ಲೋಕಸಭೆ ಚುನಾವಣೆ: ಪ್ರಿಂಟಿಂಗ್ ಪ್ರೆಸ್ ಮಾಲೀಕರಿಗೆ ಖಡಕ್ ಸೂಚನೆಗಳು

ಬೆಂಗಳೂರು, ಮಾರ್ಚ್ 05: ಲೋಕಸಭೆ ಚುನಾವಣೆ 2024ಕ್ಕೆ ತಯಾರಿ ಆರಂಭವಾಗಿದೆ. ಚುನಾವಣಾ ವೇಳಾಪಟ್ಟಿ ಘೋಷಣೆಯಾದ ತಕ್ಷಣದ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗ ಪ್ರಚಾರದ ಕಾವು ಸಹ ಏರಲಿದ್ದು, ಫ್ಲೆಕ್ಸ್, ಬ್ಯಾನರ್‌ಗಳ ಹಾವಳಿಯೂ ಆರಂಭವಾಗಲಿದೆ.

ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಯಾಗಲಿದ್ದು, ಪೂರ್ವಾನುಮತಿ ಪಡೆಯದೇ ಫ್ಲೆಕ್ಸ್‌, ಕರಪತ್ರ, ಬ್ಯಾನರ್ ಮುದ್ರಿಸುವಂತಿಲ್ಲ. ಕಡ್ಡಾಯವಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕು ಎಂದು ಖಡಕ್ ಸೂಚನೆ ನೀಡಲಾಗಿದೆ.

Lok Sabha Election 2024 Direction For Printing Press

ಜಿಲ್ಲೆಗಳ ಚುನಾವಣಾಧಿಕಾರಿಗಳು ಪ್ರಿಂಟಿಂಗ್ ಪ್ರೆಸ್ ಮಾಲೀಕರೊಂದಿಗೆ ಸಭೆಗಳನ್ನು ನಡೆಸಿ ಚುನಾವಣಾ ಆಯೋಗದ ಸೂಚನೆಗಳನ್ನು ಅವರಿಗೆ ವಿವರಿಸುತ್ತಿದ್ದಾರೆ. ನಿಯಮ ಪಾಲನೆ ಮಾಡದಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಿದ್ದಾರೆ.

ಖಡಕ್ ಸೂಚನೆಗಳು: ಯಾವುದೇ ರೀತಿಯ ರಾಜಕೀಯ ಮತಪ್ರಚಾರ ಮತ್ತು ಕೋಮುಗಲಭೆ ಸೃಷ್ಟಿಸುವಂತಹ ಬ್ಯಾನರ್, ಹೋರ್ಡಿಂಗ್, ಫ್ಲೆಕ್ಸ್‌ ಮತ್ತು ಕರಪತ್ರಗಳನ್ನು ಮುದ್ರಿಸುವಂತಿಲ್ಲ. ಮುದ್ರಣಕ್ಕೆ ಮೂರು ದಿನಗಳ ಮುಂಚಿತವಾಗಿ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕಿದೆ.

ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 127ಎ ಅನ್ವಯ ಪ್ರಿಂಟಿಂಗ್ ಪ್ರೆಸ್‌ನವರು ಚುನಾವಣಾ ಕರಪತ್ರಗಳನ್ನು ಮುದ್ರಣ ಮಾಡುವ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಹಾಗೂ ಚುನಾವಣಾ ಕರಪತ್ರದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು ಹಾಗೂ ಮುದ್ರಣ ಮಾಡಿದ ಪ್ರಮಾಣದ ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕು.

ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್‌ ಮತ್ತು ಬ್ಯಾನರ್‌ಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ. ಯಾವುದೇ ಜಾತಿ, ಧರ್ಮದ ಜನರ ಭಾವನೆಗೆ ಧಕ್ಕೆ ತರುವ ವಿಷಯವನ್ನು ಮುದ್ರಿಸಬಾರದು. ಮಾಲೀಕರು ಯಾವುದೇ ನಿಯಮ ಉಲ್ಲಂಘಿಸಿದರೆ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

1951ರ ಕಾಯಿದೆ ಸೆಕ್ಷನ್ 127ಎ ರನ್ವಯ ಚುನಾವಣಾ ಪಾಂಪ್ಲೆಟ್‍ಗಳು ಮತ್ತು ಪೋಸ್ಟರ್ಸ್‌ ಮುದ್ರಕರ ಮತ್ತು ಪ್ರಕಾಶಕರ ಹೆಸರು ಮತ್ತು ವಿಳಾಸ ಒಳಗೊಂಡಿರಬೇಕು. ಈ ನಿಯಮ ಪಾಲನೆ ಮಾಡದಿದ್ದಲ್ಲಿ 6 ತಿಂಗಳು ಜೈಲು ಮತ್ತು 2 ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ.

