ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ಎಷ್ಟು ಸ್ಥಾನ ಸಿಗಲಿದೆ?

ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತದ ಲೋಕಸಭೆ ಚುನಾವಣೆಗೆ ಈಗ ಡೇಟ್ ಫೈನಲ್ ಆಗಿದೆ. ಹೀಗಾಗಿ ಅಖಾಡ ರಂಗೇರಿದ್ದು, ಬಿಜೆಪಿ & ಕಾಂಗ್ರೆಸ್ ನಡುವೆ ಹಣಾಹಣಿಗೆ ವೇದಿಕೆ ಸಜ್ಜಾಗಿದೆ. ಅದರಲ್ಲೂ ಕರ್ನಾಟಕ ರಣರಂಗದಲ್ಲಿ ಗೆಲುವು ಯಾವ ಪಕ್ಷಕ್ಕೆ? ಎಂಬ ಪ್ರಶ್ನೆ ಕೂಡ ಕಾಡುತ್ತಿರುವ ಸಮಯದಲ್ಲೇ, ಚುನಾವಣಾ ಪೂರ್ವ ಸಮೀಕ್ಷೆಯೊಂದು ಈಗ ತಲ್ಲಣ ಸೃಷ್ಟಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 2024ರ ಲೋಕಸಭೆ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ಪಕ್ಷಕ್ಕೆ ದೊಡ್ಡ ಸವಾಲು ಎದುರಾಗುತ್ತಿವೆ. ಹೀಗಿದ್ದರೂ ಸಲೀಸಾಗಿ ಮತ್ತೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿ ರಣತಂತ್ರ ಹೆಣೆಯುತ್ತಿದ್ದು, ದಕ್ಷಿಣ ಭಾರತದಲ್ಲಿನ ಪ್ರಮುಖ ರಾಜ್ಯಗಳ ಪೈಕಿ ಒಂದಾದ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಅನಿವಾರ್ಯ ಆಗಿದೆ. ಆದರೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭ ಮಾಡಿದ್ದ ಬಿಜೆಪಿ ಹೈಕಮಾಂಡ್‌ಗೆ ದೊಡ್ಡ ಗೆಲುವೇ ಸಿಗುವ ನಿರೀಕ್ಷೆ ಇದೆ. ಈಗ ಚುನಾವಣಾ ಪೂರ್ವ ಸಮೀಕ್ಷೆಗಳು ಕೂಡ ಅದನ್ನೇ ಹೇಳಿವೆ.

Lok Sabha Election 2024 Discover How Much Seats Can BJP Win In Karnataka

ಬಿಜೆಪಿ ಎಷ್ಟು ಸ್ಥಾನ ಸಿಗುತ್ತೆ?

ಹೌದು, ಇದೀಗ ಹೊರಬಿದ್ದಿರುವ ಟಿವಿ9 ಭಾರತ್ ವರ್ಷ್ ಸಮೀಕ್ಷೆಯ ಪ್ರಕಾರ ಬಿಜೆಪಿ ಪಕ್ಷ ಕರ್ನಾಟಕದ ಚುನಾವಣೆ ಅಖಾಡದಲ್ಲಿ ಕಾಂಗ್ರೆಸ್ ವಿರುದ್ಧ ಗೆಲ್ಲುವುದು ಪಕ್ಕಾ ಆಗಿದೆ. ಈ ಬಗ್ಗೆ ಇದೀಗ ಹೊರಬಿದ್ದಿರುವ ಸಮೀಕ್ಷೆ ಹೇಳುವಂತೆ, ಕರ್ನಾಟಕದಲ್ಲಿ ಬಿಜೆಪಿ 2019 ರಲ್ಲಿ ಸಾಧಿಸಿದ್ದ ಪ್ರಚಂಡ ಗೆಲುವನ್ನು ಮತ್ತೊಮ್ಮೆ ಕಾಣುವುದು ಬಹುತೇಕ ಪಕ್ಕಾ ಆಗಿದೆ. ಅರೆ ಹಾಗಾದರೆ ಬಿಜೆಪಿಗೆ ಎಷ್ಟು ಸ್ಥಾನ ಸಿಗಬಹುದು? ಹಾಗೇ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ? ಈ ಸಮೀಕ್ಷೆ ಹೇಳಿದ್ದು ಏನು? ಮುಂದೆ ಓದಿ.

