ಡಾ. ಕೆ. ಸುಧಾಕರ್ ಅವರಿಗೆ ಶಾಸಕ ಎಸ್.ಆರ್. ವಿಶ್ವನಾಥ್ ಬೆಂಬಲ!
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲೀಗ ಭರ್ಜರಿ ಅಂತರದಲ್ಲಿ ಗೆದ್ದು ಬೀಗಲು ಸಜ್ಜಾಗಿರುವ ಡಾ. ಕೆ. ಸುಧಾಕರ್ ಅವರು, ಇದೀಗ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಅನಗತ್ಯ ಗೊಂದಲ ಎಬ್ಬಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆದರೆ ಇದೀಗ ಡಾ. ಕೆ. ಸುಧಾಕರ್ ಅವರು ಮತ್ತು ಶಾಸಕ ಎಸ್.ಆರ್. ವಿಶ್ವನಾಥ್ ಕೈಜೋಡಿಸಿ ಕಾಂಗ್ರೆಸ್ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.
ಕರ್ನಾಟಕ ಸರ್ಕಾರದ ಮಾಜಿ ಸಚಿವರೂ ಆಗಿರುವ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು, ಇಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಜೊತೆಗೆ ಉಪಾಹಾರ ಸೇವಿಸಿದರು. ಈ ಸಮಯದಲ್ಲಿ ಇಬ್ಬರೂ ಹಲವು ವಿಷಯ ಚರ್ಚೆ ಮಾಡಿದ್ದಾರೆ. ಹಾಗೇ ಡಾ. ಕೆ. ಸುಧಾಕರ್ ಅವರಿಗೆ, 2024ರ ಲೋಕಸಭೆ ಚುನಾವಣೆಯಲ್ಲಿ ಅತಿಹೆಚ್ಚು ಮತ ಗಳಿಸಿಕೊಡಲು ಇದೇ ವೇಳೆ, ಎಸ್.ಆರ್. ವಿಶ್ವನಾಥ್ ಪಣತೊಟ್ಟಿದ್ದಾರೆ. ಈ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರ ಗೆಲುವು ಬಹುತೇಕ ಪಕ್ಕಾ ಆಗುತ್ತಿದೆ.

ಸ್ಥಳೀಯ ಮಟ್ಟದಲ್ಲಿ ಭರ್ಜರಿ ಕ್ಯಾಂಪೇನ್
ಈಗಾಗಲೇ ಡಾ. ಕೆ. ಸುಧಾಕರ್ ಅವರು ಸ್ಥಳೀಯ ಮುಖಂಡರನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಜೊತೆ ಉತ್ತಮ ಸಂವಹನ ಹೊಂದಿದ್ದಾರೆ. ಈ ಮೂಲಕ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಲು ಡಾ. ಕೆ. ಸುಧಾಕರ್ ಅವರು ಮುನ್ನುಗ್ಗುತ್ತಿದ್ದಾರೆ. ಈ ಸಮಯದಲ್ಲಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಜೊತೆ ಕೂಡ ಮಾತುಕತೆ ನಡೆಸುವ ಮೂಲಕ ಗೆಲುವಿಗಾಗಿ ರಣಕಹಳೆ ಮೊಳಗಿಸಿದ್ದಾರೆ.
ಈ ಬಾರಿ ಬಿಜೆಪಿ & ಜೆಡಿಎಸ್ ಮೈತ್ರಿ ಗಟ್ಟಿಯಾಗಿದ್ದು, ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರನ್ನು ಸಂಸದರಾಗಿಸಲು ಮುಖಂಡರು ಹಾಗೂ ಕಾರ್ಯಕರ್ತರು ಒಕ್ಕೊರಲ ವಿಶ್ವಾಸವನ್ನ ತೋರಿಸಿದ್ದಾರೆ. ಟಿಕೆಟ್ ಘೋಷಣೆ ಆದ ನಂತರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ನಡೆಸುತ್ತಿರುವ ಮೈತ್ರಿ ಅಭ್ಯರ್ಥಿ ಡಾ. ಸುಧಾಕರ್ ಅವರು, ಮಿತ್ರ ಪಕ್ಷಗಳ ನಡುವೆ ಸಮನ್ವಯತೆ ಸಾಧಿಸುವ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದಿದ್ದಾರೆ.

ಉಪನಗರಗಳ ನಿರ್ಮಾಣಕ್ಕೆ ಒತ್ತು
ಇದರ ಜತೆ ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲವನ್ನ ಬೆಂಗಳೂರಿಗೆ ಉಪನಗರ ಆಗಿ ಅಭಿವೃದ್ಧಿಯನ್ನು ಮಾಡುವುದು ತಮ್ಮ ಗುರಿ ಎಂದು ಡಾ. ಸುಧಾಕರ್ ಅವರು ಆಶ್ವಾಸನೆ ನೀಡಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ, ಗ್ಯಾರಂಟಿ ಯೋಜನೆ ಅರೆಬರೆಯಾಗಿ ಜಾರಿ ಆಗಿರುವುದರಿಂದ ಅನುದಾನ ಇಲ್ಲದೆ ಅಭಿವೃದ್ಧಿ ಶೂನ್ಯವಾಗಿದೆ ಆದ್ದರಿಂದ ಈ ಬಾರಿಯು ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸಿ ಬಯಲುಸೀಮೆ ಭಾಗದಲ್ಲಿ ಬಿಜೆಪಿ & ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಅಭಿವೃದ್ಧಿಗೆ ಮರು ಚಾಲನೆ ನೀಡಬೇಕೆಂದು ಕೂಡ ಹೇಳಿದ್ದರು.












Click it and Unblock the Notifications