ಪ್ರಿಂಟಿಂಗ್ ಪ್ರೆಸ್ ಮಾಲೀಕರು ಬೇರೆ ಸ್ಥಳಗಳಿಂದ ಮುದ್ರಿಸಿ, ನಮ್ಮ ಜಿಲ್ಲೆಯಲ್ಲಿ ಹಂಚುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಚುನಾವಣಾಧಿಕಾರಿಗಳ ಗಮನ ಸೆಳೆದರು. ಇದಕ್ಕೆ ಕಡಿವಾಣ ಹಾಕಲು ಈಗಾಗಲೇ ಎಸ್‍ಎಸ್‍ಟಿ ಮತ್ತು ಎಫ್‍ಎಸ್‍ಟಿ ತಂಡಗಳು ಕಾರ್ಯಪ್ರವೃತ್ತವಾಗಿವೆ. ಅಂತಹ ಘಟನೆಗಳು ಕಂಡುಬಂದಲ್ಲಿ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ಮತ್ತು ರಾಜಕೀಯ ಪಕ್ಷಗಳು ಚುನಾವಣಾ ವೆಚ್ಚದ ಸರಿಯಾದ ನಿರ್ವಹಣೆ ಮಾಡಬೇಕಿದೆ. ಫ್ಲೆಕ್ಸ್, ಬ್ಯಾನರ್ ಮುದ್ರಣಗಳು ಸಹ ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ಸೇರ್ಪಡೆಯಾಗಲಿದೆ. ಚುನಾವಣಾ ವೆಚ್ಚ ವೀಕ್ಷಕರು ಎಲ್ಲಾ ಖರ್ಚುಗಳ ಮೇಲೆ ನಿಗಾ ವಹಿಸಲಿದ್ದಾರೆ.

ಅಭ್ಯರ್ಥಿಗಳು ಯಾವುದಾದರೂ ಚುನಾವಣಾ ಖರ್ಚಿಗೆ ಸಂಬಂಧಿಸಿದಂತೆ 10 ಸಾವಿರ ರೂ.ಗಳಿಂತ ಹೆಚ್ಚು ಹಣ ಪಾವತಿ ಮಾಡಬೇಕಾದ ಸಂದರ್ಭದಲ್ಲಿ ನಗದು ರೂಪದಲ್ಲಿ ಹಣ ಯಾವುದೇ ಕಾರಣಕ್ಕೂ ಸಂದಾಯ ಮಾಡುವಂತಿಲ್ಲ. ಕಡ್ಡಾಯವಾಗಿ ಚೆಕ್ ರೂಪದಲ್ಲಿಯೇ ಪಾವತಿಸಬೇಕಿದೆ.

ಚುನಾವಣಾ ಖರ್ಚಿಗೆ ಸಂಬಂಧಿಸಿದಂತೆ ಪ್ರತ್ಯೇಕವಾದ ಬ್ಯಾಂಕ್ ಖಾತೆಯನ್ನು ನಿರ್ವಹಣೆ ಮಾಡಬೇಕು. ಅದರ ಮೂಲಕವೇ ತಮ್ಮ ಚುನಾವಣಾ ಸಂಬಂಧಿತ ಎಲ್ಲ ವ್ಯವಹಾರಗಳನ್ನು ನಡೆಸಬೇಕು ಮತ್ತು ಅದರ ವಿವರವನ್ನು ಕಡ್ಡಾಯವಾಗಿ ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ ನೀಡಬೇಕಿದೆ.

ಅಭ್ಯರ್ಥಿ ತಾವು ನಡೆಸುವ ಪ್ರತಿಯೊಂದು ಖರ್ಚು, ವೆಚ್ಚಕ್ಕೂ ಪ್ರತ್ಯೇಕ ವಹಿ ನಿರ್ವಹಣೆ ಮಾಡಿ ಅದರ ವಿವರಗಳನ್ನು ನಿಗದಿಪಡಿಸಿದ ಅವಧಿಯೊಳಗೆ ಚುನಾವಣಾ ವೆಚ್ಚ ಕೋಶಕ್ಕೆ ಸಲ್ಲಿಸುತ್ತಿರಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+