ಜೆಡಿಎಸ್ ಮೈತ್ರಿಯಿಂದ ಜಾಕ್‌ಪಾಟ್?

ಈಗ ಹೊರಬಿದ್ದಿರುವ ಸಮೀಕ್ಷೆ ಪ್ರಕಾರ ಬಿಜೆಪಿ & ಜೆಡಿಎಸ್ ಮೈತ್ರಿ ಮೂಲಕವಾಗಿ ಒಟ್ಟು 23 ಸ್ಥಾನದಲ್ಲಿ ಎನ್‌ಡಿಎ ಒಕ್ಕೂಟ ಗೆಲುವು ಕಾಣಲಿದೆ ಎನ್ನಲಾಗಿದೆ. ಹಾಗೇ ಕರ್ನಾಟಕದ ವಿಧಾನಸಭೆ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಕೇವಲ 5 ಲೋಕಸಭಾ ಸ್ಥಾನ ಗೆಲ್ಲಬಹುದು ಎನ್ನುತ್ತಿವೆ ಸಮೀಕ್ಷೆಗಳು. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಚುನಾವಣೆಗೆ ಆರಂಭದಲ್ಲೆ ಹೊಸ ಹೊಸ ಸವಾಲು ಎದುರಾಗುತ್ತಿವೆ. ಒಟ್ಟು 28 ಲೋಕಸಭಾ ಕ್ಷೇತ್ರಗಳು ಕರ್ನಾಟಕದ ಅಖಾಡದಲ್ಲಿ ಇವೆ.

Lok Sabha Election 2024 Discover How Much Seats Can BJP Win In Karnataka

ಕರ್ನಾಟಕದಲ್ಲಿ 2 ಹಂತದ ಚುನಾವಣೆ

2024ರ ಲೋಕಸಭೆ ಚುನಾವಣೆಗೆ ಅಖಾಡ ಸಿದ್ಧವಾಗಿದೆ ಅಭ್ಯರ್ಥಿಗಳೂ ಸಿದ್ಧವಾಗಿ ಕೂತಿದ್ದಾರೆ. ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿ, ರಣಕಹಳೆ ಮೊಗಳಗಿಸಿದೆ. ಇನ್ನೇನು ಕೆಲ ದಿನಗಳಲ್ಲಿ ಭಾರತೀಯರು ಹೊಸ ಸರ್ಕಾರ ಆಯ್ಕೆ ಮಾಡಲು ಮತದಾನ ಮಾಡಲಿದ್ದು, ಹಾಗೇ ಇದಕ್ಕೆ ಬೇಕಾದ ತಯಾರಿಗಳು ಕೂಡ ಸಾಗಿವೆ. ಹಾಗೇ ಕರ್ನಾಟಕದಲ್ಲಿ ಕೂಡ ಎಲ್ಲಾ ರೀತಿ ತಯಾರಿ ನಡೆದಿದೆ. ಕರ್ನಾಟಕದಲ್ಲಿ ಒಟ್ಟು 2 ಹಂತದಲ್ಲಿ ಚುನಾವಣೆ ಇದ್ದು, ಏಪ್ರಿಲ್ 26 ರಂದು & ಮೇ 7ರಂದು ಕರ್ನಾಟಕದಲ್ಲಿ ಮತದಾನ ನಡೆಯಲಿದೆ. ಚುನಾವಣೆ ಫಲಿತಾಂಶ ಜೂನ್ 4ಕ್ಕೆ ಹೊರಬೀಳಲಿದೆ. ಈ ಮೂಲಕ ಇಡೀ ಪ್ರಪಂಚದ ಗಮನ ಸೆಳೆದಿರುವ ಭಾರತದ ಲೋಕಸಭಾ ಚುನಾವಣೆ ಅಂತಿಮ ಹಂತಕ್ಕೆ ತಲುಪುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+