ಮಾಡಿ, ಅದನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ನೀಡುತ್ತೇವೆ ಎಂದಿದ್ದಾರೆ. ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಆಗಮಿಸಿ ಮತ್ತೆ ಸಭೆ ನಡೆಸಬಹುದು ಎಂದು ಪರಮೇಶ್ವರ ತಿಳಿಸಿದರು.
ಹಾವೇರಿ ಕೇಸ್‌ನಲ್ಲಿ ನಿರ್ಲಕ್ಷ್ಯದ ಪ್ರಶ್ನೆ ಇಲ್ಲ
ಹಾವೇರಿಯಲ್ಲಿನ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ. ಯಾವುದೇ ರೀತಿಯ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ರಕ್ಷಣೆ ಮಾಡುವುದಿಲ್ಲ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಮುದ್ದಹನುಮೇಗೌಡ ಪಕ್ಷ ಸೇರ್ಪಡೆಗೆ ಒಮ್ಮತ
ಮಾಜಿ ಸಂಸದ ಮುದ್ದ ಹನುಮೇಗೌಡ ಅವರು ನನ್ನನ್ನು ಸಹ ತುಮಕೂರಿನ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಅವರು ಪಕ್ಷಕ್ಕೆ ಸೇರ್ಪಡೆಯಾಗಲು ಯಾವುದೇ ಅಭ್ಯಂತರವಿಲ್ಲ. ಈ ಬಗ್ಗೆ ಒಮ್ಮತದಿಂದ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದಿದ್ದು, ಜಿಲ್ಲೆಯ ನಾಯಕರು ತೀರ್ಮಾನ ಮಾಡುವಂತೆ ಹೇಳಿದ್ದಾರೆ. ಇನ್ನೂ ಚನಾವಣೆಗೆ ಟಿಕೆಟ್ ನೀಡಲು ಪಕ್ಷದಲ್ಲಿ ಕೆಲವು ಮಾನದಂಡಗಳಿವೆ ಎಂದು ಅವರು ವಿವರಿಸಿದರು.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ











Click it and Unblock the Notifications