ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ. ಸುಧಾಕರ್ ರಣತಂತ್ರ ಯಶಸ್ವಿ
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ಡಾ. ಕೆ. ಸುಧಾಕರ್ ಅವರು ಇದೀಗ ಯಶಸ್ಸು ಪಡೆಯುತ್ತಿದ್ದಾರೆ. ಅದರಲ್ಲೂ ಸ್ಥಳೀಯ ಬಿಜೆಪಿ & ಜೆಡಿಎಸ್ ಮುಖಂಡರು ಬೆಂಬಲ ನೀಡುತ್ತಾ ಇರುವುದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಅವರಿಗೆ ಸಾಕಷ್ಟು ಬಲ ಸಿಕ್ಕಂತಾಗಿದೆ. ಅಲ್ಲದೆ ಗೆಲ್ಲುವ ರೇಸ್‌ನಲ್ಲಿ ಡಾ. ಕೆ. ಸುಧಾಕರ್ ಅವರು ಮತ್ತಷ್ಟು ಮುನ್ನುಗ್ಗುತ್ತಿದ್ದಾರೆ.
ಈ ಬಾರಿ ಬಿಜೆಪಿ & ಜೆಡಿಎಸ್ ಮೈತ್ರಿ ಗಟ್ಟಿಯಾಗಿದ್ದು, ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರನ್ನು ಸಂಸದರಾಗಿಸಲು ಮುಖಂಡರು ಹಾಗೂ ಕಾರ್ಯಕರ್ತರು ಒಕ್ಕೊರಲ ವಿಶ್ವಾಸವನ್ನ ತೋರಿಸಿದ್ದಾರೆ. ಟಿಕೆಟ್ ಘೋಷಣೆ ಆದ ನಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ನಡೆಸುತ್ತಿರುವ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು, ಮಿತ್ರ ಪಕ್ಷಗಳ ನಡುವೆ ಸಮನ್ವಯತೆ ಸಾಧಿಸುವ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದಿದ್ದಾರೆ. ಡಾ. ಸುಧಾಕರ್ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಹುತೇಕ ಎಲ್ಲ ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಮನೆಗಳಿಗೆ ಖುದ್ದು ಭೇಟಿ ನೀಡಿ ಸಹಕಾರ ಕೋರಿದ್ದಾರೆ. ಹೀಗೆ ಸ್ಥಳೀಯ ಮುಖಂಡರು ಡಾ. ಕೆ. ಸುಧಾಕರ್ ಅವರ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಮಾಜಿ ಸಿಎಂ ಎಚ್‌ಡಿಕೆ ಜೊತೆ ಚರ್ಚೆ
ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನೂ ಭೇಟಿ ಮಾಡಿ, ಸಮಾಲೋಚನೆ ನಡೆಸಿದ್ದಾರೆ ಡಾ. ಸುಧಾಕರ್ ಅವರು. ಜೆಡಿಎಸ್ ಪ್ರಭಾವ ಹೆಚ್ಚಿರುವ ದೇವನಹಳ್ಳಿ ಸೇರಿ ದೊಡ್ಡಬಳ್ಳಾಪುರ ಮತ್ತು ನೆಲಮಂಗಲದಲ್ಲಿ ಸಮನ್ವಯ ಸಭೆ ನಡೆಯಲಿದ್ದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ. ಈಗಾಗಲೇ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಡಾ. ಕೆ. ಸುಧಾಕರ್ ಅವರನ್ನು ಅಭ್ಯರ್ಥಿಯಾಗಿಸಲು ಸಂಪೂರ್ಣ ಸಹಕಾರ ನೀಡಿದ್ದು, ಸಹಯೋಗದಲ್ಲಿ ಕಾರ್ಯನಿರ್ವಹಿಸುವ ಸಂದೇಶ ನೀಡಿದ್ದಾರೆ.
ಅಭಿವೃದ್ಧಿ ಮಾಡಲು ಸದಾ ಸಿದ್ಧ
ದೊಡ್ಡಬಳ್ಳಾಪುರದಲ್ಲಿ ಇತ್ತೀಚೆಗೆ ಸಭೆ ನಡೆಸಿದ ಡಾ. ಕೆ. ಸುಧಾಕರ್ ಅಭಿವೃದ್ಧಿಯ ರಾಜಕಾರಣ, ದೇಶದ ಭದ್ರತೆ ಹಾಗೂ ಯುವಜನರ ಬದುಕು ರೂಪಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ಗುರಿಯೊಂದಿಗೆ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ನನಗೆ ಮತ್ತು ದೊಡ್ಡಬಳ್ಳಾಪುರಕ್ಕೆ ಅವಿನಾಭಾವ ಸಂಬಂಧವಿರುವುದರಿಂದ ಇದು ನನಗೆ ಹೊಸ ಕ್ಷೇತ್ರವಲ್ಲ. ಈ ಕ್ಷೇತ್ರದಲ್ಲಿ ಅನೇಕ ಹಿರಿಯ ನಾಯಕರಿದ್ದಾರೆ. ಅವರೆಲ್ಲರ ಸಹಕಾರ ಪಡೆದಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಪನಗರಗಳ ನಿರ್ಮಾಣಕ್ಕೆ ಒತ್ತು
ಇದರ ಜೊತೆ ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲವನ್ನು ಬೆಂಗಳೂರಿಗೆ ಉಪನಗರಗಳಾಗಿ ಬೆಳೆಸುವುದು ಅವರ ಗುರಿ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಗ್ಯಾರಂಟಿ ಯೋಜನೆ ಅರೆಬರೆಯಾಗಿ ಜಾರಿ ಆಗಿರುವುದರಿಂದ ಅನುದಾನ ಇಲ್ಲದೆ ಅಭಿವೃದ್ಧಿ ಶೂನ್ಯವಾಗಿದೆ. ಆದ್ದರಿಂದ ಈ ಬಾರಿಯೂ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸಿ ಬಯಲುಸೀಮೆ ಭಾಗದಲ್ಲಿ ಬಿಜೆಪಿ & ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಅಭಿವೃದ್ಧಿಗೆ ಮರು ಚಾಲನೆ ನೀಡಬೇಕೆಂದು ಕೂಡ ಡಾ. ಕೆ. ಸುಧಾಕರ್ ಅವರು ಪ್ರತಿಪಾದಿಸಿದ್ದರು.
ಇದೀಗ ಡಾ. ಕೆ. ಸುಧಾಕರ್ ಅವರಿಗೆ ಸ್ಥಳೀಯ ಮುಖಂಡರು ಭಾರಿ ಬೆಂಬಲವನ್ನ ನೀಡುತ್ತಿದ್ದು, ಚುನಾವಣಾ ಪ್ರಚಾರ ಕೂಡ ಅದ್ಧೂರಿಯಾಗಿಯೇ ಸಾಗಿದೆ. ಹಾಗೇ ಅತಿಹೆಚ್ಚು ಲೀಡ್ ಮೂಲಕ ಗೆಲ್ಲುವ ಗುರಿ ಹಾಕಿಕೊಂಡಿದ್ದಾರೆ ಮಾಜಿ ಸಚಿವ ಡಾ. ಕೆ. ಸುಧಾಕರ್ ಅವರು. ಹಾಗೇ ಡಾ. ಕೆ. ಸುಧಾಕರ್ ಅವರ ಪರವಾಗಿ ಅಲೆ ಇರುವುದು ಭಾರಿ ಕುತೂಹಲ ಕೆರಳಿಸಿದೆ.












Click it and Unblock the Notifications